Police Constable Exam: 3,991 ಪೊಲೀಸ್ ಹುದ್ದೆ; 19,396 ಮಂದಿಗೆ ಫಿಸಿಕಲ್ ಟೆಸ್ಟ್, ನಿಮ್ಮ ಜಿಲ್ಲೆಯಲ್ಲಿ ಪರೀಕ್ಷೆ ಎಲ್ಲಿ? ಯಾವಾಗ? | | ACTPnews

ಚಿತ್ರ ಕೃಪೆ: ಕರ್ನಾಟಕ ರಾಜ್ಯ ಪೊಲೀಸ್


Last Updated:

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ದೈಹಿಕ ಪರೀಕ್ಷೆಗಳು ಸೆಪ್ಟೆಂಬರ್ 28ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆರಂಭವಾಗಲಿವೆ. ಒಟ್ಟು 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು ಈ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ಚಿತ್ರ ಕೃಪೆ: ಕರ್ನಾಟಕ ರಾಜ್ಯ ಪೊಲೀಸ್
ಚಿತ್ರ ಕೃಪೆ: ಕರ್ನಾಟಕ ರಾಜ್ಯ ಪೊಲೀಸ್

ಚಿಕ್ಕಮಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ (Karnataka State Police) ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಇದೀಗ ಮತ್ತೊಂದು ಮಹತ್ವದ ಹಂತ ತಲುಪಿದೆ. ಸೆಪ್ಟೆಂಬರ್ 28, 2026ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದೈಹಿಕ ಪರೀಕ್ಷೆಗಳು (Physical Test) ಆರಂಭವಾಗಲಿವೆ. ಒಟ್ಟು 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ವಿಭಾಗವು ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಉಳಿಕೆ ಮೂಲ ವೃಂದ (RPC) ಮತ್ತು ಕಲ್ಯಾಣ ಕರ್ನಾಟಕ ವೃಂದ (KK) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೈಹಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.

3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು

ಈ ನೇಮಕಾತಿಯಲ್ಲಿ ಒಟ್ಟು 3,991 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಉಳಿಕೆ ಮೂಲ ವೃಂದದ 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇನ್ನು ಕಲ್ಯಾಣ ಕರ್ನಾಟಕ ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಹರಾಗಿದ್ದಾರೆ. ಅಂದರೆ ಒಟ್ಟು 19,396 ಅಭ್ಯರ್ಥಿಗಳು ಈಗ ದೈಹಿಕ ಪರೀಕ್ಷೆಯ ಹಂತ ಪ್ರವೇಶಿಸಿದ್ದಾರೆ.

ಬೆಂಗಳೂರಿನಲ್ಲಿ 9,887 ಅಭ್ಯರ್ಥಿಗಳಿಗೆ ಪರೀಕ್ಷೆ

ಬೆಂಗಳೂರು ನಗರ ಘಟಕದಲ್ಲಿ 2,015 ಹುದ್ದೆಗಳಿಗೆ 9,887 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇವರಿಗೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 5ರವರೆಗೆ ಪರೀಕ್ಷೆ ನಡೆಯಲಿದೆ. ಚಾಮರಾಜಪೇಟೆ, ಆಡುಗೋಡಿ ಹಾಗೂ ತನಿಷಂದ್ರದಲ್ಲಿರುವ ವಿವಿಧ ಪರೇಡ್ ಮೈದಾನಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. ಬೆಂಗಳೂರು ನಗರ ಘಟಕಕ್ಕೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದಲ್ಲಿ ನೀಡಿರುವ ಪರೀಕ್ಷಾ ದಿನಾಂಕ ಹಾಗೂ ಸ್ಥಳದ ವಿವರವನ್ನು ಪರಿಶೀಲಿಸಿಕೊಂಡು ನಿಗದಿತ ಸಮಯಕ್ಕೆ ಹಾಜರಾಗಬೇಕು.

ಕೇಂದ್ರ ವಲಯದ ಪರೀಕ್ಷೆ ಬೆಂಗಳೂರಿನಲ್ಲಿ

ಕೇಂದ್ರ ವಲಯಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಜಿಲ್ಲೆ ಹಾಗೂ ರೈಲ್ವೆ ಘಟಕಗಳ 200 ಹುದ್ದೆಗಳಿಗೆ 946 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 3ರವರೆಗೆ ದೈಹಿಕ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರವನ್ನು ಬೆಂಗಳೂರಿನ ಕೋರಮಂಗಲದ ಮಡಿವಾಳ ಮಾರುಕಟ್ಟೆ ಎದುರಿನ 3ನೇ ಬೆಟಾಲಿಯನ್ ಕೆಎಸ್‌ಆರ್‌ಪಿ ಮೈದಾನದಲ್ಲಿ ಏರ್ಪಾಟು ಮಾಡಲಾಗಿದೆ.
ಮೈಸೂರು ವಲಯದಲ್ಲಿ 1,891 ಅಭ್ಯರ್ಥಿಗಳು

ದಕ್ಷಿಣ ವಲಯದಲ್ಲಿ ಮೈಸೂರು ನಗರ, ಮೈಸೂರು ಜಿಲ್ಲೆ, ಹಾಸನ, ಕೊಡಗು, ಚಾಮರಾಜನಗರ ಹಾಗೂ ಮಂಡ್ಯ ಘಟಕಗಳ 395 ಹುದ್ದೆಗಳಿಗೆ 1,891 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇವರಿಗೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 5ರವರೆಗೆ ಮೈಸೂರಿನ ಸಿಟಿ ಆರ್ಮ್ಸ್ ರಿಸರ್ವ್ ಪರೇಡ್ ಮೈದಾನದಲ್ಲಿ ಪರೀಕ್ಷೆ ನಡೆಯಲಿದೆ.

ಮಂಗಳೂರಿನಲ್ಲಿ 1,803 ಅಭ್ಯರ್ಥಿಗಳಿಗೆ ಫಿಸಿಕಲ್ ಟೆಸ್ಟ್

ಪಶ್ಚಿಮ ವಲಯದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹರಾಗಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಅಭ್ಯರ್ಥಿಗಳು ತಮ್ಮ ಪರೀಕ್ಷೆಯ ದಿನಾಂಕ ಮತ್ತು ಕೇಂದ್ರದ ವಿವರಗಳನ್ನು ಪ್ರವೇಶ ಪತ್ರದಲ್ಲಿ ಪರಿಶೀಲಿಸಿಕೊಳ್ಳುವುದು ಅಗತ್ಯ.

ಅಭ್ಯರ್ಥಿಗಳು ಏನು ಗಮನಿಸಬೇಕು?

ಇದನ್ನೂ ಓದಿ: Radio Station: ಕಾಫಿನಾಡಿನ ಎಫ್‌ಎಂ ಸಿಗ್ನಲ್‌ಗೆ ಬಿಗ್‌ ಅಪ್‌ಗ್ರೇಡ್; ದತ್ತಪೀಠದಲ್ಲಿ 10KW ಟ್ರಾನ್ಸ್‌ಮಿಟರ್‌ಗೆ ಪ್ಲಾನ್!

ದೈಹಿಕ ಪರೀಕ್ಷೆಗೆ ತೆರಳುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದಲ್ಲಿ ನೀಡಿರುವ ದಿನಾಂಕ, ಸಮಯ ಮತ್ತು ಪರೀಕ್ಷಾ ಕೇಂದ್ರವನ್ನು ತಪ್ಪದೇ ಪರಿಶೀಲಿಸಬೇಕು. ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಹಾಜರಾಗುವುದು ಹಾಗೂ ನೇಮಕಾತಿ ವಿಭಾಗ ಸೂಚಿಸಿರುವ ಅಗತ್ಯ ದಾಖಲೆಗಳನ್ನು ಕೊಂಡೊಯ್ಯುವುದು ಮುಖ್ಯ. ಸೆ.28ರಿಂದ ಆರಂಭವಾಗಲಿರುವ ಈ ದೈಹಿಕ ಪರೀಕ್ಷೆ ಬಳಿಕ ಮುಂದಿನ ಹಂತದ ನೇಮಕಾತಿ ಪ್ರಕ್ರಿಯೆ ಮುಂದುವರಿಯಲಿದೆ. ಒಟ್ಟಿನಲ್ಲಿ, ಸಾವಿರಾರು ಉದ್ಯೋಗಾಕಾಂಕ್ಷಿಗಳು ಕಾತರದಿಂದ ಕಾಯುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿಯ ಫಿಸಿಕಲ್ ಟೆಸ್ಟ್‌ಗೆ ಈಗ ದಿನಾಂಕ ಫಿಕ್ಸ್ ಆಗಿದೆ. ಸೆ.28ರಿಂದ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಶುರುವಾಗಲಿದ್ದು, 19,396 ಅಭ್ಯರ್ಥಿಗಳು ತಮ್ಮ ಸಾಮರ್ಥ್ಯ ಸಾಬೀತುಪಡಿಸಬೇಕಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed