Siddaramaiah: ಕೋಮು ಗಲಭೆಗೆ ತುತ್ತಾದ ಆರು ಯುವಕರ ಕುಟುಂಬಕ್ಕೆ 25 ಲಕ್ಷ ಚೆಕ್ ವಿತರಿಸಿದ ಸಿದ್ದರಾಮಯ್ಯ ಹೇಳಿದ್ದೇನು? | Cheques Given to Families of Victims in Communal Violence: We Are Fixing BJP’s Blunders Says Siddaramaiah

Karnataka

oi-Reshma P

|

Google Oneindia Kannada News

ಬೆಂಗಳೂರು, ಜೂನ್ 19: ಬಿಜೆಪಿಯ ಸಂವಿಧಾನ ವಿರೋಧಿ ತಾರತಮ್ಯ ನೀತಿಯನ್ನು ಅಳಿಸಿದ್ದೇವೆ. ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೋಮುಗಲಭೆಗಳಿಗೆ ಬಲಿಯಾದ ಮೃತರ ಕುಟುಂಬಗಳಿಗೆ ಸೋಮವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ದರಾಮಯ್ಯ ಅವರು 25 ತಲಾ 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ವಿತರಿಸಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕವೂ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಕುಟುಂಬಗಳಿಗೆ ಚೆಕ್‌ ನೀಡಿದ್ದೇವೆ.

 Chief Minister Siddaramaiah

ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದು ಹೇಳಿದರು.

 Electricity Tarrif Hike: ಮುಂದಿನ ತಿಂಗಳಿನಿಂದ ವಿದ್ಯುತ್ ಬಿಲ್ ಸಮಸ್ಯೆಗೆ ಪರಿಹಾರ : ಸಿಎಂ ಸಿದ್ದರಾಮಯ್ಯ Electricity Tarrif Hike: ಮುಂದಿನ ತಿಂಗಳಿನಿಂದ ವಿದ್ಯುತ್ ಬಿಲ್ ಸಮಸ್ಯೆಗೆ ಪರಿಹಾರ : ಸಿಎಂ ಸಿದ್ದರಾಮಯ್ಯ

ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

 Chief Minister Siddaramaiah

ಈ ಸಂದರ್ಭದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್, ರಾಜಕೀಯ ಕಾರ್ಉದರ್ಶಿಗಳಾದ ನಾಸಿರ್ ಅಹಮದ್, ಗೋವಿಂದರಾಜು ಸೇರಿ ಇತರೆ ನಾಯಕರು ಉಪಸ್ಥಿತರಿದ್ದರು.

English summary

Chief Minister Siddaramaiah Said That We Are Fixing BJP’s Blunders

Story first published: Monday, June 19, 2023, 12:48 [IST]

Source link