Last Updated:
ಆತ್ಮಹತ್ಯೆಗೆ ಶರಣಾದ ಎಸ್ಎಸ್ಎಲ್ಸಿ ಓದುತ್ತಿದ್ದ ವಿದ್ಯಾರ್ಥಿ ಸುಭಾಷ್ ಚಂದ್ರ ಬೋಸ್ ಚಿತ್ರದುರ್ಗ ಮೂಲದ ವಿದ್ಯಾರ್ಥಿಯಾಗಿದ್ದು, ಸದ್ಯ ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾಸನ: ವಿದ್ಯೆ ತಲೆಗೆ ಹತ್ತುತ್ತಿಲ್ಲ ಎಂದು ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ (Suicide Case) ಹೃದಯ ವಿದ್ರಾವಕ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದ ವಿನಾಯಕ ನಗರದಲ್ಲಿ ಈ ಭೀಕರ ಘಟನೆ ನಡೆದಿದ್ದು, ಎಸ್ಎಸ್ಎಲ್ಸಿ ಓದುತ್ತಿದ್ದ ಸುಭಾಷ್ ಚಂದ್ರ ಬೋಸ್ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಶಾಲೆಯಲ್ಲಿ ಎಷ್ಟೇ ಕಲಿಸಿದರೂ ವಿದ್ಯೆ ತನ್ನ ತಲೆಗೆ ಹತ್ತುತ್ತಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಆತ್ಮಹತ್ಯೆಗೆ ಶರಣಾದ ಎಸ್ಎಸ್ಎಲ್ಸಿ ಓದುತ್ತಿದ್ದ ವಿದ್ಯಾರ್ಥಿ ಸುಭಾಷ್ ಚಂದ್ರ ಬೋಸ್ ಚಿತ್ರದುರ್ಗ ಮೂಲದ ವಿದ್ಯಾರ್ಥಿಯಾಗಿದ್ದು, ಸದ್ಯ ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಮೃತ ಬಾಲಕ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ.
ಸುಭಾಷ್ ಚಂದ್ರ ಬೋಸ್
ಉತ್ತರಾಖಂಡದ (Uttarakhand) ಪಿಥೋರಗಢ ಜಿಲ್ಲೆಯಲ್ಲಿ ಒಂದು ಮನಕಲಕುವ ದುರಂತ ನಡೆದಿದೆ. 14 ವರ್ಷದ ಬಾಲಕನೊಬ್ಬ ಬೆಳಗಿನ ವಾಕಿಂಗ್ ವೇಳೆ ಮೈದಾನದಲ್ಲೇ ಕುಸಿದು ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಕುಟುಂಬಕ್ಕೆ ಮತ್ತೊಂದು ದೊಡ್ಡ ಆಘಾತ ಎದುರಾಯ್ತು. ಮಗನ ಅಗಲಿಕೆಯನ್ನು ತಾಳಲಾರದೆ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಡೆ ಗ್ರಾಮದ 14 ವರ್ಷದ ಜತಿನ್ ಜೋಶಿ ಶನಿವಾರ ಬೆಳಗ್ಗೆ 6 ಗಂಟೆಗೆ ಝೌಲ್ಖೇತ್ ಕ್ರೀಡಾಂಗಣದಲ್ಲಿ ಎಂದಿನಂತೆ ಓಡಾಟ ಮುಗಿಸಿ ಕುಳಿತಿದ್ದಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ತಾಯಿ ಪೂನಂ ಜೋಶಿ ತಕ್ಷಣ ಅವನನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರು ಅವನು ಆಗಲೇ ಮೃತಪಟ್ಟಿದ್ದಾನೆಂದು ತಿಳಿಸಿದರು. ಪ್ರಾಥಮಿಕ ವರದಿಗಳ ಪ್ರಕಾರ ಹೃದಯಾಘಾತವೇ ಸಾವಿಗೆ ಕಾರಣವೆಂದು ಶಂಕಿಸಲಾಗಿದೆ.














