Rishabh Shetty: ಕರಾವಳಿ, ಮಲೆನಾಡು ಪ್ರವಾಸೋದ್ಯಮಕ್ಕೆ ರಿಷಬ್ ಶೆಟ್ಟಿ ಅಂಬಾಸಿಡರ್! ಸಿಎಂ ಡಿಕೆಶಿ ಸಭೆಯಲ್ಲಿ ಮಹತ್ವದ ನಿರ್ಧಾರ | | ACTPnews

ರಿಷಬ್ ಶೆಟ್ಟಿ


Last Updated:

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯನ್ನು ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮದ ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ

ಕರಾವಳಿ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ (Rishabh Shetty) ಶೆಟ್ಟಿಯನ್ನು ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮದ ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಸಭೆಯಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ಕರಾವಳಿ ಭಾಗದ ಜನಪದ ಕಲೆ, ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅದರ ಜೊತೆಗೆ ಸಿನಿಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಿದರೆ ಕರ್ನಾಟಕ, ಕೇರಳ ಹಾಗೂ ಗೋವಾ ಚಿತ್ರರಂಗಗಳಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಅವರು ಹೇಳಿದ್ದಾರೆ.

ಈ ಸಮಸ್ಯೆಗಳ ಕುರಿತು 15 ರಿಂದ 20 ದಿನಗಳೊಳಗೆ ಸಮಗ್ರ ವರದಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸದ್ಯ ಸರ್ಕಾರ ಅನುಮೋದಿಸಿರುವ 45 ಪ್ರವಾಸೋದ್ಯಮ ಯೋಜನೆಗಳ ಮೂಲಕ ಸುಮಾರು 4500 ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ. ಆದರೆ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ.

ಸ್ಥಳೀಯ ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಸ್ವಾವಲಂಬನೆ ಹಾಗೂ ಸಣ್ಣ ಉದ್ಯಮಗಳಿಗೆ ಉತ್ತೇಜನ ನೀಡುವ ಮೂಲಕ ಕರಾವಳಿ ಭಾಗದ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed