Karnataka
oi-Shankrappa Parangi
ಬೆಂಗಳೂರು, ಜುಲೈ 28: ವಿವಿಧ ಕಾರಣಗಳಿಂದ ತಡವಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ದಿನಾಂಕ ಫಿಕ್ಸ್ ಆಗಿದೆ. ಆಗಸ್ಟ್ 31ರಿಂದ ಏರ್‌ಫೋರ್ಟ್ ತನ್ನ ಕಾರ್ಯಾಚರಣೆ ಆರಂಭಿಸಲಿದ್ದು, ಅಂದು ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಈ ಮುಂಚೆ ಆಗಸ್ಟ್ 11ರಿಂದ ಆರಂಭವಾಗಬೇಕಿತ್ತು. ತಾಂತ್ರಿಕ ಕಾರಣಗಳಿಂದ 31ಕ್ಕೆ ಮುಂದೂಡಲಾಗಿದೆ. ಈಗಾಗಲೇ ಇಂಡಿಗೊ ಏರ್ ಲೈನ್ಸ್ ತನ್ನ ಬುಕ್ಕಿಂಗ್ ಅನ್ನು ಆರಂಭಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಮಲೆನಾಡಿನಿಂದ ತಿರುಪತಿ, ಗೋವಾ, ಹೈದರಬಾದ್‌ಗೆ ಸಂಪರ್ಕ
ಮಲೆನಾಡಿನ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಂಧ್ರಪ್ರದೇಶದ ತಿರುಪತಿ, ಗೋವಾ ಮತ್ತು ಹೈದರಾಬಾದ್ ನಗರಗಳಿಗೆ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ನೀಡಲು ಮೂರು ಏರ್‌ಲೈನ್ಸ್ ಸಂಸ್ಥೆಗಳಿಗೆ ಅನುಮತಿ ದೊರೆತಿದೆ. ಈ ಮೂಲಕ ನೆರೆ ರಾಜ್ಯಗಳಿಗೆ ಇಲ್ಲಿಂದಲೆ ಪ್ರಯಾಣಿಸಲು ಅನುಕೂಲವಾಗಿದೆ.
ಸ್ಪೈಸ್ ಜೆಟ್, ಸ್ಟಾರ್ ಏರ್ ಲೈನ್ಸ್ ಮತ್ತು ಅಲಯನ್ಸ್ ಏರ್ ಸಂಸ್ಥೆಗಳು ಈ ರಹದಾರಿಗಳಲ್ಲಿ ವಿಮಾನ ಸಂಚಾರ ಮಾಡುವ ಸಂಬಂಧ ಕರೆದಿದ್ದ ಟೆಂಡರ್ ನಲ್ಲಿ ಭಾಗವಹಿಸಿ ಯಶಸ್ವಿಯಾಗಿವೆ. ಸದ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹಗಲು ವೇಳೆಯಲ್ಲ ಮಾತ್ರವೇ ವಿಮಾನ ಸಂಚಾರ ಮಾಡುತ್ತವೆ. ರಾತ್ರಿ ವೇಳೆ ಲ್ಯಾಂಡಿಂಗ್ ವ್ಯವಸ್ಥೆಗೆ ಸಂಬಂಧಿಸಿದ ಕಾಮಗಾರಿ ಪ್ರಗತಿಯಲ್ಲಿದ್ದು ಆದಷ್ಟು ಬೇಗ ಅದನ್ನು ಪೂರ್ಣಗೊಳಿಸಲಾಗುವುದು ಎಂದು ಅವರು ವಿವರಿಸಿದರು.
ಉಡಾನ್ ಯೋಜನೆಯಡಿ ಅನುಮತಿ ಪಡೆದಿರುವ ವಿಮಾನಯಾನ ಸಂಸ್ಥೆಗಳೂ ವಿಮಾನ ಸಂಚಾರಕ್ಕೆ ಸಿದ್ಧತೆ ನಡೆಸಿವೆ. ನಾಗರಿಕ ವಿಮಾನಯಾನ ನಿರ್ದೇಶನಾಲಯದ ಅನುಮತಿ ಸಿಕ್ಕ ನಂತರ ಅವೂ ಕಾರ್ಯಾಚರಣೆ ನಡೆಸಲಿವೆ ಎಂದರು.
ರನ್ ವೇ ವಿಸ್ತರಣೆ
ಈ ವಿಮಾಣ ನಿಲ್ದಾಣದಲ್ಲಿ ಅತೀ ಉದ್ದದ ರನ್ ವೇ ನಿರ್ಮಾಣ ಮಾಡಲಾಗಿದೆ. ಅದರ ಉದ್ದ ನಿಲ್ದಾಣ ನಿರ್ಮಾಣದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ಆಗಿತ್ತು. ಆದರೆ ಏರ್‌ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು 3200 ಮೀಟರಿಗೆ ಹೆಚ್ಚಳಕ್ಕೆ ವಿಸ್ತರಿಸಿ ಅನುಮೋದನೆ ಪಡೆಯಾಯಿತು. ಈ ಸಂಬಂಧ ಉದ್ದೇಶಿತ ವೆಚ್ಚಕ್ಕಿಂತಲೂ ಹೆಚ್ಚುವರಿಯಾಗಿ 75 ಕೋಟಿ ರೂಪಾಯಿ ವೆಚ್ಚವಾಗಿದೆ.
ಈ ವಿಮಾನ ನಿಲ್ದಾಣದ ಮೂಲಕ ಕರ್ನಾಟಕ ರಾಜ್ಯ ಸರ್ಕಾರಗಳೇ ಇನ್ನುಮುಂದೆ ನಿರ್ಮಾಣವಾಗಲಿರುವ ವಿಮಾನ ನಿಲ್ದಾಣಗಳ ನಿರ್ವಹಣೆ ಮಾಡಲಿದೆ. ಸದ್ಯ ರಾಜ್ಯದಲ್ಲಿ ಶಿವಮೊಗ್ಗ ನಂತರ ವಿಜಯಪುರ ವಿಮಾನ ನಿಲ್ದಾಣ ಸಿದ್ಧಗೊಳ್ಳುತ್ತಿದ್ದು, ನಿರ್ಮಾಣ ಕಾರ್ಯಗಳು ಭರದಿಂದ ಸಾಗಿವೆ.
English summary
Shivamogga Airport will start flight operations from August 31st ದರು.
Story first published: Friday, July 28, 2023, 6:48 [IST]