Last Updated:
ಮುಂದಿನ 15 ದಿನಗಳವರೆಗೆ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್ಸಿ) ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಎತ್ತಿಹಿಡಿದಿದೆ.
ನವದೆಹಲಿ: ಕಾವೇರಿ ನದಿ ನೀರನ್ನು (Cauvery Water) ತಕ್ಷಣ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ (TN Govt) ಮತ್ತು ದ್ರಾವಿಡ ಮುನ್ನೇತ್ರ ಕಳಗಂ (DMK) ಸೇರಿದಂತೆ ಇತರರು ಸಲ್ಲಿಸಿರುವ ಅರ್ಜಿಗಳನ್ನು ಆಗಸ್ಟ್ 17 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಬುಧವಾರ ತಿಳಿಸಿದೆ.














