School Holiday: ನಾಳೆ ಶಾಲೆಗಳಿಗೆ ರಜೆ! ಗಡಿಭಾಗದ ಈ 4 ಜಿಲ್ಲೆಗಳಲ್ಲಿ ಸ್ಕೂಲ್‌ಗಳಿಗೆ ಬಿಡುವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಸಾಂಕೇತಿಕ ಚಿತ್ರ


Last Updated:

School Holiday: ರಾಜ್ಯದ ಹಲವೆಡೆ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಗಡಿಭಾಗದ 4 ಜಿಲ್ಲೆಗಳ ಶಾಲೆ, ಕಾಲೇಜ್‌ಗಳಿಗೆ ನಾಳೆ ಅಂದರೆ ಜುಲೈ 30ರಂದು ರಜೆ ಘೋಷಿಸಲಾಗಿದೆ. ಇನ್ನು ಹಲಾಮಾನ ಇಲಾಖೆ ಕೂಡ ನಾಳೆ ಆರೆಂಜ್ ಅಲರ್ಟ್ ಘೋಷಿಸಿದೆ.   

ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಕೇರಳಂ: ರಾಜ್ಯದ ಹಲವೆಡೆ ಮಳೆ ಅಬ್ಬರ (Heavy rains) ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಗಡಿಭಾಗದ 4 ಜಿಲ್ಲೆಗಳ ಶಾಲೆ, ಕಾಲೇಜ್‌ಗಳಿಗೆ ನಾಳೆ ಅಂದರೆ ಜುಲೈ 30ರಂದು ರಜೆ (School holiday) ಘೋಷಿಸಲಾಗಿದೆ. ಕೇರಳಂ ಜಿಲ್ಲೆಯ ಕಾಸರಗೋಡು (Kasaragod), ಕೋಝಿಕ್ಕೋಡ್ (Kozhikode), ಎರ್ನಾಕುಲಂ (Ernakulam) ಹಾಗೂ ವಯನಾಡು (Wayanad) ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಇನ್ನು ಹಲಾಮಾನ ಇಲಾಖೆ ಕೂಡ ನಾಳೆ ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ.   

ಕಾಸರಗೋಡು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ರಜೆ ಘೋಷಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಹೇಳಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಮುಂದುವರಿಯುತ್ತಿರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ನಾಳೆ ಎಲ್ಲೆಲ್ಲಿ ರಜೆ?

ಕಾಸರಗೋಡು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ನರ್ಸರಿಗಳು, ಕೇಂದ್ರೀಯ ವಿದ್ಯಾಲಯಗಳು, ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಶಾಲೆಗಳು, ಟ್ಯೂಷನ್ ಸೆಂಟರ್‌ಗಳು, ಮದರಾಸುಗಳು ಸೇರಿದಂತೆ ಎಲ್ಲೆಡೆ ರಜೆ ಇರುತ್ತದೆ. ಮುಂಚಿತವಾಗಿ ನಿಗದಿಪಡಿಸಿದ ಪರೀಕ್ಷೆಗಳಿಗೆ ಮತ್ತು ಸಂದರ್ಶನಗಳಿಗೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ತಿಳಿಸಿದ್ದಾರೆ.

ವಯನಾಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ

ಕೇರಳಂನ ವಯನಾಡ್ ಜಿಲ್ಲೆಗೆ ಕೇಂದ್ರ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ನಾಳೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಡಿ.ಆರ್. ಮೇಘಶ್ರೀ ಅವರು ಜುಲೈ 31 ರಂದು ಅಂಗನವಾಡಿಗಳು, ಧಾರ್ಮಿಕ ಅಧ್ಯಯನ ತರಗತಿಗಳು, ಬೋಧನಾ ಕೇಂದ್ರಗಳು, ವಿಶೇಷ ತರಗತಿಗಳು ಮತ್ತು ವೃತ್ತಿಪರ ಕಾಲೇಜುಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಇನ್ನು ವಸತಿ ಶಾಲೆಗಳು ಮತ್ತು ವಸತಿ ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ.

ಎರ್ನಾಕುಲಂ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ

ಭಾರೀ ಗಾಳಿ ಮತ್ತು ಮಳೆಯಿಂದಾಗಿ ಎರ್ನಾಕುಲಂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಇದರಿಂದಾಗಿ ಜಿಲ್ಲಾಧಿಕಾರಿ ಜಿ. ಪ್ರಿಯಾಂಕಾ ಅವರು ಜುಲೈ 31, ಶುಕ್ರವಾರ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಅಂಗನವಾಡಿಗಳು ಮತ್ತು ಬೋಧನಾ ಕೇಂದ್ರಗಳಿಗೆ ರಜೆ ಅನ್ವಯಿಸುತ್ತದೆ.

ಕೋಝಿಕ್ಕೋಡ್‌ನಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ

ಜುಲೈ 31, ಶುಕ್ರವಾರದಂದು ಕೋಝಿಕ್ಕೋಡ್ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಶಾಲೆ ಹಾಗೂ ಕಾಲೇಜ್‌ ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ವಡಕಾರ ಮತ್ತು ತಾಮರಸ್ಸೇರಿ ತಾಲ್ಲೂಕುಗಳಲ್ಲಿನ ಶಾಲೆಗಳು, ಮದರಸಾಗಳು, ಬೋಧನಾ ಕೇಂದ್ರಗಳು, ವೃತ್ತಿಪರ ಕಾಲೇಜುಗಳು ಮತ್ತು ಅಂಗನವಾಡಿಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಆನ್‌ಲೈನ್ ತರಗತಿಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ನ್ಯೂಸ್ 18 ಮಲಯಾಳಂ ವರದಿ ಮಾಡಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports