Last Updated:
ಕನ್ನಡ ಚಿತ್ರರಂಗದ ಹಿರಿಯ ನಟ ಕ್ರೇಜಿಸ್ಟಾರ್ ರವಿಚಂದ್ರನ್ (Crazy Star Ravichandran) ಇಂದು (ಬುಧವಾರ) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರನ್ನು ಭೇಟಿ ಮಾಡಿರುವುದು ಗಮನ ಸೆಳೆದಿದೆ.
ಕನ್ನಡ ಚಿತ್ರರಂಗದ ಹಿರಿಯ ನಟ ಕ್ರೇಜಿಸ್ಟಾರ್ ರವಿಚಂದ್ರನ್ (Crazy Star Ravichandran) ಇಂದು (ಬುಧವಾರ) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರನ್ನು ಭೇಟಿ ಮಾಡಿರುವುದು ಗಮನ ಸೆಳೆದಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿದ ರವಿಚಂದ್ರನ್, ಕೆಲಕಾಲ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿವೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವಿನ ಸ್ನೇಹ ಇಂದಿನದ್ದಲ್ಲ. ಸುಮಾರು 40 ರಿಂದ 50 ವರ್ಷಗಳಿಗೂ ಹೆಚ್ಚು ಕಾಲದ ಸ್ನೇಹವನ್ನು ಇಬ್ಬರೂ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಒಟ್ಟಿಗೆ ಓದಿದ ಸಹಪಾಠಿಗಳಾಗಿದ್ದ ಇವರು, ತಮ್ಮ ತಮ್ಮ ಕ್ಷೇತ್ರಗಳಲ್ಲಿ ದೊಡ್ಡ ಸಾಧನೆ ಮಾಡಿದರೂ ಬಾಲ್ಯದ ಆತ್ಮೀಯತೆಯನ್ನು ಇಂದಿಗೂ ಹಾಗೆಯೇ ಉಳಿಸಿಕೊಂಡಿದ್ದಾರೆ.
ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿದ ರವಿಚಂದ್ರನ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೂಗುಚ್ಛ ನೀಡಿ ಶುಭಾಶಯ ಕೋರಿದರು. ಬಳಿಕ ಇಬ್ಬರೂ ಕೆಲ ಸಮಯ ಆತ್ಮೀಯವಾಗಿ ಮಾತುಕತೆ ನಡೆಸಿದರು. ಆದರೆ ಈ ಭೇಟಿಯ ಉದ್ದೇಶವೇನು ಎಂಬುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ.
ಈ ಭೇಟಿಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ಫೋಟೋ ಹಂಚಿಕೊಂಡು, ‘ಕಾಲ ಉರುಳಿದರೂ ಕಳೆಗುಂದದ ಸ್ನೇಹ ನಮ್ಮದು…’ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ಪಡೆಯುತ್ತಿದ್ದು, ಇಬ್ಬರ ಸ್ನೇಹದ ಬಗ್ಗೆ ಅನೇಕರು ಮೆಚ್ಚುಗೆಯ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ.
ರಾಜಕೀಯ ಮತ್ತು ಸಿನಿಮಾ ಕ್ಷೇತ್ರದ ಇಬ್ಬರು ಪ್ರಮುಖ ವ್ಯಕ್ತಿಗಳು ಹಲವು ದಶಕಗಳ ಸ್ನೇಹವನ್ನು ಉಳಿಸಿಕೊಂಡಿರುವುದು ಅಭಿಮಾನಿಗಳ ಗಮನ ಸೆಳೆದಿದ್ದು, ಅವರ ಆತ್ಮೀಯ ಭೇಟಿಗೆ ಹಲವರು ಶುಭಾಶಯ ತಿಳಿಸಿದ್ದಾರೆ.
Bangalore [Bangalore],Bangalore,Karnataka














