Ramayana: ದೀಪಾವಳಿಗೂ ಮುನ್ನವೇ ‘ರಾಮಾಯಣ’ ಎಂಟ್ರಿ; ರಿಲೀಸ್ ಡೇಟ್‌ನಲ್ಲಿ ಮಹತ್ವದ ಬದಲಾವಣೆ! | | ACTPnews

News18


Last Updated:

‘ರಾಮಾಯಣ’ ಸಿನಿಮಾ ನವೆಂಬರ್ 6ರಂದು ಬಿಡುಗಡೆಯಾಗಲಿದೆ ಎಂಬ ಮಾಹಿತಿ ಈ ಹಿಂದೆ ಹರಿದಾಡಿತ್ತು. ಆದರೆ ಇದೀಗ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂಬ ವರದಿಗಳು ಕೇಳಿಬರುತ್ತಿವೆ.

News18
News18

ನಿತೇಶ್ ತಿವಾರಿ (Nitesh Tiwari) ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಿಸುತ್ತಿದೆ. ಭಾರತೀಯ ಚಿತ್ರರಂಗದ ಅತ್ಯಂತ ಮಹತ್ವಾಕಾಂಕ್ಷೆಯ ಪೌರಾಣಿಕ ಸಿನಿಮಾಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಈ ಚಿತ್ರವನ್ನು ಜಾಗತಿಕ ಮಟ್ಟದಲ್ಲಿ ಪ್ರೇಕ್ಷಕರ ಮುಂದೆ ತರಲು ನಿರ್ಮಾಪಕ ನಮಿತ್ ಮಲ್ಲೋತ್ರಾ ದೊಡ್ಡ ಪ್ರಮಾಣದಲ್ಲಿ ಸಿದ್ಧತೆ ನಡೆಸುತ್ತಿದ್ದಾರೆ. ಚಿತ್ರದ ದೃಶ್ಯ ವೈಭವ, ವಿಎಫ್‌ಎಕ್ಸ್ ಮತ್ತು ತಾಂತ್ರಿಕ ಕೆಲಸಗಳ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ನಡೆಯುತ್ತಿದೆ.

‘ರಾಮಾಯಣ’ ಸಿನಿಮಾವನ್ನು ಭಾರತೀಯ ಮಾರುಕಟ್ಟೆಗೆ ಮಾತ್ರ ಸೀಮಿತಗೊಳಿಸದೆ ವಿಶ್ವಮಟ್ಟದಲ್ಲಿ ಬಿಡುಗಡೆ ಮಾಡುವ ಉದ್ದೇಶ ಚಿತ್ರತಂಡಕ್ಕಿದೆ. ಅದಕ್ಕಾಗಿ ಸಿನಿಮಾದ ವಿಎಫ್‌ಎಕ್ಸ್ ಸೇರಿದಂತೆ ಹಲವು ಪ್ರಮುಖ ವಿಭಾಗಗಳ ಕೆಲಸವನ್ನು ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ನಡೆಸಲಾಗುತ್ತಿದೆ. ನಿರ್ಮಾಪಕ ನಮಿತ್ ಮಲ್ಲೋತ್ರಾ ಕಳೆದ ಕೆಲವು ವರ್ಷಗಳಿಂದ ಈ ಮಹತ್ವಾಕಾಂಕ್ಷೆಯ ಯೋಜನೆಯ ಮೇಲೆ ಕೆಲಸ ಮಾಡುತ್ತಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ಚಿತ್ರದ ಪ್ರಮುಖ ಪಾತ್ರಗಳ ಪೋಸ್ಟರ್‌ಗಳು ಅಭಿಮಾನಿಗಳ ಗಮನ ಸೆಳೆದಿವೆ. ಅದರ ಬೆನ್ನಲ್ಲೇ ಸಿನಿಮಾದ ಹಾಡುಗಳನ್ನೂ ಬಿಡುಗಡೆ ಮಾಡಲಾಗಿದ್ದು, ಹಾಡುಗಳಲ್ಲಿ ಕಾಣಿಸಿಕೊಂಡಿರುವ ದೃಶ್ಯ ವೈಭವ ಮತ್ತು ವಿಎಫ್‌ಎಕ್ಸ್ ಬಗ್ಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಬಿಡುಗಡೆ ದಿನಾಂಕದಲ್ಲಿ ಬದಲಾವಣೆ?

‘ರಾಮಾಯಣ’ ಸಿನಿಮಾ ನವೆಂಬರ್ 6ರಂದು ಬಿಡುಗಡೆಯಾಗಲಿದೆ ಎಂಬ ಮಾಹಿತಿ ಈ ಹಿಂದೆ ಹರಿದಾಡಿತ್ತು. ಆದರೆ ಇದೀಗ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂಬ ವರದಿಗಳು ಕೇಳಿಬರುತ್ತಿವೆ. ನವೆಂಬರ್ 6ರ ಬದಲಿಗೆ ಒಂದು ದಿನ ಮುಂಚಿತವಾಗಿ, ಅಂದರೆ ನವೆಂಬರ್ 5ರಂದು ಸಿನಿಮಾವನ್ನು ಚಿತ್ರಮಂದಿರಕ್ಕೆ ತರಲು ನಿರ್ಮಾಪಕರು ಯೋಜಿಸುತ್ತಿದ್ದಾರೆ ಎನ್ನಲಾಗಿದೆ.

ಈ ಹೊಸ ದಿನಾಂಕಕ್ಕೆ ಅಂತಿಮ ಅನುಮೋದನೆ ದೊರೆತ ಬಳಿಕ ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆಯಿದೆ. ಮೂಲವೊಂದನ್ನು ಉಲ್ಲೇಖಿಸಿರುವ ವರದಿಯ ಪ್ರಕಾರ, ನವೆಂಬರ್ 5ರಂದು ಸಿನಿಮಾ ಬಿಡುಗಡೆ ಮಾಡುವ ಬಗ್ಗೆ ಸಂಬಂಧಪಟ್ಟವರ ನಡುವೆ ಬಹುತೇಕ ಒಮ್ಮತ ಮೂಡಿದೆ ಎನ್ನಲಾಗಿದೆ.

ಭಾರತ-ವಿದೇಶಗಳಲ್ಲಿ ಒಂದೇ ದಿನ ಬಿಡುಗಡೆ?

‘ರಾಮಾಯಣ’ ಸಿನಿಮಾದ ಬಿಡುಗಡೆ ವಿಚಾರದಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಈ ಬಾರಿ ಭಾರತ ಮತ್ತು ವಿದೇಶಗಳಲ್ಲಿ ಒಂದೇ ದಿನ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯನ್ನು ನಿರ್ಮಾಪಕರು ಹೊಂದಿದ್ದಾರೆ ಎನ್ನಲಾಗಿದೆ. ಈ ಮೂಲಕ ವಿಶ್ವದ ವಿವಿಧ ಭಾಗಗಳಲ್ಲಿರುವ ಭಾರತೀಯ ಪ್ರೇಕ್ಷಕರು ಒಂದೇ ದಿನ ರಾಮಾಯಣದ ಕಥೆಯನ್ನು ದೊಡ್ಡ ಪರದೆಯಲ್ಲಿ ಕಣ್ತುಂಬಿಕೊಳ್ಳುವ ಅವಕಾಶ ಪಡೆಯಬಹುದು.

ಈ ಹಿಂದೆ ವಿದೇಶಗಳಲ್ಲಿ ಭಾರತಕ್ಕಿಂತ ಎರಡು ದಿನ ಮುಂಚಿತವಾಗಿ ಚಿತ್ರ ಬಿಡುಗಡೆಯಾಗಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಇದೀಗ ಭಾರತ ಮತ್ತು ವಿದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡುವ ಯೋಜನೆ ರೂಪಿಸಲಾಗಿದೆ ಎನ್ನಲಾಗುತ್ತಿದೆ. ಇದಕ್ಕೆ ಅಂತಿಮ ಅನುಮೋದನೆ ದೊರೆತ ನಂತರವಷ್ಟೇ ಬಿಡುಗಡೆಯ ದಿನಾಂಕದ ಕುರಿತು ಅಧಿಕೃತ ಸ್ಪಷ್ಟನೆ ಸಿಗಲಿದೆ.

ಪ್ರಚಾರಕ್ಕೆ ಚಾಲನೆ ನೀಡಿದ ಚಿತ್ರತಂಡ

ಚಿತ್ರದ ಪ್ರಮುಖ ಪಾತ್ರಗಳ ಪೋಸ್ಟರ್‌ಗಳನ್ನು ಬಿಡುಗಡೆ ಮಾಡುವ ಮೂಲಕ ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ದೇಶದ ವಿವಿಧ ಭಾಗಗಳಲ್ಲಷ್ಟೇ ಅಲ್ಲದೆ ವಿದೇಶಗಳಲ್ಲಿಯೂ ಸಿನಿಮಾದ ಪ್ರಚಾರವನ್ನು ದೊಡ್ಡ ಮಟ್ಟದಲ್ಲಿ ನಡೆಸಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಸಿನಿಮಾ ಬಿಡುಗಡೆಯಾಗಲು ಇನ್ನೂ ಸಮಯವಿದ್ದರೂ, ಈಗಿನಿಂದಲೇ ಚಿತ್ರದ ಕುರಿತು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.

ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ

‘ರಾಮಾಯಣ’ ಸಿನಿಮಾದಲ್ಲಿ ಬಾಲಿವುಡ್ ನಟ ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟಿ ಸಾಯಿ ಪಲ್ಲವಿ ಸೀತೆಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಕನ್ನಡದ ಜನಪ್ರಿಯ ನಟ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಚಿತ್ರದ ಮತ್ತೊಂದು ಪ್ರಮುಖ ಆಕರ್ಷಣೆಯಾಗಿದೆ. ರವಿ ದುಬೆ ಲಕ್ಷ್ಮಣನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಹೀಗಾಗಿ ರಾಮಾಯಣ ಸಿನಿಮಾ ಬಿಡುಗಡೆಯಾಗುವ ದಿನಕ್ಕಾಗಿ ಸಿನಿಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಅದರಲ್ಲೂ ಬಿಡುಗಡೆ ದಿನಾಂಕ ನವೆಂಬರ್ 5ಕ್ಕೆ ಬದಲಾಗುತ್ತದೆಯೇ ಅಥವಾ ಈ ಹಿಂದೆ ಹೇಳಲಾಗಿದ್ದ ನವೆಂಬರ್ 6ರಂದೇ ಸಿನಿಮಾ ತೆರೆಗೆ ಬರುತ್ತದೆಯೇ ಎಂಬುದರ ಬಗ್ಗೆ ಕುತೂಹಲ ಮೂಡಿದೆ. ಅಂತಿಮ ನಿರ್ಧಾರದ ಬಳಿಕ ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಬೇಕಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed