Last Updated:
ನಟ ರಾಜ್ಪಾಲ್ ಯಾದವ್ (Rajpal Yadav) ಗೆ ಸದ್ಯಕ್ಕೆ ನೆಮ್ಮದಿ ಸಿಕ್ಕಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟನಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಬಾಲಿವುಡ್ ನಟ ರಾಜ್ಪಾಲ್ ಯಾದವ್ (Rajpal Yadav) ಗೆ ಸದ್ಯಕ್ಕೆ ನೆಮ್ಮದಿ ಸಿಕ್ಕಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟನಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಬುಧವಾರದೊಳಗೆ ನ್ಯಾಯಾಲಯದ ರಿಜಿಸ್ಟ್ರಿಯಲ್ಲಿ 5 ಕೋಟಿ ರೂಪಾಯಿ ಠೇವಣಿ ಇಡುವ ಷರತ್ತಿನ ಮೇಲೆ ಜೈಲಿಗೆ ಶರಣಾಗುವುದರಿಂದ ವಿನಾಯಿತಿ ನೀಡಲಾಗಿದೆ. ಈ ಮೂಲಕ ಸೆಪ್ಟೆಂಬರ್ 10ರೊಳಗೆ ಜೈಲಿಗೆ ಶರಣಾಗಬೇಕಿದ್ದ ರಾಜ್ಪಾಲ್ ಯಾದವ್ ಗೆ ತಾತ್ಕಾಲಿಕವಾಗಿ ಉಸಿರಾಡಲು ಅವಕಾಶ ದೊರೆತಿದೆ.














