Last Updated:
Sunny Leone: ಬೆಳಗಾವಿಯ ಶಿವಾನಂದ ನೀಲಣ್ಣನವರ್ (Shivananda Neelannavar) ಮಾಲೀಕತ್ವದ ಶಿವಂ ಅಸೋಸಿಯೇಟ್ಸ್ (Shivam Associates) ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಗೆ (Bollywood Actress Sunny Leone) ಕರ್ನಾಟಕ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಬೆಳಗಾವಿಯ ಶಿವಾನಂದ ನೀಲಣ್ಣನವರ್ (Shivananda Neelannavar) ಮಾಲೀಕತ್ವದ ಶಿವಂ ಅಸೋಸಿಯೇಟ್ಸ್ (Shivam Associates) ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಗೆ (Bollywood Actress Sunny Leone) ಕರ್ನಾಟಕ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಸಾರ್ವಜನಿಕರಿಂದ ಕಾನೂನುಬಾಹಿರವಾಗಿ ಸಂಗ್ರಹಿಸಲ್ಪಟ್ಟ ಹಣದ ಒಂದು ದೊಡ್ಡ ಭಾಗವನ್ನು ಸನ್ನಿ ಲಿಯೋನ್ ಸೇರಿದಂತೆ ಹಲವು ನಟ-ನಟಿಯರಿಗೆ ವರ್ಗಾವಣೆ ಮಾಡಿರುವುದಾಗಿ ತನಿಖೆಯಿಂದ ಬಹಿರಂಗವಾಗಿದೆ.
ಪ್ರಕರಣದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಐಡಿ ಡಿಐಜಿ ಭೀಮಾಶಂಕರ ಗುಳೇದ ಅವರು, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣನವರ್ ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ಹಲವು ಕ್ಷೇತ್ರಗಳ ವ್ಯಕ್ತಿಗಳಿಗೆ ವರ್ಗಾವಣೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ ಎಂದು ತಿಳಿಸಿದ್ದಾರೆ.
ಅದರಲ್ಲೂ ಕೆಲವು ಚಿತ್ರರಂಗದ ನಟ-ನಟಿಯರ ಖಾತೆಗಳಿಗೆ ಹಣ ವರ್ಗಾವಣೆಯಾದ ಬಗ್ಗೆ ಸ್ಪಷ್ಟ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿಸಿದ್ದಾರೆ . ಈ ಹಿನ್ನೆಲೆಯಲ್ಲಿ ಹಣ ಪಡೆದಿರುವ ಬಗ್ಗೆ ಮಾಹಿತಿ ಪರಿಶೀಲಿಸಲು ಹಾಗೂ ಹಣದ ಮೂಲ ಮತ್ತು ಉದ್ದೇಶದ ಕುರಿತು ಸ್ಪಷ್ಟನೆ ಪಡೆಯಲು ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರ್ಥಿಕ ವಂಚನೆ ಆರೋಪ ಎದುರಿಸುತ್ತಿರುವ ಶಿವಾನಂದ ನೀಲಣ್ಣವರ ಅವರು 2023 ರಲ್ಲಿ ‘ಚಾಂಪಿಯನ್’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸಿದರು. ಬಾಲಿವುಡ್ ನಟಿ ಸನ್ನಿ ಲಿಯೋನ್ ಈ ಚಿತ್ರದಲ್ಲಿ ವಿಶೇಷ ಐಟಂ ಹಾಡಿನಲ್ಲಿ ಕಾಣಿಸಿಕೊಂಡಿದ್ದರು. ಆದಾಗ್ಯೂ, ಈ ಒಂದೇ ಹಾಡಿಗೆ ಅವರಿಗೆ ಒಟ್ಟು 1 ಕೋಟಿ ರೂ. ಸಂಭಾವನೆ ನೀಡಲಾಗಿದೆ ಎಂದು ತನಿಖೆಯಲ್ಲಿ ಬಯಲಾಗಿದೆ. ಹೀಗಾಗಿ ಸಂತ್ರಸ್ತರಿಂದ ಸಂಗ್ರಹಿಸಿದ ಅಕ್ರಮ ಠೇವಣಿಗಳನ್ನು ಸನ್ನಿ ಲಿಯೋನ್ಗೆ ಸಂಭಾವನೆಯಾಗಿ ನೀಡಲಾಗಿದೆ ಎಂದು ಅನುಮಾನ ವ್ಯಕ್ತವಾಗಿದೆ. ಈ ವಿಶೇಷ ಹಾಡಿಗಾಗಿ ಮಾಡಿದ ಬ್ಯಾಂಕ್ ವಹಿವಾಟುಗಳ ಕುರಿತು ಸಂಪೂರ್ಣ ವಿವರಣೆಯನ್ನು ನೀಡುವಂತೆ ಕರ್ನಾಟಕ ಸಿಐಡಿ ಇತ್ತೀಚೆಗೆ ಸನ್ನಿ ಲಿಯೋನ್ಗೆ ನೋಟಿಸ್ ಕಳುಹಿಸಿದೆ.
ಹಾಗೆಯೇ ಕಂಪನಿಯ ಮಾಲೀಕರು ಸಾರ್ವಜನಿಕರಿಂದ ಸಂಗ್ರಹಿಸಿದ ಅಕ್ರಮ ಹಣವನ್ನು ಸೆಲೆಬ್ರಿಟಿ ಕಾರ್ಯಕ್ರಮಗಳಿಗೆ ಖರ್ಚು ಮಾಡಿದ್ದಾರೆ ಎಂದು ತಿಳಿದುಬಂದಿದೆ . ಈ ಸಂದರ್ಭದಲ್ಲಿ, ಅಧಿಕಾರಿಗಳು ಈಗ ಕಳೆದ ವರ್ಷ ಡಿಸೆಂಬರ್ನಲ್ಲಿ ಈ ಕಂಪನಿ ಆಯೋಜಿಸಿದ್ದ ‘ಕನ್ನಡ ಉತ್ಸವ’ದತ್ತ ಗಮನ ಹರಿಸಿದ್ದಾರೆ.
ಕಳೆದ ಡಿಸೆಂಬರ್ 27ರಂದು ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ಹಬ್ಬ ಆಚರಿಸಿದ್ದರು. ಇದರ ಸೂತ್ರದಾರನೇ ಈ ಶಿವಾನಂದ ನೀಲಣ್ಣವರ್. ಈತ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಸಿನಿಮಾ ಮಂದಿ ಕೂಡಾ ಬಂದಿದ್ದರು. ಹೀಗೆ ಬಂದವರಿಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದರು ಅನ್ನೋ ಆರೋಪ ಕೇಳಿ ಬರುತ್ತಿದೆ.
Bangalore [Bangalore],Bangalore,Karnataka
Jun 09, 2026 10:51 PM IST













