Last Updated:
ಆರೋಗ್ಯದಲ್ಲಿ ಸುಧಾರಣೆ ಕಂಡಿರುವುದಾಗಿ ತಿಳಿಸಿರುವ ರಶ್ಮಿಕಾ, ಶೀಘ್ರದಲ್ಲೇ ಮತ್ತೆ ಕೆಲಸಕ್ಕೆ ಮರಳಲು ಸಜ್ಜಾಗಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಅಭಿಮಾನಿಗಳ ಗಮನ ಸೆಳೆದಿದೆ.
ರಶ್ಮಿಕಾ ಮಂದಣ್ಣ (Rashmika Mandanna) ಅಭಿಮಾನಿಗಳಿಗೆ ಇದೀಗ ಗುಡ್‌ನ್ಯೂಸ್ ಸಿಕ್ಕಿದೆ. ಮೈಸಾ ಸಿನಿಮಾದ ಚಿತ್ರೀಕರಣದ ವೇಳೆ ಸೊಂಟದ ಭಾಗದಲ್ಲಿ ಗಾಯಗೊಂಡಿದ್ದ ನಟಿ, ಕಳೆದ ಕೆಲವು ವಾರಗಳಿಂದ ವಿಶ್ರಾಂತಿ ಪಡೆದು ಚೇತರಿಸಿಕೊಳ್ಳುತ್ತಿದ್ದರು. ಇದೀಗ ಆರೋಗ್ಯದಲ್ಲಿ ಸುಧಾರಣೆ ಕಂಡಿರುವುದಾಗಿ ತಿಳಿಸಿರುವ ರಶ್ಮಿಕಾ, ಶೀಘ್ರದಲ್ಲೇ ಮತ್ತೆ ಕೆಲಸಕ್ಕೆ ಮರಳಲು ಸಜ್ಜಾಗಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಅಭಿಮಾನಿಗಳ ಗಮನ ಸೆಳೆದಿದೆ.














