[ad_1]
Last Updated:
ಸಾಮಾಜಿಕ ಜಾಲತಾಣಗಳಲ್ಲಿ ಶಾಲಿನಿ ಪಾಂಡೆ ಅವರದ್ದು ಎನ್ನಲಾದ ಎಐ ಸೃಷ್ಟಿತ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ನಟಿ ಸ್ಪಷ್ಟಪಡಿಸಿದ್ದಾರೆ.
ಸಿನಿಮಾ ತಾರೆಯರ ಜನಪ್ರಿಯತೆ ಹೆಚ್ಚುತ್ತಿದ್ದಂತೆ ಅವರ ಹೆಸರಿನಲ್ಲಿ ನಕಲಿ ಫೋಟೋ, ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ (Social Media) ಹರಿಬಿಡುವ ಪ್ರಕರಣಗಳೂ ಹೆಚ್ಚಾಗುತ್ತಿವೆ. ಅದರಲ್ಲೂ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗುವ ಡೀಪ್ಫೇಕ್ ವಿಡಿಯೋಗಳು ಸೆಲೆಬ್ರಿಟಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಇದೀಗ ನಟಿ ಶಾಲಿನಿ ಪಾಂಡೆ (Actress Shalini Pandey) ಕೂಡ ಇಂತಹದ್ದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಿದ್ದು, ಎಐ ತಂತ್ರಜ್ಞಾನದ ದುರ್ಬಳಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
[ad_2]
Source link














