Last Updated:
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು PhD ಸಂಶೋಧನೆ ಮಾಡುತ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ನಿಮಗಾಗಿ. ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ JRF ಮಾದರಿಯಲ್ಲಿ ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಿದೆ.
ಬೆಂಗಳೂರು: ಪಿಎಚ್ಡಿ (Phd) ಸಂಶೋಧನೆ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶವೊಂದು ಬಂದಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ JRF ಮಾದರಿಯಲ್ಲಿ ಫೆಲೋಶಿಪ್ ನೀಡಲು ಅರ್ಜಿ (Application) ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಪ್ರಸಕ್ತ ಸಾಲಿನ ಅರ್ಜಿಗೆ ಅಕ್ಟೋಬರ್ 31 ಕೊನೆಯ ದಿನ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. ಇತ್ತೀಚಿನ ಜಿಲ್ಲಾಮಟ್ಟದ ಪ್ರಕಟಣೆಗಳಲ್ಲೂ ಇದೇ ಗಡುವು ನೀಡಲಾಗಿದೆ. ಈ ಯೋಜನೆಯ ಉದ್ದೇಶ ಪೂರ್ಣಕಾಲಿಕ ಸಂಶೋಧನೆ ನಡೆಸುತ್ತಿರುವ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಂಶೋಧನಾ ಅವಧಿಯಲ್ಲಿ ಆರ್ಥಿಕ ನೆರವು ನೀಡುವುದಾಗಿದೆ.














