Last Updated:
ಟಾಲಿವುಡ್ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Mega Power Star Ram Charan) ಆರೋಗ್ಯದ ಕುರಿತು ಮಹತ್ವದ ಅಪ್ಡೇಟ್ ಹೊರಬಿದ್ದಿದೆ. ಪೆದ್ದಿ ಚಿತ್ರದ ಚಿತ್ರೀಕರಣದ ವೇಳೆ ಮಣಿಕಟ್ಟಿಗೆ ಉಂಟಾಗಿದ್ದ ಗಾಯದ ಹಿನ್ನೆಲೆಯಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.
ಟಾಲಿವುಡ್ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Mega Power Star Ram Charan) ಆರೋಗ್ಯದ ಕುರಿತು ಮಹತ್ವದ ಅಪ್ಡೇಟ್ ಹೊರಬಿದ್ದಿದೆ. ಪೆದ್ದಿ ಚಿತ್ರದ ಚಿತ್ರೀಕರಣದ ವೇಳೆ ಮಣಿಕಟ್ಟಿಗೆ ಉಂಟಾಗಿದ್ದ ಗಾಯದ ಹಿನ್ನೆಲೆಯಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಹಲವು ತಿಂಗಳುಗಳಿಂದ ಕಾಡುತ್ತಿದ್ದ ನೋವಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕೊಯಮತ್ತೂರಿನ ಪ್ರಸಿದ್ಧ ಗಂಗಾ ಆಸ್ಪತ್ರೆಯಲ್ಲಿ ಸರ್ಜರಿ ಮಾಡಿಸಿಕೊಳ್ಳಲು ನಟ ನಿರ್ಧರಿಸಿದ್ದಾರೆ.
ರಾಮ್ ಚರಣ್ ಚಿಕಿತ್ಸೆಗಾಗಿ ಹೈದರಾಬಾದ್ನ ಬೇಗಂಪೇಟೆ ವಿಮಾನ ನಿಲ್ದಾಣದಿಂದ ಕೊಯಮತ್ತೂರಿಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿನ ಗಂಗಾ ಆಸ್ಪತ್ರೆಯಲ್ಲಿ ನಾಳೆ ಶಸ್ತ್ರಚಿಕಿತ್ಸೆ ನಡೆಯಲಿದ್ದು, ಕೈ ಮತ್ತು ಮಣಿಕಟ್ಟು ಶಸ್ತ್ರಚಿಕಿತ್ಸೆಯಲ್ಲಿ ಪರಿಣತಿ ಹೊಂದಿರುವ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡಲಿದೆ. ಹಲವು ವೈದ್ಯರ ಸಲಹೆ ಪಡೆದ ಬಳಿಕವೇ ಗಂಗಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
Wishing Mega Power Star #RamCharan all the very best as he undergoes wrist surgery tomorrow at the renowned Ganga Hospital, Coimbatore. ❤️🙏
Megastar #Chiranjeevi, Surekha garu, Upasana, and the family will be with him throughout. Here’s wishing him a smooth procedure and a… pic.twitter.com/mt4kw0lmww— Ramesh Bala (@rameshlaus) July 26, 2026
ರಾಮ್ ಚರಣ್ ಅವರ ಶಸ್ತ್ರಚಿಕಿತ್ಸೆಯ ವೇಳೆ ಕುಟುಂಬದ ಸದಸ್ಯರೂ ಆಸ್ಪತ್ರೆಯಲ್ಲೇ ಇರಲಿದ್ದಾರೆ. ತಂದೆ ಮೆಗಾಸ್ಟಾರ್ ಚಿರಂಜೀವಿ, ತಾಯಿ ಸುರೇಖಾ, ಪತ್ನಿ ಉಪಾಸನಾ ಹಾಗೂ ಕುಟುಂಬದ ಇತರ ಸದಸ್ಯರು ನಟನಿಗೆ ಧೈರ್ಯ ತುಂಬಲಿದ್ದಾರೆ.
ಪೆದ್ದಿ ಚಿತ್ರದ ಚಿತ್ರೀಕರಣದ ಅವಧಿಯಲ್ಲಿ ರಾಮ್ ಚರಣ್ ಎರಡು ಪ್ರಮುಖ ಗಾಯಗಳಿಗೆ ತುತ್ತಾಗಿದ್ದರು. ಈ ವರ್ಷದ ಆರಂಭದಲ್ಲಿ ಅವರಿಗೆ ಹಣೆ ಭಾಗಕ್ಕೆ ತೀವ್ರ ಗಾಯವಾಗಿದ್ದು, ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಬಳಿಕ ಅವರು ಚೇತರಿಸಿಕೊಂಡು ಮತ್ತೆ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಹಣೆ ಗಾಯದಿಂದ ಚೇತರಿಸಿಕೊಂಡ ಬಳಿಕವೂ ಶೂಟಿಂಗ್ ವೇಳೆ ಉಂಟಾದ ಮಣಿಕಟ್ಟಿನ ಉಳುಕಿನ ಸಮಸ್ಯೆ ಅವರನ್ನು ನಿರಂತರವಾಗಿ ಕಾಡುತ್ತಿತ್ತು. ಆರಂಭದಲ್ಲಿ ಔಷಧಿ ಹಾಗೂ ವಿಶ್ರಾಂತಿಯ ಮೂಲಕ ಸಮಸ್ಯೆ ನಿವಾರಿಸಲು ಪ್ರಯತ್ನಿಸಲಾಯಿತಾದರೂ, ಶಸ್ತ್ರಚಿಕಿತ್ಸೆಯೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು.
ರಾಮ್ ಚರಣ್ ಅವರ ಶಸ್ತ್ರಚಿಕಿತ್ಸೆಯ ಸುದ್ದಿ ಹೊರಬಿದ್ದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಆತಂಕ ವ್ಯಕ್ತಪಡಿಸುವ ಜೊತೆಗೆ ಅವರ ಶೀಘ್ರ ಚೇತರಿಕೆಗೆ ಶುಭ ಹಾರೈಕೆಗಳನ್ನು ಸಲ್ಲಿಸುತ್ತಿದ್ದಾರೆ.
Bangalore [Bangalore],Bangalore,Karnataka














