Last Updated:
‘ಹಿಟ್‌ಮ್ಯಾನ್’ ಹೆಸರಿನಿಂದ ಅಭಿಮಾನಿಗಳ ಮನ ಗೆದ್ದಿರುವ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಇದೀಗ ಮೊದಲ ಬಾರಿಗೆ ರಿಯಾಲಿಟಿ ಶೋ ನಿರೂಪಕರಾಗಿ ಕಾಣಿಸಿಕೊಳ್ಳಲಿದ್ದಾರೆ.
ಕ್ರಿಕೆಟ್ ಮೈದಾನದ ಬಳಿಕ ಕಿರುತೆರೆಯಲ್ಲಿ ರೋಹಿತ್ ಶರ್ಮಾ (Rohit Sharma) ಹೊಸ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ‘ಹಿಟ್‌ಮ್ಯಾನ್’ (Hitman) ಹೆಸರಿನಿಂದ ಅಭಿಮಾನಿಗಳ ಮನ ಗೆದ್ದಿರುವ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಇದೀಗ ಮೊದಲ ಬಾರಿಗೆ ರಿಯಾಲಿಟಿ ಶೋ ನಿರೂಪಕರಾಗಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಬಹುನಿರೀಕ್ಷಿತ ಕಾರ್ಯಕ್ರಮದ ಹೆಸರು ಮತ್ತು ಪ್ರಸಾರ ದಿನಾಂಕ ಇದೀಗ ಬಹಿರಂಗವಾಗಿದ್ದು, ಅಭಿಮಾನಿಗಳ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.














