Ram Charan: ವೈರಲ್ ಆಯ್ತು ರಾಮ್ ಚರಣ್ ಆಸ್ಪತ್ರೆ ಫೋಟೋ! ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದ ಬಗ್ಗೆ ದೊಡ್ಡ ಅಪ್‌ಡೇಟ್ | | ACTPnews

ರಾಮ್ ಚರಣ್


Last Updated:

. ತಮಿಳುನಾಡಿನ ಕೊಯಮತ್ತೂರಿನ ಗಂಗಾ ಆಸ್ಪತ್ರೆಯಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಯಲ್ಲಿರುವ ರಾಮ್ ಚರಣ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗಿದೆ.

ರಾಮ್ ಚರಣ್
ರಾಮ್ ಚರಣ್

ಟಾಲಿವುಡ್ ಸ್ಟಾರ್ ರಾಮ್ ಚರಣ್ (Ram Charan) ಅಭಿಮಾನಿಗಳು ಕೊಂಚ ನಿಟ್ಟುಸಿರು ಬಿಡುವ ಸುದ್ದಿಯೊಂದು ಹೊರಬಿದ್ದಿದೆ. ಬಲಗೈ ಮಣಿಕಟ್ಟಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ಈಗ ಚೇತರಿಸಿಕೊಂಡಿದ್ದಾರೆ . ತಮಿಳುನಾಡಿನ ಕೊಯಮತ್ತೂರಿನ ಗಂಗಾ ಆಸ್ಪತ್ರೆಯಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಯಲ್ಲಿರುವ ರಾಮ್ ಚರಣ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗಿದೆ.

ಯಶಸ್ವಿಯಾದ ಮಣಿಕಟ್ಟಿನ ಶಸ್ತ್ರಚಿಕಿತ್ಸೆ

ರಾಮ್ ಚರಣ್ ಬಲಗೈ ಮಣಿಕಟ್ಟಿನ ಗಾಯ ಗಂಭೀರವಾಗಿದ್ದ ಕಾರಣ ಶಸ್ತ್ರಚಿಕಿತ್ಸೆ ಅಗತ್ಯವಾಗಿತ್ತು. ಕೊಯಮತ್ತೂರಿನ ಗಂಗಾ ಆಸ್ಪತ್ರೆಯಲ್ಲಿ ಖ್ಯಾತ ಮೂಳೆ ಮತ್ತು ಕೀಲು ತಜ್ಞ ಡಾ. ಎಸ್. ರಾಜಶೇಖರನ್ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಕೈ ಮತ್ತು ಮಣಿಕಟ್ಟು ಚಿಕಿತ್ಸೆಯಲ್ಲಿ ಪರಿಣತಿ ಹೊಂದಿರುವ ಮಿಯಾಮಿ ಮೂಲದ ಅಂತರರಾಷ್ಟ್ರೀಯ ತಜ್ಞ ಡಾ. ಅಲೆಜಾಂಡ್ರೋ ಬಾಡಿಯಾ ಕೂಡ ಚಿಕಿತ್ಸೆಯಲ್ಲಿ ಭಾಗಿಯಾಗಿದ್ದರು. ವೈದ್ಯರ ಪ್ರಕಾರ, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಚೇತರಿಕೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ.

ಆಸ್ಪತ್ರೆಯ ಫೋಟೋ ವೈರಲ್

ಶಸ್ತ್ರಚಿಕಿತ್ಸೆಯ ಬಳಿಕ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ರಾಮ್ ಚರಣ್ ಅವರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೋಟೋದಲ್ಲಿ ಅವರೊಂದಿಗೆ ತಂದೆ ಚಿರಂಜೀವಿ, ತಾಯಿ ಸುರೇಖಾ ಹಾಗೂ ಪತ್ನಿ ಉಪಾಸನಾ ಕೊನಿಡೇಲ ಇದ್ದಾರೆ.

ಇದನ್ನೂ ಓದಿ: Pooja Hegde: 4000 ಸ್ಕ್ವೇರ್ ಫೀಟ್, ಪೂಜಾ ಹೆಗ್ಡೆಯ ಅರಮನೆಯಂತಹ ಮನೆ ನೋಡಿದ್ದೀರಾ?

ಬುಚ್ಚಿ ಬಾಬು ಸನಾ ನಿರ್ದೇಶನದ ಪೆದ್ದಿ ಚಿತ್ರದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ರಾಮ್ ಚರಣ್ ಅವರ ಮಣಿಕಟ್ಟಿಗೆ ಗಾಯವಾಗಿತ್ತು. ಕುಸ್ತಿ ದೃಶ್ಯ ಚಿತ್ರೀಕರಿಸುವಾಗ ಉಂಟಾದ ಈ ಗಾಯದ ನಡುವೆಯೂ ಅವರು ಶೂಟಿಂಗ್ ನಿಲ್ಲಿಸದೇ ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದರು. ಚಿತ್ರದ ಪ್ರಚಾರದ ಕೆಲಸಗಳಲ್ಲೂ ಅವರು ಭಾಗವಹಿಸಿದ್ದರು. ನಟನ ಈ ವೃತ್ತಿಪರ ಬದ್ಧತೆಯನ್ನು ಚಿತ್ರತಂಡ ಹಾಗೂ ಚಿತ್ರರಂಗದ ಹಲವರು ಮೆಚ್ಚಿಕೊಂಡಿದ್ದಾರೆ.

ಈ ವರ್ಷದ ಆರಂಭದಲ್ಲಿಯೇ ಪೆದ್ದಿ ಚಿತ್ರದ ಸೆಟ್‌ನಲ್ಲಿ ರಾಮ್ ಚರಣ್ ಅವರ ಹಣೆಗೆ ಗಂಭೀರ ಗಾಯವಾಗಿತ್ತು. ಆ ವೇಳೆ ಹೈದರಾಬಾದ್‌ನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ನಡೆದಿತ್ತು. ಆಗಲೇ ಮಣಿಕಟ್ಟಿಗೂ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ಸೂಚಿಸಿದ್ದರೂ, ಸಿನಿಮಾ ಕೆಲಸಗಳಿಗೆ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಅವರು ಅದನ್ನು ಮುಂದೂಡಿದ್ದರು. ಇದೀಗ ಚಿತ್ರದ ಪ್ರಮುಖ ಕೆಲಸಗಳು ಪೂರ್ಣಗೊಂಡ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed