Shah Rukh Khan: ಮಂಗಳೂರಿಗೆ ಆಗಮಿಸಿದ ಶಾರುಖ್ ಖಾನ್! ಬಾಲಿವುಡ್‌ ಬಾದ್‌ಶಾ ಕಾಣಲು ವಿಮಾನ ನಿಲ್ದಾಣಕ್ಕೆ ಜಮಾಯಿಸಿದ ಜನ | | ACTPnews

ಶಾರುಖ್ ಖಾನ್


Last Updated:

ಮಂಗಳೂರಿಗೆ ಆಗಮಿಸಿದ ನಟ ಶಾರುಖ್ ಖಾನ್ ನೋಡಲು ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ ಬಳಿ ಜಮಾಯಿಸಿದ್ದು, ಕೆಲಕಾಲ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು.

ಶಾರುಖ್ ಖಾನ್
ಶಾರುಖ್ ಖಾನ್

ಬಾಲಿವುಡ್‌ ಬಾದ್‌ಶಾ, ಕಿಂಗ್ ಖಾನ್ ಎಂದೇ ಖ್ಯಾತರಾಗಿರುವ ಶಾರುಖ್ ಖಾನ್ (Shah Rukh Khan) ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ನಟನನ್ನು ನೋಡಲು ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ ಬಳಿ ಜಮಾಯಿಸಿದ್ದು, ಕೆಲಕಾಲ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಾರುಖ್ ಖಾನ್ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಮೊದಲೇ ಹರಡಿದ್ದರಿಂದ, ಬೆಳಗ್ಗೆಯಿಂದಲೇ ಅನೇಕ ಅಭಿಮಾನಿಗಳು ವಿಮಾನ ನಿಲ್ದಾಣದ ಬಳಿ ಸೇರಿದ್ದರು. ತಮ್ಮ ನೆಚ್ಚಿನ ನಟನನ್ನು ಒಮ್ಮೆ ಕಣ್ತುಂಬಿಕೊಳ್ಳಬೇಕೆಂಬ ಆಸೆಯಿಂದ ನೂರಾರು ಜನರು ಕಾಯುತ್ತಿದ್ದರು. ವಿಮಾನ ನಿಲ್ದಾಣದ ಟರ್ಮಿನಲ್‌ನಿಂದ ಶಾರುಖ್ ಖಾನ್ ಹೊರಬರುತ್ತಿದ್ದಂತೆ ಅಭಿಮಾನಿಗಳ ಸಂತೋಷ ವ್ಯಕ್ತಪಡಿಸಿದ್ದಾರೆ.

ನಟನ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸ್ ಇಲಾಖೆ ಹಾಗೂ ಖಾಸಗಿ ಭದ್ರತಾ ಸಿಬ್ಬಂದಿ ಜಂಟಿಯಾಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದರು. ಜನಸಂದಣಿಯನ್ನು ನಿಯಂತ್ರಿಸಲು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಶಾರುಖ್ ಖಾನ್ ಅವರ ಈ ಮಂಗಳೂರು ಭೇಟಿ ಹಿಂದೆ ಪ್ರಮುಖ ಕಾರಣ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ವಿಶೇಷ ಕಾರ್ಯಕ್ರಮವಾಗಿದೆ. ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ಶಾರುಖ್ ಖಾನ್ ಅವರ ಸಮ್ಮುಖದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಭಾರೀ ಸಿದ್ಧತೆಗಳನ್ನು ಮಾಡಲಾಗಿದೆ.

ಶಾರುಖ್ ಖಾನ್ ಅವರ ಭೇಟಿ ಮಂಗಳೂರಿನ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಸಾಮಾನ್ಯವಾಗಿ ಸಿನಿಮಾ ಪ್ರಚಾರ ಅಥವಾ ಚಿತ್ರೀಕರಣದ ಸಂದರ್ಭಗಳಲ್ಲಿ ಮಾತ್ರ ದಕ್ಷಿಣ ಭಾರತದ ವಿವಿಧ ನಗರಗಳಿಗೆ ಭೇಟಿ ನೀಡುವ ನಟ, ಈ ಬಾರಿ ಖಾಸಗಿ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಆಗಮಿಸಿರುವುದು ವಿಶೇಷ ಗಮನ ಸೆಳೆದಿದೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಶಾರುಖ್ ಖಾನ್ ಅವರ ಮಂಗಳೂರು ಭೇಟಿಯ ಚಿತ್ರಗಳು ಮತ್ತು ವೀಡಿಯೊಗಳು ವೈರಲ್ ಆಗುತ್ತಿವೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed