Salman Khan: ಪೇಪರ್ ಲೀಕ್‌ನಿಂದ ಪಾಸ್ ಆಗಿದ್ದರಾ ಸಲ್ಮಾನ್ ಖಾನ್? ಹಳೆಯ ವಿಡಿಯೋ ಮತ್ತೆ ವೈರಲ್ | | ACTPnews

ಸಲ್ಮಾನ್ ಖಾನ್


Last Updated:

ನೀಟ್ ಪೇಪರ್ ಲೀಕ್ (NEET Paper Leak) ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ನಡುವೆ, ಬಾಲಿವುಡ್ ನಟ ಸಲ್ಮಾನ್ ಖಾನ್ (Actor Salman Khan) ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸಲ್ಮಾನ್ ಖಾನ್
ಸಲ್ಮಾನ್ ಖಾನ್

ನೀಟ್ ಪೇಪರ್ ಲೀಕ್ (NEET Paper Leak) ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ನಡುವೆ, ಬಾಲಿವುಡ್ ನಟ ಸಲ್ಮಾನ್ ಖಾನ್ (Actor Salman Khan) ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಪೇಪರ್ ಲೀಕ್ ಎಂಬುದು ದೇಶದ ಶಿಕ್ಷಣ ವ್ಯವಸ್ಥೆಗೆ ಗಂಭೀರ ಸವಾಲು ಎಂದು ಸಲ್ಲು ಅಭಿಪ್ರಾಯಪಟ್ಟಿದ್ದಾರೆ. ಆದರೆ ಇದೇ ವೇಳೆ, ಅವರ ಹಲವು ವರ್ಷಗಳ ಹಿಂದಿನ ವಿಡಿಯೋವೊಂದು ಮತ್ತೆ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಕಾರಣವಾಗಿದೆ.

ವಿದ್ಯಾರ್ಥಿಗಳ ಪರ ನಿಂತ ಸಲ್ಮಾನ್ ಖಾನ್

ಸಿಜೆಪಿ (CJP) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಲ್ಮಾನ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಜುಲೈ 20ರಂದು ನಡೆದ ಪ್ರತಿಭಟನೆಯಲ್ಲಿ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿರುವ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿದ ನಟ , ಪೇಪರ್ ಲೀಕ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಕರೆ ನೀಡಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ, ಇದು ವಿದ್ಯಾರ್ಥಿಗಳು ಮತ್ತು ಶಿಕ್ಷಣ ವ್ಯವಸ್ಥೆಯ ನಡುವಿನ ಹೋರಾಟವಾಗಿದ್ದು, ಯಾವುದೇ ರಾಜಕೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಈ ವಿಚಾರವನ್ನು ಬಳಸಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ಭಾರತದ ಶಿಕ್ಷಣ ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಬಲವಾಗಬೇಕೆಂಬ ಆಶಯವನ್ನೂ ವ್ಯಕ್ತಪಡಿಸಿದ್ದಾರೆ.

ಹಳೆಯ ವಿಡಿಯೋ ಮತ್ತೆ ವೈರಲ್

ಸಲ್ಮಾನ್ ಖಾನ್ ಈ ಹೇಳಿಕೆಯ ಬೆನ್ನಲ್ಲೇ, 2020ರಲ್ಲಿ ಪ್ರಸಾರವಾಗಿದ್ದ ‘ದಿ ಕಪಿಲ್ ಶರ್ಮಾ ಶೋ’ನ ಒಂದು ಹಳೆಯ ವಿಡಿಯೋ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಹಳೆಯ ವಿಡಿಯೋವನ್ನು ಹಂಚಿಕೊಳ್ಳುತ್ತಿರುವ ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು, ಈಗ ಪೇಪರ್ ಲೀಕ್ ವಿರುದ್ಧ ಮಾತನಾಡುತ್ತಿರುವ ಸಲ್ಮಾನ್ ಖಾನ್ ಅವರ ಹೇಳಿಕೆ ಮತ್ತು ಆ ಹಳೆಯ ಕಾರ್ಯಕ್ರಮದ ಮಾತುಗಳನ್ನು ಹೋಲಿಸಿ ಟೀಕೆ ಮಾಡುತ್ತಿದ್ದಾರೆ. ಕೆಲವರು ಇದನ್ನು ಡಬಲ್ ಸ್ಟ್ಯಾಂಡರ್ಡ್ ಎಂದು ವ್ಯಾಖ್ಯಾನಿಸುತ್ತಿದ್ದರೆ, ಇನ್ನೂ ಕೆಲವರು ಅದು ಕೇವಲ ಹಾಸ್ಯ ಕಾರ್ಯಕ್ರಮದಲ್ಲಿ ಹೇಳಲಾದ ಮಾತು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed