Last Updated:
‘ಮಾ ಇಂಟಿ ಬಂಗಾರಂ’ ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯ ವಿಡಿಯೋಗಳಲ್ಲಿ ಸಮಂತಾರ ಬೇಬಿ ಬಂಪ್ (Baby Bump) ಕಾಣಿಸಿದ್ದು, ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.
ಸಮಂತಾ (Samantha) ನಟನೆಯ ‘ಮಾ ಇಂಟಿ ಬಂಗಾರಂ’ (Maa Inti Bangaram) ಸಿನಿಮಾ ರಿಲೀಸ್ ಆಗಿ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆ ಮಾಡುತ್ತಿದೆ. ಈ ಖುಷಿ ಸುದ್ದಿಯ ನಡುವೆಯೇ ಸಮಂತಾ, ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ‘ಮಾ ಇಂಟಿ ಬಂಗಾರಂ’ ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯ ವಿಡಿಯೋಗಳಲ್ಲಿ ಸಮಂತಾರ ಬೇಬಿ ಬಂಪ್ (Baby Bump) ಕಾಣಿಸಿದ್ದು, ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.
ನಟಿ ಸಮಂತಾ ಅಭಿನಯದ ಮಾ ಇಂಟಿ ಬಂಗಾರಂ ಸಿನಿಮಾ ಬಿಡುಗಡೆಯಾದ ಬಳಿಕ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಹೀಗಾಗಿ ಚಿತ್ರದ ಯಶಸ್ಸಿನ ಸಂಭ್ರಮವನ್ನು ಸಮಂತಾ, ಚಿತ್ರತಂಡದ ಸದಸ್ಯರು ಹಾಗೂ ಆಪ್ತರೊಂದಿಗೆ ಆಚರಿಸಿಕೊಂಡಿದ್ದಾರೆ.
ಈ ಸಂಭ್ರಮಾಚರಣೆಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದ್ದು, ಅಭಿಮಾನಿಗಳ ಗಮನ ಸೆಳೆದಿವೆ. ಆದರೆ ಚಿತ್ರದ ಯಶಸ್ಸಿಗಿಂತಲೂ ಹೆಚ್ಚು ಚರ್ಚೆಯಾಗುತ್ತಿರುವುದು ಸಮಂತಾ ಅವರ ವೈಯಕ್ತಿಕ ಜೀವನದ ಕುರಿತ ವದಂತಿಗಳೇ ಆಗಿವೆ.
ಇದರಿಂದಾಗಿ ಸಮಂತಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆಯೇ? ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ. ಕೆಲ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸುತ್ತಿದ್ದರೆ, ಇನ್ನೂ ಕೆಲವರು ಯಾವುದೇ ಅಧಿಕೃತ ಮಾಹಿತಿ ಇಲ್ಲದೆ ಇಂತಹ ತೀರ್ಮಾನಗಳಿಗೆ ಬರಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಸಮಂತಾ ಅವರ ಪ್ರತಿಯೊಂದು ಸಿನಿಮಾ, ಸಾಮಾಜಿಕ ಜಾಲತಾಣ ಪೋಸ್ಟ್ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಅಭಿಮಾನಿಗಳ ಗಮನ ಸೆಳೆಯುತ್ತವೆ. ಇದೀಗ ವೈರಲ್ ಆಗಿರುವ ಈ ಫೋಟೋಗಳು ಸಹ ಅಭಿಮಾನಿಗಳಲ್ಲಿ ಹೊಸ ಕುತೂಹಲ ಮೂಡಿಸಿವೆ.
ಒಟ್ಟಾರೆಯಾಗಿ , ಮಾ ಇಂಟಿ ಬಂಗಾರಂ ಚಿತ್ರದ ಯಶಸ್ಸಿನ ಸಂಭ್ರಮದ ನಡುವೆ ಸಮಂತಾ ಅವರ ಬಗ್ಗೆ ಹರಡಿರುವ ಗರ್ಭಧಾರಣೆಯ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ.
Bangalore [Bangalore],Bangalore,Karnataka













