Ramayana Trailer: ‘ರಾವಣ’ನಾಗಿ ರಾಕಿಂಗ್ ಸ್ಟಾರ್ ಅಬ್ಬರ, ರಾಮಸೀತಾ ವೈಭನ ನಯನ ಮನೋಹರ! ಬ್ರಾಹ್ಮಿಮುಹೂರ್ತದಲ್ಲಿ ‘ರಾಮಾಯಣ’ ಟ್ರೇಲರ್ ನೋಡಿ ಫ್ಯಾನ್ಸ್ ಥ್ರಿಲ್ | | ACTPnews

ರಾಮಾಯಣ


Last Updated:

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಸಿನಿಮಾ ‘ರಾಮಾಯಣ’ದ ಟ್ರೇಲರ್ (Ramayana Trailer) ಕೊನೆಗೂ ಬಿಡುಗಡೆಯಾಗಿದೆ. ಹಲವು ದಿನಗಳಿಂದ ಈ ಟ್ರೇಲರ್‌ಗಾಗಿ ಕಾಯುತ್ತಿದ್ದ ಸಿನಿಪ್ರಿಯರಿಗೆ ಚಿತ್ರತಂಡ ಭರ್ಜರಿ ಉಡುಗೊರೆಯನ್ನೇ ನೀಡಿದೆ.

ರಾಮಾಯಣ
ರಾಮಾಯಣ

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಸಿನಿಮಾ ‘ರಾಮಾಯಣ’ದ ಟ್ರೇಲರ್ (Ramayana Trailer) ಕೊನೆಗೂ ಬಿಡುಗಡೆಯಾಗಿದೆ. ಹಲವು ದಿನಗಳಿಂದ ಈ ಟ್ರೇಲರ್‌ಗಾಗಿ ಕಾಯುತ್ತಿದ್ದ ಸಿನಿಪ್ರಿಯರಿಗೆ ಚಿತ್ರತಂಡ ಭರ್ಜರಿ ಉಡುಗೊರೆಯನ್ನೇ ನೀಡಿದೆ. ಬ್ರಾಹ್ಮಿ ಮುಹೂರ್ತದ ವಿಶೇಷ ಸಂದರ್ಭದಲ್ಲಿ ವಿಶ್ವದಾದ್ಯಂತ ಟ್ರೇಲರ್ ಅನಾವರಣಗೊಂಡಿದ್ದು, ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬ್ರಾಹ್ಮಿ (ಬ್ರಹ್ಮ) ಮುಹೂರ್ತದಲ್ಲಿ ಟ್ರೇಲರ್ ಬಿಡುಗಡೆ

ಚಿತ್ರತಂಡ ಮೊದಲೇ ಘೋಷಿಸಿದ್ದಂತೆ ಟ್ರೇಲರ್ ಅನ್ನು ಬ್ರಾಹ್ಮಿ ಮುಹೂರ್ತದಲ್ಲಿ ಬಿಡುಗಡೆ ಮಾಡಲಾಗಿದೆ. ನಿರ್ಮಾಪಕ ನಮಿತ್ ಮಲ್ಹೋತ್ರಾ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟರ್ ಹಂಚಿಕೊಂಡು ಈ ನಿರ್ಧಾರವನ್ನು ಪ್ರಕಟಿಸಿದ್ದರು. ‘ರಾಮಾಯಣ’ದಂತಹ ಪೌರಾಣಿಕ ಕಥೆಗೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವ ಇರುವ ಕಾರಣ,  ಬ್ರಾಹ್ಮಿ ಮುಹೂರ್ತದಲ್ಲೇ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ವಿಶೇಷ ಸಂದೇಶ ನೀಡಲಾಗಿದೆ.

ಟ್ರೇಲರ್‌ಗೆ ಭರ್ಜರಿ ಪ್ರತಿಕ್ರಿಯೆ

ಟ್ರೇಲರ್ ಬಿಡುಗಡೆಯಾದ ತಕ್ಷಣವೇ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಸುರಿಮಳೆಗೈದಿದ್ದಾರೆ. ಅನೇಕರು ‘ರಾಮಾಯಣ’ ಕೇವಲ ಒಂದು ಸಿನಿಮಾ ಅಲ್ಲ, ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಮಹಾಕಾವ್ಯವನ್ನು ಹೊಸ ತಲೆಮಾರಿಗೆ ಹಾಗೂ ವಿಶ್ವದ ಸಿನಿಪ್ರೇಕ್ಷಕರಿಗೆ ಅದ್ದೂರಿಯಾಗಿ ಪರಿಚಯಿಸುವ  ಪ್ರಯತ್ನ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅದ್ದೂರಿ ದೃಶ್ಯ ವೈಭವಕ್ಕೆ ಫಿದಾ ಆದ ಸಿನಿಪ್ರಿಯರು

ಟ್ರೇಲರ್‌ನಲ್ಲಿ ಅತ್ಯಾಧುನಿಕ ತಂತ್ರಜ್ಞಾನ, ಭವ್ಯ ಸೆಟ್‌ಗಳು, ಮನಮೋಹಕ ದೃಶ್ಯ ವಿನ್ಯಾಸ ಮತ್ತು ಅತ್ಯುನ್ನತ ಮಟ್ಟದ ಗ್ರಾಫಿಕ್ಸ್ ಗಮನ ಸೆಳೆಯುತ್ತವೆ. ಪ್ರತಿ ದೃಶ್ಯವನ್ನೂ ಅದ್ದೂರಿಯಾಗಿ ರೂಪಿಸಿರುವ ಚಿತ್ರತಂಡದ ಪ್ರಯತ್ನಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ರಾವಣನಾಗಿ ಯಶ್‌ಗೆ ಭರ್ಜರಿ ಮೆಚ್ಚುಗೆ

ಟ್ರೇಲರ್‌ನ ಪ್ರಮುಖ ಆಕರ್ಷಣೆಯಾಗಿ ನಮ್ಮ ಕನ್ನಡದ ನಟ ಯಶ್ ಕಾಣಿಸಿಕೊಂಡಿದ್ದಾರೆ. ರಾವಣನ ಪಾತ್ರದಲ್ಲಿ ಅವರ ಲುಕ್, ಹಾಗೂ ಸ್ಕ್ರೀನ್ ಪ್ರೆಸೆನ್ಸ್ ಅಭಿಮಾನಿಗಳನ್ನು ಸೆಳೆದಿದೆ. ಕನ್ನಡಿಗರು ಮಾತ್ರವಲ್ಲದೆ ದೇಶದ ವಿವಿಧ ಭಾಗಗಳ ಸಿನಿಪ್ರಿಯರೂ ಯಶ್ ಅವರ ಪಾತ್ರವನ್ನು ಮೆಚ್ಚಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಸ್ಟಾರ್ ತಾರಾಗಣದ ಸಿನಿಮಾ

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನಾಗಿ ಅಭಿನಯಿಸಿದ್ದಾರೆ. ಜೊತೆಗೆ ಸನ್ನಿ ಡಿಯೋಲ್, ರವಿ ದುಬೆ, ರಕುಲ್ ಪ್ರೀತ್ ಸಿಂಗ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ತಾರಾಬಳಗವೇ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ದೀಪಾವಳಿಗೆ ಅದ್ಧೂರಿ ಬಿಡುಗಡೆ

ಭಾರಿ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ‘ರಾಮಾಯಣ’ ಸಿನಿಮಾ ಈ ವರ್ಷದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಟ್ರೇಲರ್‌ಗೆ ದೊರೆತಿರುವ ಉತ್ತಮ ಪ್ರತಿಕ್ರಿಯೆಯಿಂದ ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುವ ವಿಶ್ವಾಸ ಅಭಿಮಾನಿಗಳಲ್ಲಿ ಮೂಡಿದೆ.

ಕನ್ನಡ ಸುದ್ದಿ/ ನ್ಯೂಸ್/ಮನರಂಜನೆ/

Ramayana Trailer: ‘ರಾವಣ’ನಾಗಿ ರಾಕಿಂಗ್ ಸ್ಟಾರ್ ಅಬ್ಬರ, ರಾಮಸೀತಾ ವೈಭನ ನಯನ ಮನೋಹರ! ಬ್ರಾಹ್ಮಿಮುಹೂರ್ತದಲ್ಲಿ ‘ರಾಮಾಯಣ’ ಟ್ರೇಲರ್ ನೋಡಿ ಫ್ಯಾನ್ಸ್ ಥ್ರಿಲ್



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed