Last Updated:
ಪ್ರಧಾನ್ ಅವರ ರಾಜೀನಾಮೆಯೊಂದಿಗೆ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ಒತ್ತಾಯಿಸಿ ಪಕ್ಷದ ಪ್ರತಿನಿಧಿಗಳು ಮತ್ತು ಸಾವಿರಾರು ವಿದ್ಯಾರ್ಥಿಗಳು ಕಳೆದ ಕೆಲವು ದಿನಗಳಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.
ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗಳಿಗೆ ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ (Yuvraj Singh) ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಸರ್ಕಾರ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದ್ದಾರೆ.
ಪ್ರಧಾನ್ ಅವರ ರಾಜೀನಾಮೆಯೊಂದಿಗೆ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ಒತ್ತಾಯಿಸಿ ಪಕ್ಷದ ಪ್ರತಿನಿಧಿಗಳು ಮತ್ತು ಸಾವಿರಾರು ವಿದ್ಯಾರ್ಥಿಗಳು ಕಳೆದ ಕೆಲವು ದಿನಗಳಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಮಳೆಗಾಲದ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಸಂಸತ್ತಿನ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ ನಂತರ ದೆಹಲಿಯಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ವೈರಲ್ ಆಗುತ್ತಿವೆ.
ಯುವರಾಜ್ ಸಿಂಗ್ ಇನ್ಸ್ಟಾಗ್ರಾಮ್ ಮೂಲಕ ಈ ವಿಷಯವನ್ನು ಪ್ರಸ್ತಾಪಿಸಿದ್ದು, “ಪ್ರತಿಯೊಂದು ಮಗು, ವಿದ್ಯಾರ್ಥಿ, ಪುರುಷ ಮತ್ತು ಮಹಿಳೆ ತಮ್ಮ ಶಿಕ್ಷಣವನ್ನು ಶಾಂತಿಯುತವಾಗಿ ಮುಂದುವರಿಸಲು ಮತ್ತು ಅವರ ಕನಸುಗಳನ್ನು ನನಸಾಗಿಸಲು ಅವಕಾಶಕ್ಕೆ ಅರ್ಹರು. ವಿದ್ಯಾರ್ಥಿಗಳ ಯೋಗಕ್ಷೇಮವು ಉಜ್ವಲ ಭಾರತದ ಅಡಿಪಾಯವಾಗಿದೆ. ಕಾಳಜಿ, ಅವಕಾಶ ಮತ್ತು ಭರವಸೆಯಲ್ಲಿ ಬೇರೂರಿರುವ ಸಮಾಜವನ್ನು ನಿರ್ಮಿಸಲು ನಾವು ಒಂದಾಗೋಣ. ಮಾತುಕತೆಯ ಮೂಲಕ ಭಾರತದ ಭವಿಷ್ಯಕ್ಕಾಗಿ ನಾವು ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳಬಹುದು” ಎಂದು ಯುವರಾಜ್ ಸಿಂಗ್ ಹೇಳಿದರು.
ನಮ್ಮ ಯುವಜನರೇ ನಮ್ಮ ದೇಶದ ಭವಿಷ್ಯ. ಅವರ ಕನಸುಗಳನ್ನು ಅರ್ಥಮಾಡಿಕೊಳ್ಳುವುದು ಎಷ್ಟು ಮುಖ್ಯವೋ, ಅಷ್ಟೇ ಕಷ್ಟದ ಸಮಯದಲ್ಲಿ ತಾಳ್ಮೆಯಿಂದ ಇರುವುದು ಮತ್ತು ದೇಶದ ಸಂಸ್ಥೆಗಳು ಹಾಗೂ ಸರ್ಕಾರದ ಮೇಲೆ ನಂಬಿಕೆಯನ್ನು ಕಾಯ್ದುಕೊಳ್ಳುವುದು ಕೂಡ ಅಷ್ಟೇ ಮುಖ್ಯವಾಗಿದೆ. ಪ್ರತಿಯೊಂದು ಸವಾಲಿಗೂ ತಾಳ್ಮೆಯಿಂದಲೇ ಪರಿಹಾರ ಸಿಗುತ್ತದೆ ಎಂದು ನಾನು ನಂಬುತ್ತೇನೆ. ಭಾರತ ಯಾವಾಗಲೂ ಆ ತತ್ವದಿಂದಲೇ ಮುನ್ನಡೆದಿದೆ ಮತ್ತು ಮುಂದೆಯೂ ಮುನ್ನಡೆಯುತ್ತಲೇ ಇರುತ್ತದೆ ಎಂದು ವಿದ್ಯಾರ್ಥಿಗಳಿಗೆ ತಾಳ್ಮೆಯಿಂದ ಪ್ರತಿಭಟಿಸಲು ತಿಳಿಸಿದ್ದಾರೆ.
ಸಿಜೆಪಿ ಬೆಂಬಲಿಗರ ಆಂದೋಲನಕ್ಕೆ ಸ್ಟಾರ್ ಕ್ರಿಕೆಟಿಗರ ಪತ್ನಿಯರು ಸಹ ಬೆಂಬಲ ನೀಡಿದರು. ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ, ಒಂಬತ್ತು ವರ್ಷದ ಬಾಲಕನೊಬ್ಬ ಲಾಠಿ ಚಾರ್ಜ್ಗೆ ಹೆದರುವುದಿಲ್ಲ ಎಂದು ಹೇಳುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ, ನೀಟ್ ಪತ್ರಿಕೆ ಸೋರಿಕೆಯಿಂದ ಪ್ರಭಾವಿತರಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಪೋಸ್ಟ್ ಮಾಡಿದ್ದಾರೆ, ಆದರೆ ಸರ್ಕಾರಿ ಆಸ್ತಿಯನ್ನು ನಾಶಪಡಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ವಿರುದ್ಧ ಲಾಠಿ ಚಾರ್ಜ್ ಅನ್ಯಾಯ ಎಂದು ಬುಮ್ರಾ ಅವರ ಪತ್ನಿ ಸಂಜನಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇವರ ಜೊತೆಗೆ ಭಾರತದ ಶೂಟರ್ ಮನು ಭಾಕರ್, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಸಿಗಬೇಕು ಮತ್ತು ಅದು ಸೌಲಭ್ಯವಲ್ಲ, ಬದಲಿಗೆ ಅವರ ಮೂಲಭೂತ ಹಕ್ಕು ಎಂದು ಒತ್ತಿಹೇಳಿದ್ದಾರೆ.””ಇದು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವ ಅಥವಾ ವಿರೋಧಿಸುವ ವಿಷಯವಲ್ಲ. ನಮಗೆ ನಿಜವಾಗಿಯೂ ಮುಖ್ಯವಾದ ವಿಷಯಗಳಾದ ಶಿಕ್ಷಣ, ಪರಿಸರ, ಸುರಕ್ಷತೆ ಮತ್ತು ಜವಾಬ್ದಾರಿಯ ಪರವಾಗಿ ಧ್ವನಿ ಎತ್ತುವುದಾಗಿದೆ. ನಮ್ಮ ನಂಬಿಕೆಗಳು ಏನೇ ಇರಲಿ, ಈ ಸಮಸ್ಯೆಗಳು ನಮ್ಮಲ್ಲಿ ಪ್ರತಿಯೊಬ್ಬರ ಮೇಲೂ ಪರಿಣಾಮ ಬೀರುತ್ತವೆ,” ಎಂದು ಅವರು ಬರೆದಿದ್ದಾರೆ.














