Salman Khan: ‘ನಾನು 16 ಕೆಜಿ ತೂಕ ಕಳೆದುಕೊಂಡಿದ್ದೇನೆ’! ಸಲ್ಮಾನ್ ಹೇಳಿಕೆಗೆ ಬೆಚ್ಚಿಬಿದ್ದ ಅಭಿಮಾನಿಗಳು | | ACTPnews

ಸಲ್ಮಾನ್ ಖಾನ್


Last Updated:

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ 16 ಕೆಜಿ ತೂಕ ಕಳೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಮಾತು ಕೇಳುತ್ತಿದ್ದಂತೆಯೇ ಕಾರ್ಯಕ್ರಮದಲ್ಲಿದ್ದವರು ಅಚ್ಚರಿ ವ್ಯಕ್ತಪಡಿಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಲ್ಮಾನ್ ಖಾನ್
ಸಲ್ಮಾನ್ ಖಾನ್

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದ್ರೆ ಈ ಬಾರಿ ಹೊಸ ಸಿನಿಮಾ ಅಥವಾ ಆಕ್ಷನ್ ದೃಶ್ಯಗಳಿಗಾಗಿ ಅಲ್ಲ. ಅಮೆಜಾನ್ ಪ್ರೈಮ್‌ನ ರಿಯಾಲಿಟಿ ಶೋ ಅಲಯನ್ಸ್ ಫಿನಾಲೆ ವಾರದಲ್ಲಿ ತಮ್ಮ ಸಹೋದರ ಸೊಹೈಲ್ ಖಾನ್‌ಗೆ (Sohail Khan) ಬೆಂಬಲ ನೀಡಲು ಆಗಮಿಸಿದ್ದ ಸಲ್ಮಾನ್, ತಾವು 16 ಕೆಜಿ ತೂಕ ಇಳಿಸಿಕೊಂಡಿರುವುದಾಗಿ ಬಹಿರಂಗಪಡಿಸಿದ್ದಾರೆ. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಅಲಯನ್ಸ್ ಕಾರ್ಯಕ್ರಮದ ಫಿನಾಲೆ ವಾರದ ಪ್ರೊಮೊದಲ್ಲಿ ಸಲ್ಮಾನ್ ಖಾನ್ ಮತ್ತು ಸೊಹೈಲ್ ಖಾನ್ ನಡುವಿನ ಮಾತುಕತೆ ಗಮನ ಸೆಳೆಯಿತು. ಈ ವೇಳೆ ಸೊಹೈಲ್ ತಮ್ಮ ಆಬ್ಸ್ ತೋರಿಸುತ್ತಾ ತಾವು 12 ಕೆಜಿ ತೂಕ ಇಳಿಸಿಕೊಂಡಿರುವುದಾಗಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಲ್ಮಾನ್, ತಾವು 16 ಕೆಜಿ ತೂಕ ಕಳೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಮಾತು ಕೇಳುತ್ತಿದ್ದಂತೆಯೇ ಕಾರ್ಯಕ್ರಮದಲ್ಲಿದ್ದವರು ಅಚ್ಚರಿ ವ್ಯಕ್ತಪಡಿಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೆಲ ದಿನಗಳ ಹಿಂದೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಲ್ಮಾನ್ ಖಾನ್ ವಿಡಿಯೋಗಳು ಮತ್ತು ಫೋಟೋಗಳು ವೈರಲ್ ಆಗಿದ್ದವು. ‘ಸ್ಲಮ್ ರಿಹ್ಯಾಬಿಲಿಟೇಷನ್ ಅಥಾರಿಟಿ’ (SRA) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮೊದಲಿಗಿಂತ ಹೆಚ್ಚು ಸಣ್ಣದಾಗಿ ಕಾಣಿಸಿಕೊಂಡಿದ್ದರು. ಇದನ್ನು ಗಮನಿಸಿದ ಅನೇಕ ಅಭಿಮಾನಿಗಳು ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಸಲ್ಮಾನ್ ಖಾನ್ ಮತ್ತು ರಿತೇಶ್ ದೇಶ್‌ಮುಖ್ ನಡುವಿನ ಸ್ನೇಹ ಹಲವು ವರ್ಷಗಳಿಂದ ಮುಂದುವರಿದಿದೆ. ರಿತೇಶ್ ನಿರ್ದೇಶನದ ಮೊದಲ ಚಿತ್ರ ರಾಜಾ ಶಿವಾಜಿ ಯೋಜನೆಯಲ್ಲಿ ಸಲ್ಮಾನ್ ಭಾಗವಾಗಿರುವುದರಿಂದ ಇಬ್ಬರ ನಡುವಿನ ಆತ್ಮೀಯತೆ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಇದನ್ನೂ ಓದಿ: Salman Khan: 120 ಕೋಟಿಯಿಂದ 70 ಕೋಟಿಗೆ ಸಂಭಾವನೆ ಇಳಿಸಿದ್ರಾ ಸಲ್ಮಾನ್ ಖಾನ್? ಇದರ ಹಿಂದಿನ ಕಾರಣ ಏನು?

ಸಾಮಾನ್ಯವಾಗಿ ವೈಯಕ್ತಿಕ ಜೀವನದ ಬಗ್ಗೆ ಹೆಚ್ಚು ಮಾತನಾಡದ ಸೊಹೈಲ್ ಖಾನ್, ಅಲಯನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಮಾಜಿ ಪತ್ನಿ ಸೀಮಾ ಸಜ್ದೇ ಕೂಡ ಇದೇ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಕಾರ್ಯಕ್ರಮದ ಬಗ್ಗೆ ಇನ್ನಷ್ಟು ಕುತೂಹಲ ಮೂಡಿಸಿತು. ಫಿನಾಲೆ ವಾರಕ್ಕೆ ಸೊಹೈಲ್ ತಲುಪಿದ ಹಿನ್ನೆಲೆಯಲ್ಲಿ ಅವರಿಗೆ ಬೆಂಬಲ ನೀಡಲು ಸಲ್ಮಾನ್ ಖಾನ್ ಸ್ವತಃ ಆಗಮಿಸಿದ್ದರು.

ಇದರ ನಡುವೆ ಸಲ್ಮಾನ್ ಖಾನ್ ತಮ್ಮ ಮುಂದಿನ ಪ್ಯಾನ್-ಇಂಡಿಯಾ ಸಿನಿಮಾದ ಸಿದ್ಧತೆಯಲ್ಲೂ ನಿರತರಾಗಿದ್ದಾರೆ. ಈ ಚಿತ್ರದಲ್ಲಿ ಮೊದಲ ಬಾರಿಗೆ ನಟಿ ನಯನತಾರಾ ಅವರೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ವಂಶಿ ಪೈಡಿಪಲ್ಲಿ ನಿರ್ದೇಶನದಲ್ಲಿ, ದಿಲ್ ರಾಜು ನಿರ್ಮಿಸುತ್ತಿರುವ ಈ ಆಕ್ಷನ್ ಥ್ರಿಲ್ಲರ್ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದ್ದು, 2027ರ ಈದ್ ವೇಳೆಗೆ ಬಿಡುಗಡೆ ಆಗುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports