Last Updated:
ಸಾಮಾನ್ಯವಾಗಿ ಒಂದು ಸಿನಿಮಾಗೆ 120 ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆ ಪಡೆಯುವ ಸಲ್ಮಾನ್ ಖಾನ್, ಈ ಚಿತ್ರಕ್ಕಾಗಿ ತಮ್ಮ ಸಂಭಾವನೆಯನ್ನು ಗಣನೀಯವಾಗಿ ಕಡಿಮೆ ಮಾಡಿಕೊಂಡಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ.
ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಮತ್ತು ತೆಲುಗಿನ ಖ್ಯಾತ ನಿರ್ದೇಶಕ ವಂಶಿ ಪೈಡಿಪಲ್ಲಿ (Director Vamsi Paidipally) ಮೊದಲ ಬಾರಿಗೆ ಒಂದಾಗುತ್ತಿರುವ ಬಹುನಿರೀಕ್ಷಿತ ಸಿನಿಮಾ ಸದ್ಯ ಸಿನಿಪ್ರಿಯರ ಗಮನ ಸೆಳೆದಿದೆ. ತಾತ್ಕಾಲಿಕವಾಗಿ ‘SVC63’ ಎಂದು ಕರೆಯಲಾಗುತ್ತಿರುವ ಈ ಬಿಗ್ ಬಜೆಟ್ ಆಕ್ಷನ್ ಎಂಟರ್‌ಟೈನರ್ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ನಡುವೆ ಚಿತ್ರದ ಕಥೆ ಅಥವಾ ಪಾತ್ರಗಳಿಗಿಂತಲೂ ಸಲ್ಮಾನ್ ಖಾನ್ ಅವರ ಸಂಭಾವನೆ ಕುರಿತ ವರದಿಗಳೇ ಹೆಚ್ಚು ಚರ್ಚೆಯಾಗುತ್ತಿವೆ.
ಸಾಮಾನ್ಯವಾಗಿ ಒಂದು ಸಿನಿಮಾಗೆ 120 ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆ ಪಡೆಯುವ ಸಲ್ಮಾನ್ ಖಾನ್, ಈ ಚಿತ್ರಕ್ಕಾಗಿ ತಮ್ಮ ಸಂಭಾವನೆಯನ್ನು ಗಣನೀಯವಾಗಿ ಕಡಿಮೆ ಮಾಡಿಕೊಂಡಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ.
#SalmanKhan drops his fees for his next with Vamshi 😳 Here’s why 👇
“Salman, whose market value stands at anything over Rs 120 crore upwards for each film he has done for nearly 20 years, has reportedly given this discount to the SVC 63 makers because his longtime friend, Rafi… pic.twitter.com/qS7qoDDExQ— $@M (@SAMTHEBESTEST_) August 1, 2026
ಮನಿ ಕಂಟ್ರೋಲ್ ವರದಿ ಪ್ರಕಾರ, SVC63 ಸಿನಿಮಾಕ್ಕೆ ಅವರು ಸುಮಾರು 70 ಕೋಟಿ ರೂಪಾಯಿ ಸಂಭಾವನೆ ಪಡೆಯಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಚಿತ್ರತಂಡ ಅಥವಾ ನಟರಿಂದ ಯಾವುದೇ ಅಧಿಕೃತ ದೃಢೀಕರಣ ಇನ್ನೂ ಹೊರಬಿದ್ದಿಲ್ಲ.
ವರದಿ ಪ್ರಕಾರ, ಈ ಪ್ರಾಜೆಕ್ಟ್‌ನಲ್ಲಿ ಸಲ್ಮಾನ್ ಖಾನ್ ಅವರ ಆಪ್ತ ಸ್ನೇಹಿತ ರಫಿ ಕಾಜಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರು ಈ ಸಿನಿಮಾದ ಸಹ-ನಿರ್ಮಾಪಕರಾಗಿರುವ ಕಾರಣ, ಸ್ನೇಹ ಮತ್ತು ಪರಸ್ಪರ ವಿಶ್ವಾಸದ ಹಿನ್ನೆಲೆಯಲ್ಲಿ ಸಲ್ಮಾನ್ ತಮ್ಮ ಸಂಭಾವನೆಯಲ್ಲಿ ರಿಯಾಯಿತಿ ನೀಡಿದ್ದಾರೆ ಎನ್ನಲಾಗಿದೆ.
ಆದರೆ ಈ ಮಾಹಿತಿಯನ್ನೂ ಚಿತ್ರತಂಡ ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ.
SVC63 ಸಿನಿಮಾದಲ್ಲಿ ಸಲ್ಮಾನ್ ಖಾನ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಎಂಬ ಸುದ್ದಿ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹೊಸ ಅವತಾರದಲ್ಲಿ ಸಲ್ಮಾನ್ ಅವರನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಈ ಚಿತ್ರದಲ್ಲಿ ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ನಯನತಾರಾ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂಬ ವರದಿಗಳಿವೆ. ವಂಶಿ ಪೈಡಿಪಲ್ಲಿ ನಿರ್ದೇಶನ ಮತ್ತು ದಿಲ್ ರಾಜು ನಿರ್ಮಾಣದ ಈ ಸಿನಿಮಾ ಭಾರೀ ಬಜೆಟ್‌ನಲ್ಲಿ ಮೂಡಿಬರುತ್ತಿದ್ದು, ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ.
ಚಿತ್ರದ ಚಿತ್ರೀಕರಣ ವೇಗವಾಗಿ ಸಾಗುತ್ತಿದ್ದು, ಸಲ್ಮಾನ್ ಖಾನ್ ಅವರ ಫಸ್ಟ್ ಲುಕ್ ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ಸಿನಿಮಾದ ಶೀರ್ಷಿಕೆ, ಬಿಡುಗಡೆಯ ದಿನಾಂಕ ಮತ್ತು ಇತರ ಪ್ರಮುಖ ಮಾಹಿತಿಯನ್ನು ಚಿತ್ರತಂಡ ಇನ್ನಷ್ಟೇ ಅಧಿಕೃತವಾಗಿ ಪ್ರಕಟಿಸಬೇಕಿದೆ. ಹೀಗಿರುವಾಗ ಸಲ್ಮಾನ್ ಖಾನ್ ಸಂಭಾವನೆ ಕುರಿತ ವರದಿಗಳು ಹಾಗೂ ಚಿತ್ರದ ಹೊಸ ಅಪ್‌ಡೇಟ್‌ಗಳು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸುತ್ತಿವೆ.
Bangalore [Bangalore],Bangalore,Karnataka
Aug 02, 2026 10:02 PM IST














