Last Updated:
‘ಮಾ ಇಂಟಿ ಬಂಗಾರಂ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ನೀಡಿ ವಿಶ್ವದಾದ್ಯಂತ 100 ಕೋಟಿ ರೂಪಾಯಿ ಗಳಿಕೆಯ ಕ್ಲಬ್ಗೆ ಸೇರ್ಪಡೆಯಾಗಿದೆ. ಇನ್ನು ಈ ವಿಷ್ಯ ತಿಳಿದ ಕ್ಷಣದಲ್ಲಿ ಸಮಂತಾ ನೀಡಿದ ಕ್ಯೂಟ್ ರಿಯಾಕ್ಷನ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ಮನ ಗೆದ್ದಿದೆ.
ಟಾಲಿವುಡ್ ಸ್ಟಾರ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ತಮ್ಮ ಸಿನಿ ಪಯಣದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ತಲುಪಿದ್ದಾರೆ. ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ನೀಡಿ ವಿಶ್ವದಾದ್ಯಂತ 100 ಕೋಟಿ ರೂಪಾಯಿ ಗಳಿಕೆಯ ಕ್ಲಬ್ಗೆ ಸೇರ್ಪಡೆಯಾಗಿದೆ. ಇನ್ನು ಈ ವಿಷ್ಯ ತಿಳಿದ ಕ್ಷಣದಲ್ಲಿ ಸಮಂತಾ ನೀಡಿದ ಕ್ಯೂಟ್ ರಿಯಾಕ್ಷನ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ಮನ ಗೆದ್ದಿದೆ.
ಜೂನ್ 19ರಂದು ಬಿಡುಗಡೆಯಾದ ‘ಮಾ ಇಂಟಿ ಬಂಗಾರಂ’ ಸಿನಿಮಾ ಆರಂಭದಿಂದಲೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ನಂದಿನಿ ರೆಡ್ಡಿ ನಿರ್ದೇಶನದ ಈ ಚಿತ್ರದಲ್ಲಿ ಸಮಂತಾ ಪ್ರಮುಖ ಪಾತ್ರದಲ್ಲಿ ನಟಿಸುವುದರ ಜೊತೆಗೆ ನಿರ್ಮಾಪಕಿಯಾಗಿಯೂ ಜವಾಬ್ದಾರಿ ಹೊತ್ತಿದ್ದರು. ರಾಜ್ ನಿಧಿಮೋರು ಅವರೊಂದಿಗೆ ಸೇರಿ ನಿರ್ಮಿಸಿರುವ ಈ ಸಿನಿಮಾ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ದಾಖಲಿಸಿತು.
ಈಗ ವಿಶ್ವದಾದ್ಯಂತ 100 ಕೋಟಿ ರೂಪಾಯಿ ಗಳಿಕೆಯ ಗಡಿ ದಾಟುವ ಮೂಲಕ ಮಹಿಳಾ ಪ್ರಧಾನ ತೆಲುಗು ಸಿನಿಮಾಗಳ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದೆ.
ಈ ಮೊದಲು ಅನುಷ್ಕಾ ಶೆಟ್ಟಿ ಅಭಿನಯದ ‘ಅರುಂಧತಿ’ ಹಾಗೂ ಕೀರ್ತಿ ಸುರೇಶ್ ಅಭಿನಯದ ‘ಮಹಾನಟಿ’ ಸಿನಿಮಾಗಳು ಮಹಿಳಾ ಪ್ರಧಾನ ಚಿತ್ರಗಳ ಪಟ್ಟಿಯಲ್ಲಿ ವಿಶೇಷ ಸ್ಥಾನ ಪಡೆದಿದ್ದವು. ಇದೀಗ ಆ ದಾಖಲೆಗಳನ್ನು ಹಿಂದಿಕ್ಕಿರುವ ‘ಮಾ ಇಂಟಿ ಬಂಗಾರಂ’ ಹೊಸ ಮೈಲಿಗಲ್ಲು ಸ್ಥಾಪಿಸಿದೆ.
ನಾವು 100 ಕೋಟಿ ಗಳಿಸಿದ್ದೇವೆ ಎಂದು ಹೇಳುತ್ತಿದ್ದಂತೆಯೇ ಸಮಂತಾ ಭಾವುಕರಾಗಿದ್ದಾರೆ. ಅಷ್ಟೇ ಅಲ್ಲದೆ ಖುಷಿಯಲ್ಲಿ ಸಮಂತಾ ಕಣ್ಣಲ್ಲಿ ಆನಂದ ಭಾಷ್ಪ ತರಿಸಿದೆ. ಈ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಯಶಸ್ಸು ತಮ್ಮ ವೃತ್ತಿಜೀವನದಲ್ಲಿ ಅತ್ಯಂತ ವಿಶೇಷ ಕ್ಷಣ ಎಂದು ಸಮಂತಾ ಹೇಳಿದ್ದಾರೆ. ಜೊತೆಗೆ ಪ್ರೇಕ್ಷಕರು ತೋರಿಸಿರುವ ಪ್ರೀತಿಯೇ ತಮ್ಮ ಜೀವನದ ಅತ್ಯಂತ ದೊಡ್ಡ ಉಡುಗೊರೆ ಎಂದು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ಇನ್ನು ಮಾ ಇಂಟಿ ಬಂಗಾರಂ ಯಶಸ್ಸಿನ ಹಿಂದೆ ಚಿತ್ರದ ಕಥಾಹಂದರ ಪ್ರಮುಖ ಕಾರಣವಾಗಿದೆ. ಮಹಿಳಾ ಪ್ರಧಾನ ಸಿನಿಮಾ ಎಂಬ ಮಿತಿಯನ್ನು ಮೀರಿ ಕುಟುಂಬ ಪ್ರೇಕ್ಷಕರನ್ನೂ ಸೆಳೆಯುವ ಕಥೆಯನ್ನು ನಿರ್ದೇಶಕಿ ನಂದಿನಿ ರೆಡ್ಡಿ ತೆರೆ ಮೇಲೆ ತಂದಿದ್ದಾರೆ. ನಟಿಯಾಗಿ ಹಲವು ಯಶಸ್ವಿ ಸಿನಿಮಾಗಳನ್ನು ನೀಡಿರುವ ಸಮಂತಾ, ಈ ಚಿತ್ರದ ಮೂಲಕ ನಿರ್ಮಾಪಕಿಯಾಗಿಯೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.
‘ಮಾ ಇಂಟಿ ಬಂಗಾರಂ’ ಚಿತ್ರದ ಯಶಸ್ಸು ಅವರ ವೃತ್ತಿಜೀವನಕ್ಕೆ ಹೊಸ ಆತ್ಮವಿಶ್ವಾಸ ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಅವರು ಕಾಣಿಸಿಕೊಳ್ಳುವ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿಸಿದೆ.
Bangalore [Bangalore],Bangalore,Karnataka














