Samantha: ಕೊನೆಗೂ ಗುಡ್ ನ್ಯೂಸ್ ಕೊಟ್ಟ ಸಮಂತಾ! ಸ್ಯಾಮ್ ಫ್ಯಾನ್ಸ್‌ಗಂತೂ ಹಬ್ಬವೋ ಹಬ್ಬ! | | ACTPnews

ಸಮಂತಾ


Last Updated:

ಸಿನಿಮಾ ಎಕ್ಸ್​​ಪ್ರೆಸ್​ಗೆ ನೀಡಿದ ಸಂದರ್ಶನದಲ್ಲಿ ನಿರ್ದೇಶಕಿ ನಂದಿನಿ, ಸಮಂತಾ ಜೀವನದಲ್ಲಿ ಬಂದಿರುವ ಖುಷಿಯ ಸಂಗತಿ ಸರಿಯಾದ ಸಮಯದಲ್ಲೇ ಬಂದಿದೆ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ

ಸಮಂತಾ
ಸಮಂತಾ

ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ (Samantha Ruth Prabhu) ಪ್ರಭು ಇತ್ತೀಚಿನ ದಿನಗಳಲ್ಲಿ ತಮ್ಮ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನ ಎರಡರ ಕಾರಣಕ್ಕೂ ಸುದ್ದಿಯಲ್ಲಿದ್ದಾರೆ. ಹಾಗೆಯೇ ‘ಮಾ ಇಂಟಿ ಬಂಗಾರಂ’ ಚಿತ್ರ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಬಾಕ್ಸ್ ಆಫೀಸ್‌ನಲ್ಲೂ ಉತ್ತಮ ಸಾಧನೆ ಮಾಡುತ್ತಿದೆ. ಇದೇ ವೇಳೆ, ಸಮಂತಾ ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿಯೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಇದೀಗ ಚಿತ್ರದ ನಿರ್ದೇಶಕಿ ಬಿ.ವಿ. ನಂದಿನಿ ರೆಡ್ಡಿ ನೀಡಿರುವ ಹೇಳಿಕೆ ವೈರಲ್ ಆಗಿದೆ.

ಸಮಂತಾ ಅಭಿನಯದ ‘ಮಾ ಇಂಟಿ ಬಂಗಾರಂ’ ಚಿತ್ರ ಬಿಡುಗಡೆಯಾದ ಬಳಿಕ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ ಈ ಚಿತ್ರವು ಸಮಂತಾ ಅವರ ವೃತ್ತಿಜೀವನದಲ್ಲಿ ಮಹತ್ವದ ಕಮ್‌ಬ್ಯಾಕ್ ಸಿನಿಮಾ ಎಂದು ಪರಿಗಣಿಸಲಾಗಿದೆ. ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯ ವೇಳೆ ತೆಗೆದ ಕೆಲವು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೇ ವೇಳೆ ಸಮಂತಾ ಅವರ ದೇಹದ ಬದಲಾವಣೆ ಗಮನಿಸಿದ ಕೆಲ ಅಭಿಮಾನಿಗಳು ಅವರು ಗರ್ಭಿಣಿಯಾಗಿರಬಹುದು ಎಂಬ ಊಹಾಪೋಹಗಳನ್ನು ವ್ಯಕ್ತಪಡಿಸಿದ್ದರು.

ಈ ಎಲ್ಲಾ ಚರ್ಚೆಗಳ ನಡುವೆಯೇ ನಿರ್ದೇಶಕಿ ಬಿ.ವಿ. ನಂದಿನಿ ರೆಡ್ಡಿ ನೀಡಿದ ಹೇಳಿಕೆ ಹೆಚ್ಚು ಗಮನ ಸೆಳೆದಿದೆ. ಸಿನಿಮಾ ಎಕ್ಸ್​​ಪ್ರೆಸ್​ಗೆ ನೀಡಿದ ಸಂದರ್ಶನದಲ್ಲಿ ನಿರ್ದೇಶಕಿ ನಂದಿನಿ, ಸಮಂತಾ ಜೀವನದಲ್ಲಿ ಬಂದಿರುವ ಖುಷಿಯ ಸಂಗತಿ ಸರಿಯಾದ ಸಮಯದಲ್ಲೇ ಬಂದಿದೆ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಸದ್ಯಕ್ಕೆ ಸಮಂತಾ ಗರ್ಭಿಣಿಯಾಗಿರುವ ಬಗ್ಗೆ ಹಲವು ಮಾಧ್ಯಮ ವರದಿಗಳು ಮತ್ತು ಸಿನಿ ವಲಯದ ಚರ್ಚೆಗಳು ನಡೆಯುತ್ತಿವೆ. ಆದರೆ ಈ ಕುರಿತು ಸಮಂತಾ ಅವರಿಂದ ಅಥವಾ ಅವರ ಅಧಿಕೃತ ತಂಡದಿಂದ ಸ್ಪಷ್ಟ ಪ್ರಕಟಣೆ ಇನ್ನೂ ಹೊರಬಂದಿಲ್ಲ.

ಆದ್ದರಿಂದ ಅಭಿಮಾನಿಗಳು ಈಗ ಅಧಿಕೃತ ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ. ಒಂದು ಕಡೆ ‘ಮಾ ಇಂಟಿ ಬಂಗಾರಂ’ ಚಿತ್ರದ ಯಶಸ್ಸು ಸಂಭ್ರಮ ಮೂಡಿಸಿದ್ದರೆ, ಮತ್ತೊಂದೆಡೆ ಸಮಂತಾ ಅವರ ವೈಯಕ್ತಿಕ ಜೀವನದ ಈ ಸುದ್ದಿ ಸಿನಿ ಲೋಕದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸಮಂತಾ ಸ್ವತಃ ಪ್ರತಿಕ್ರಿಯೆ ನೀಡುತ್ತಾರೆಯೇ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports