Road Accident: ಕಾರು ಟ್ರೇಲರ್‌ಗೆ ಡಿಕ್ಕಿ ಹೊಡೆದು ವೈದ್ಯ ದಂಪತಿ, ಅಪ್ರಾಪ್ತ ಮಕ್ಕಳು ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಸಂತ್ರಸ್ತರು ಮೂಲತಃ ಜುನ್ಜುನುವಿನ ಸೂರಜ್‌ಗಢದವರಾಗಿದ್ದು, ಜೈಪುರದಲ್ಲಿ ವಾಸಿಸುತ್ತಿದ್ದರು. ಕುಟುಂಬವು ಛಬ್ರಾದಿಂದ ಜೈಪುರಕ್ಕೆ ಪ್ರಯಾಣಿಸುತ್ತಿದ್ದಾಗ, ಅವರ ಕಾರು ಅತ್ರು ಮತ್ತು ಕವಾಯಿ ನಡುವೆ ವಿರುದ್ಧ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ.

News18
News18

ಬರಾನ್: ರಾಜಸ್ಥಾನದ ಬರಾನ್‌ನ ಅತ್ರು-ಕವಾಯಿ ರಸ್ತೆಯಲ್ಲಿ (Road Accident) ಮಂಗಳವಾರ ಕಾರು ಟ್ರೇಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ವೈದ್ಯ ದಂಪತಿ ಮತ್ತು ಅವರ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಕವಾಯಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಾಯದಿಂದ ಕಾರಿನಿಂದ ಸಿಲುಕಿಕೊಂಡಿದ್ದ ವ್ಯಕ್ತಿಗಳನ್ನು ಹೊರತೆಗೆದರು. ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದಾಗ, ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಇದನ್ನೂ ಓದಿ: Cheetah Death: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿಕಿತ್ಸೆಯ ಸಮಯದಲ್ಲಿ ಚೀತಾ ಗೌರವ್ ಸಾವು

ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರನ್ನು ಡಾ. ಸುರೇಶ್ ಗಜರಾಜ್ (ಮಂಡಲಗಢದ ಪಿಎಂಒ), ಅವರ ಪತ್ನಿ ಡಾ. ಶಾಲಿನಿ ಮೌರ್ಯ ಮತ್ತು ಅವರ ಇಬ್ಬರು ಮಕ್ಕಳಾದ ಸ್ವಪ್ನಿಲ್ (12) ಮತ್ತು ನಿಲಿಶಾ (7) ಎಂದು ಗುರುತಿಸಲಾಗಿದೆ ಎಂದು ಕವಾಯಿ ಠಾಣಾಧಿಕಾರಿ (ಎಸ್‌ಎಚ್‌ಒ) ರಾಜ್‌ಪಾಲ್ ಸಿಂಗ್ ತಿಳಿಸಿದ್ದಾರೆ.

‘ಸಂತ್ರಸ್ತರು ಮೂಲತಃ ಜುನ್ಜುನುವಿನ ಸೂರಜ್‌ಗಢದವರಾಗಿದ್ದು, ಜೈಪುರದಲ್ಲಿ ವಾಸಿಸುತ್ತಿದ್ದರು. ಕುಟುಂಬವು ಛಬ್ರಾದಿಂದ ಜೈಪುರಕ್ಕೆ ಪ್ರಯಾಣಿಸುತ್ತಿದ್ದಾಗ, ಅವರ ಕಾರು ಅತ್ರು ಮತ್ತು ಕವಾಯಿ ನಡುವೆ ವಿರುದ್ಧ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ’ ಎಂದು ಅವರು ಹೇಳಿದರು.

ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆ ಆರಂಭಿಸಲಾಗಿದೆ ಎಂದು ಎಸ್‌ಎಚ್‌ಒ ಅವರು ಹೇಳಿದರು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed