S Janaki ಆಸೆಯಂತೆ ಮೈಸೂರಿನಲ್ಲಿ ಅಂತ್ಯಕ್ರಿಯೆ! ಅರಮನೆ ನಗರಿ ಜೊತೆ ಗಾನಕೋಗಿಲೆ ಸಂಬಂಧ ಹೇಗಿತ್ತು? | | ACTPnews

ಎಸ್​​ ಜಾನಕಿ


Last Updated:

ಎಸ್ ಜಾನಕಿ ಅವರ ಆಸೆಯಂತೆ ಮೈಸೂರಿನ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಎಸ್​​ ಜಾನಕಿ
ಎಸ್​​ ಜಾನಕಿ

ಮೈಸೂರು: ಭಾರತ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಎಸ್​. ಜಾನಕಿಯವರು (S. Janaki) ಇಹಲೋಕ ತ್ಯಜಿಸಿದ್ದಾರೆ. ಮೈಸೂರಿನ (Mysuru) ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿತ್ರರಂಗದ ಗಾನಕೋಗಿಲೆ ಎಂದೇ ಸುಪ್ರಸಿದ್ಧ 88 ವರ್ಷದ ಗಾಯಕಿ ಜಾನಕಿ ವಿಧಿವಶರಾಗಿದ್ದು, ಎಸ್​. ಜಾನಕಿ ಅವರ ಆಸೆಯಂತೆ ಮೈಸೂರಿನ ಮೈಸೂರಿನ ತೋಟದ ಮನೆಯಲ್ಲಿ ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸರ್ಕಾರಿ ಮರ್ಯಾದೆಯೊಂದಿಗೆ ಎಸ್​. ಜಾನಕಿ ಅಂತ್ಯಕ್ರಿಯೆ

ಇನ್ನು, ಹಿನ್ನೆಲೆ ಗಾಯಕಿ ಎಸ್​. ಜಾನಕಿ ನಿಧನ ಹಿನ್ನೆಲೆ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಒಳಗೆ ಸಭೆ ನಡೆಸಿದರು. ಸ್ಥಳೀಯ ಶಾಸಕರು, ಜಾನಕಿ ಅವರ ಕುಟುಂಬಸ್ಥರು, ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳ ಜೊತೆ ಸಭೆ‌ ನಡೆಸಿ, ಪಾರ್ಥಿವ ಶರೀರದ ಅಂತಿಮ ದರ್ಶನದ ವ್ಯವಸ್ಥೆ, ಅಂತ್ಯಸಂಸ್ಕಾರದ ಸ್ಥಳ ನಿಗದಿ ಬಗ್ಗೆ ಚರ್ಚೆ ನಡೆಸಿದರು. ಸಭೆ ಬಳಿಕ ಮಾಹಿತಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಸರ್ಕಾರಿ ಮರ್ಯಾದೆಯೊಂದಿಗೆ ಎಸ್​. ಜಾನಕಿ ಅಂತ್ಯಕ್ರಿಯೆ ನಡೆಸುವಂತೆ ಸಿಎಂ ಡಿಕೆಶಿ ಸೂಚನೆ ಕೊಟ್ಟಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಮೈಸೂರಿನಲ್ಲಿ ಮಾಡಿ ಎಂದು ಹೇಳಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು.
ಮೈಸೂರು ಜೊತೆ ಸಂಬಂಧ ಹೇಗಿತ್ತು?

ಎಸ್​. ಜಾನಕಮ್ಮನವರು ಸುಮಾರು ವರ್ಷಗಳಿಂದ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ, ಕಳೆದ 2 ವರ್ಷಗಳ ಹಿಂದೆ ಮರಣ ಹೊಂದಿದ್ದ ಮಗನ ಸಾವಿನ ನಂತರ ಮಾನಸಿಕವಾಗಿ ಕುಗ್ಗಿದ್ದರು. ನವೀನ್​ ಎಂಬುವರು ಎಸ್​. ಜಾನಕಿ ಅವರ ಜವಾಬ್ದಾರಿಯನ್ನು ಹೊತ್ತಿದ್ದರು. ಕೊನೆಯ ಸಮಯದಲ್ಲಿ ಎಸ್​. ಜಾನಕಿ ಅವರು ತಮ್ಮ ಕುಟುಂಬಸ್ಥರನ್ನು ಮಾತ್ರ ಭೇಟಿಯಾಗುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಸಾರ್ವಜನಿಕರ ಸಂಪರ್ಕದಿಂದ ದೂರವಿದ್ದ ಎಸ್​. ಜಾನಕಿ ಅವರ ಕುಟುಂಬಸ್ಥರು ಹೈದ್ರಾಬಾದ್, ಕೇರಳ, ವಿದೇಶದಲ್ಲಿ ನೆಲಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

(ವರದಿ: ಆನಂದ್​, ನ್ಯೂಸ್​​18 ಕನ್ನಡ, ಮೈಸೂರು)



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed