Last Updated:
ಶುಕ್ರವಾರ ಬೆಳಿಗ್ಗೆ, ಕುಟುಂಬ ಸದಸ್ಯರನ್ನು ಒಳಗೊಂಡ ಉದ್ರಿಕ್ತ ಜನಸಮೂಹ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿ, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು. ಮರಣೋತ್ತರ ಪರೀಕ್ಷೆಗಳನ್ನು ನಡೆಸಿ ಶವಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಜೋಧ್ಪುರ: ರಾಜಸ್ಥಾನದ ಜೋಧ್ಪುರ ಜಿಲ್ಲೆಯ ಶೇರ್ಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ವೇಗವಾಗಿ ಬಂದ ಮಿನಿ ಟ್ರಕ್ (ಬೊಲೆರೊ ಕ್ಯಾಂಪರ್) ಡಿಕ್ಕಿ ಹೊಡೆದ ಪರಿಣಾಮ ರಾಮದೇವ್ರಾಗೆ ತೆರಳುತ್ತಿದ್ದ ಮೂವರು ಯಾತ್ರಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.














