Ramayana: ‘ರಾಮಾಯಣ’ ಟ್ರೈಲರ್ ರಿಲೀಸ್ ಡೇಟ್ ಔಟ್! ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ | | ACTPnews

ರಾಮಾಯಣ


Last Updated:

ರಾಮಾಯಣ ಚಿತ್ರದ ಟ್ರೈಲರ್ ಜುಲೈ 24, 2026ರಂದು ವಿಶ್ವದಾದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.

ರಾಮಾಯಣ
ರಾಮಾಯಣ

ಭಾರತೀಯ ಚಿತ್ರರಂಗದಲ್ಲಿ ಅತ್ಯಂತ ನಿರೀಕ್ಷೆ ಮೂಡಿಸಿರುವ ಸಿನಿಮಾಗಳ ಪಟ್ಟಿಯಲ್ಲಿ ‘ರಾಮಾಯಣ’ (Ramayana) ಮುಂಚೂಣಿಯಲ್ಲಿದೆ. ನಿರ್ದೇಶಕ ನಿತೇಶ್ ತಿವಾರಿ (Nitesh Tiwari) ಅವರ ಕನಸಿನ ಈ ಮೆಗಾ ಪ್ರಾಜೆಕ್ಟ್ ಬಗ್ಗೆ ಪ್ರತಿಯೊಂದು ಹೊಸ ಅಪ್‌ಡೇಟ್ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸುತ್ತಿದೆ. ಇದೀಗ ಈ ಚಿತ್ರದ ಟ್ರೈಲರ್ ಜುಲೈ 24, 2026ರಂದು ವಿಶ್ವದಾದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.

ರಾಮಾಯಣ ಕೇವಲ ಒಂದು ಸಿನಿಮಾ ಮಾತ್ರವಲ್ಲ, ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿರುವ ಮಹಾಕಾವ್ಯವನ್ನು ವಿಶ್ವದ ಸಿನಿಪ್ರೇಕ್ಷಕರಿಗೆ ಹೊಸ ರೀತಿಯಲ್ಲಿ ಪರಿಚಯಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವಾಗಿದೆ. ಅತ್ಯಾಧುನಿಕ ತಂತ್ರಜ್ಞಾನ, ಅದ್ದೂರಿ ಸೆಟ್‌ಗಳು, ಭರ್ಜರಿ ದೃಶ್ಯ ವಿನ್ಯಾಸ ಮತ್ತು ಅಂತರರಾಷ್ಟ್ರೀಯ ಮಟ್ಟದ ನಿರ್ಮಾಣ ಗುಣಮಟ್ಟದೊಂದಿಗೆ ಈ ಚಿತ್ರವನ್ನು ರೂಪಿಸಲಾಗಿದೆ.

ಇನ್ನು ಈ ಚಿತ್ರವನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡುವ ಯೋಜನೆ ರೂಪಿಸಲಾಗಿದ್ದು, ಪ್ರತಿಯೊಂದು ಭಾಗವೂ ಪ್ರೇಕ್ಷಕರಿಗೆ ವಿಭಿನ್ನ ಅನುಭವ ನೀಡುವಂತೆ ನಿರ್ಮಾಣ ಕಾರ್ಯ ನಡೆದಿದೆ.

ಇದರ ಜೊತೆಗೆ ಸನ್ನಿ ಡಿಯೋಲ್ ಹನುಮಂತನಾಗಿ ಕಾಣಿಸಿಕೊಳ್ಳಲಿದ್ದು, ರವಿ ದುಬೆ ಲಕ್ಷ್ಮಣನ ಪಾತ್ರದಲ್ಲಿ ನಟಿಸಿದ್ದಾರೆ.ಹಾಗೆಯೇ ರಾಮಾಯಣ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಚಿತ್ರಗಳಲ್ಲಿ ಒಂದಾಗಿದೆ. ಸುಮಾರು 4,000 ಕೋಟಿ ರೂಪಾಯಿಗಳ ಬೃಹತ್ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ ಎನ್ನಲಾಗುತ್ತಿದೆ.

ಐಮ್ಯಾಕ್ಸ್ ಮಾದರಿಯ ದೊಡ್ಡ ಪರದೆಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿರುವುದರಿಂದ ದೃಶ್ಯ ವೈಭವವನ್ನು ಮತ್ತಷ್ಟು ಅದ್ಭುತವಾಗಿ ಅನುಭವಿಸಲು ಅವಕಾಶ ದೊರೆಯಲಿದೆ. ಭಾರತದ ಜೊತೆಗೆ ಹಲವು ದೇಶಗಳಲ್ಲಿ ಏಕಕಾಲದಲ್ಲಿ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯೂ ಇದೆ.

ಚಿತ್ರದ ಪೋಸ್ಟರ್ ಮತ್ತು ಮೊದಲ ಲುಕ್ ಈಗಾಗಲೇ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿವೆ. ವಿಶೇಷವಾಗಿ ಯಶ್ ಅವರ ರಾವಣನ ಪಾತ್ರ, ರಣಬೀರ್ ಕಪೂರ್ ಅವರ ಶ್ರೀರಾಮನ ಅವತಾರ ಹಾಗೂ ಸಾಯಿ ಪಲ್ಲವಿ ಅವರ ಸೀತೆಯ ಪಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿವೆ.

ರಾಮಾಯಣ ಸಿನಿಮಾ ಭಾರತೀಯ ಚಿತ್ರರಂಗದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಪೌರಾಣಿಕ ಕಥೆಯನ್ನು ಜಾಗತಿಕ ಮಟ್ಟದಲ್ಲಿ ಹೊಸ ತಂತ್ರಜ್ಞಾನ ಮತ್ತು ಅದ್ದೂರಿ ನಿರ್ಮಾಣದೊಂದಿಗೆ ಪರಿಚಯಿಸುವ ಈ ಪ್ರಯತ್ನ ಭಾರತೀಯ ಸಿನಿಮಾದ ಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿರೀಕ್ಷೆ ಮೂಡಿಸಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed