Last Updated:
ಮಂಗಳೂರಿನ ಅಭಿಮಾನಿಗಳಿಗೆ ವಿಶೇಷ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಶಾರುಖ್ ಖಾನ್ ತುಳು ಭಾಷೆಯಲ್ಲಿ ಮಾತನಾಡಿರುವುದು ಎಲ್ಲರ ಗಮನ ಸೆಳೆಯಿತು. ಅಭಿಮಾನಿಗಳತ್ತ ಕೈ ಬೀಸಿ ನಗುತ್ತಾ ‘ನಮಸ್ಕಾರ ಕುಡ್ಲ, ಎಂಚ ಉಲ್ಲೆರ್?’ ಎಂದು ತುಳುವಿನಲ್ಲಿ ಮಾತನಾಡಿದ್ದಾರೆ.
ಬಾಲಿವುಡ್ ಬಾದ್ಶಾ, ಶಾರುಖ್ ಖಾನ್ (Shah Rukh Khan) ಇಂದು ಮಂಗಳೂರಿಗೆ (Mangaluru) ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ ನಟನನ್ನು ನೋಡಲು ನೂರಾರು ಅಭಿಮಾನಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಜಮಾಯಿಸಿದ್ದು, ಕೆಲಕಾಲ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು.
ಶಾರುಖ್ ಖಾನ್ ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎಂಬ ಸುದ್ದಿ ಮೊದಲೇ ಹರಡಿದ್ದರಿಂದ ಬೆಳಗ್ಗೆಯಿಂದಲೇ ಅನೇಕ ಅಭಿಮಾನಿಗಳು ವಿಮಾನ ನಿಲ್ದಾಣದ ಬಳಿ ಸೇರಿದ್ದರು. ತಮ್ಮ ನೆಚ್ಚಿನ ನಟನನ್ನು ಒಮ್ಮೆ ಕಣ್ತುಂಬಿಕೊಳ್ಳಬೇಕೆಂಬ ಉತ್ಸಾಹದಲ್ಲಿ ಯುವಕರು, ಕುಟುಂಬಗಳು ಮತ್ತು ಸಿನಿಪ್ರಿಯರು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು.
ಮಂಗಳೂರಿನ ಅಭಿಮಾನಿಗಳಿಗೆ ವಿಶೇಷ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಶಾರುಖ್ ಖಾನ್ ತುಳು ಭಾಷೆಯಲ್ಲಿ ಮಾತನಾಡಿರುವುದು ಎಲ್ಲರ ಗಮನ ಸೆಳೆಯಿತು. ಅಭಿಮಾನಿಗಳತ್ತ ಕೈ ಬೀಸಿ ನಗುತ್ತಾ
‘ನಮಸ್ಕಾರ ಕುಡ್ಲ, ಎಂಚ ಉಲ್ಲೆರ್?’ ಎಂದು ತುಳುವಿನಲ್ಲಿ ಮಾತನಾಡಿದ್ದಾರೆ.
ಬಾಲಿವುಡ್ ಸೂಪರ್ಸ್ಟಾರ್ ಇದೀಗ ತುಳು ಭಾಷೆಯಲ್ಲಿ ಮಾತನಾಡಿರುವುದು ಕರಾವಳಿ ಭಾಗದ ಜನರ ಮೆಚ್ಚುಗೆಗೆ ಪಾತ್ರವಾಗಿದೆ . ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿಯೂ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇನ್ನು ಶಾರುಖ್ ಖಾನ್ ವಿಮಾನ ನಿಲ್ದಾಣದಿಂದ ಹೊರಬಂದ ತಕ್ಷಣ ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರಿದು ಸುರಕ್ಷಿತವಾಗಿ ವಾಹನದವರೆಗೆ ಕರೆದೊಯ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಸಾಮಾಜಿಕ ಜಾಲತಾಣಗಳಲ್ಲಿಯೂ ಶಾರುಖ್ ಖಾನ್ ಅವರ ಮಂಗಳೂರು ಭೇಟಿಯ ಚಿತ್ರಗಳು ಮತ್ತು ವೀಡಿಯೊಗಳು ವೈರಲ್ ಆಗುತ್ತಿವೆ.
Bangalore [Bangalore],Bangalore,Karnataka
Jun 25, 2026 10:57 PM IST













