Last Updated:
ಚಂಡೀಗಢದ ಮುಲ್ಲನ್ಪುರದ ಮಹಾರಾಜ ಯಾದವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆಯುತ್ತಿದೆ. ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಐಪಿಎಲ್ 2026 ಎಲಿಮಿನೇಟರ್ ಪಂದ್ಯ ಚಂಡೀಗಢದ ಮುಲ್ಲನ್ಪುರದ ಮಹಾರಾಜ ಯಾದವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆಯುತ್ತಿದೆ. ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದು ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಸ್ಪರ್ಧೆಯಾಗಿದೆ. ಇಂದಿನ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಮೇ 29ರಂದು ಗುಜರಾತ್ ಟೈಟನ್ಸ್ ವಿರುದ್ಧ ಕ್ವಾಲಿಫೈಯರ್ 2 ಪಂದ್ಯ ಆಡಲಿದೆ. ಆರ್ಸಿಬಿ ಈಗಾಗಲೇ ಗುಜರಾತ್ ಟೈಟನ್ಸ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿದೆ.
ಮುಲ್ಲನ್ಪುರದಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 214 ರನ್. ಪಿಚ್ ಸಂಖ್ಯೆ ನಾಲ್ಕನ್ನು ಇಂದು ಆಡಲು ಬಳಸಲಾಗುತ್ತದೆ, ಇದು ಬ್ಯಾಟಿಂಗ್ಗೆ ಅನುಕೂಲಕರವಾಗಿದೆ. ಹಾಗಾಗಿ ಹೈ ಸ್ಕೋರಿಂಗ್ ಪಂದ್ಯವನ್ನು ನಾವು ಕಾಣಬಹುದು. ವಿಶೇಷವಾಗಿ ವೈಭವ್ ಸೂರ್ಯವಂಶಿ ಮತ್ತು ಅಭಿಷೇಕ್ ಶರ್ಮಾ ಅವರಂತಹ ಬ್ಯಾಟ್ಸ್‌ಮನ್‌ಗಳು ಮುಖಾಮುಖಿಯಾಗುತ್ತಿರುವಾಗ ಈ ಪಂದ್ಯ ರೋಚಕವಾಗಿರಲಿದೆ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ದಾಸುನ್ ಶನಕ, ಡೊನೊವನ್ ಫೆರೇರಾ, ಜೋಫ್ರಾ ಆರ್ಚರ್, ರವೀಂದ್ರ ಜಡೇಜಾ, ನಾಂಡ್ರೆ ಬರ್ಗರ್, ಯಶ್ ರಾಜ್ ಪುಂಜಾ, ಬ್ರಿಜೇಶ್ ಶರ್ಮಾ.
ಸನ್ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಕ್ ಕ್ಲಾಸೆನ್, ಸ್ಮರಣ್ ರವಿಚಂದ್ರನ್, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮಿನ್ಸ್ (ನಾಯಕ), ಶಿವಾಂಗ್ ಕುಮಾರ್, ಪ್ರಫುಲ್ ಹಿಂಗೆ, ಇಶಾನ್ ಮಾಲಿಂಗ, ಸಕಿಬ್ ಹುಸೇನ್.













