Last Updated:
ಪವಿತ್ರ ಶೈವ ದೇವಾಲಯ ಮತ್ತು ಜ್ಯೋತಿರ್ಲಿಂಗ ಪುಣ್ಯಕ್ಷೇತ್ರ ಶ್ರೀಶೈಲಂನಲ್ಲಿ ಕುಟುಂಬವೊಂದು ಆತ್ಮಹತ್ಯೆಗೆ ಶರಣಾಗಿದೆ. ಈ ಘಟನೆ ಇದೀಗ ಸ್ಥಳದಲ್ಲಿ ಸಂಚಲನ ಮೂಡಿಸಿದೆ. ದೇವರ ದರ್ಶನಕ್ಕೆಂದು ಒಂದೇ ಕುಟುಂಬದ ಐವರು ಬಂದು ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
ಪವಿತ್ರ ಶೈವ ದೇವಾಲಯ ಮತ್ತು ಜ್ಯೋತಿರ್ಲಿಂಗ ದೇವಾಲಯವಾದ ಶ್ರೀಶೈಲಂನಲ್ಲಿ (Srisailam) ಕುಟುಂಬವೊಂದು ಆತ್ಮಹತ್ಯೆಗೆ ಶರಣಾಗಿದೆ. ಹೀಗೆ ಒಂದೇ ಕುಟಂಬದ ಐದು ಮಂದಿ ಆತ್ಮಹತ್ಯೆ (Suicide) ಮಾಡಿಕೊಂಡಿರುವುದು ಸಂಚಲನ ಮೂಡಿಸಿದೆ. ದೇವರ ದರ್ಶನಕ್ಕೆ ಬಂದ ನಂತರ ಒಂದೇ ಕುಟುಂಬದ ಐವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದ್ದಾರೆ. ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.














