ಮುಂದಿನ ಕೆಲವು ದಿನಗಳವರೆಗೆ ಉತ್ತರಾಖಂಡದಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಪರ್ವತ ಜಿಲ್ಲೆಗಳಲ್ಲಿ ಭೂಕುಸಿತ, ಬಂಡೆ ಕುಸಿತ ಮತ್ತು ರಸ್ತೆ ಮುಚ್ಚುವ ಅಪಾಯವಿದೆ. ಚಾರ್‌ಧಾಮ್ ಯಾತ್ರೆ ಮಾರ್ಗಗಳಲ್ಲಿ ಪ್ರಯಾಣಿಸುವ ಯಾತ್ರಿಕರು ಹವಾಮಾನ ಅಪ್ಡೇಟ್ಸ್ ನೋಡಿಕೊಂಡು ಮುಂದುವರಿಯಲು ಸೂಚಿಸಲಾಗಿದೆ. ಅನೇಕ ನದಿಗಳು ಮತ್ತು ತೊರೆಗಳಲ್ಲಿ ನೀರಿನ ಮಟ್ಟವೂ ಹೆಚ್ಚಾಗಬಹುದು. ಇನ್ನು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಹಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಪ್ರವಾಹ ಮತ್ತು ಭೂಕುಸಿತದ ಅಪಾಯವನ್ನು ಹೆಚ್ಚಿಸುತ್ತದೆ.














