T20 World Cup Final: ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಟಾಸ್​ ಗೆದ್ದ ಆಸ್ಟ್ರೇಲಿಯಾ ತಂಡ ಬೌಲಿಂಗ್ ಆಯ್ಕೆ! ಲಾರ್ಡ್ಸ್​​​ನಲ್ಲಿ ಇತಿಹಾಸ ನಿರ್ಮಿಸುತ್ತಾ ಇಂಗ್ಲೆಂಡ್ | ಕ್ರೀಡಾ ಸುದ್ದಿ | ACTPnews

ಇಂಗ್ಲೆಂಡ್ vs ಆಸ್ಟ್ರೇಲಿಯಾ


Last Updated:

ಲಂಡನ್​​ನ ಲಾರ್ಡ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್​​​ ಗೆದ್ದಿರುವ ಆಸ್ಟ್ರೇಲಿಯಾ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಇಂಗ್ಲೆಂಡ್ vs ಆಸ್ಟ್ರೇಲಿಯಾ
ಇಂಗ್ಲೆಂಡ್ vs ಆಸ್ಟ್ರೇಲಿಯಾ

ಮಹಿಳಾ ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ (India vs England) ನಡುವೆ ನಡೆಯುತ್ತಿದೆ. ಲಂಡನ್​​ನ ಲಾರ್ಡ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್​​​ ಗೆದ್ದಿರುವ ಆಸ್ಟ್ರೇಲಿಯಾ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡ ದಕ್ಷಿಣ ಆಫ್ರಿಕಾವನ್ನು (South Africa) ಸೋಲಿಸಿದರೆ, ಆಸ್ಟ್ರೇಲಿಯಾ ತಂಡ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸುವ ಮೂಲಕ ಫೈನಲ್ ತಲುಪಿದೆ. ಇದು ಆಸ್ಟ್ರೇಲಿಯಾಗೆ 8ನೇ ಫೈನಲ್ ಆಗಿದ್ದರೆ, ಆಂಗ್ಲರಿಗೆ 5ನೇ ಫೈನಲ್ ಆಗಿದೆ. ಆಸ್ಟ್ರೇಲಿಯಾ ತಂಡ 6 ಬಾರಿ ಚಾಂಪಿಯನ್ ಆಗಿದ್ದರೆ, ಇಂಗ್ಲೆಂಡ್ ತಂಡ ಒಮ್ಮೆ (2009) ಚಾಂಪಿಯನ್ ಆಗಿದೆ. ಇಂದು ಗೆದ್ದರೆ, ಆಸ್ಟ್ರೇಲಿಯಾ ಹೊರತುಪಡಿಸಿ 2 ಬಾರಿ ಟ್ರೋಫಿ ಗೆದ್ದ 2ನೇ ತಂಡ ಎನಿಸಿಕೊಳ್ಳಲಿದೆ.

 ಸೋಲದ ಸರದಾರರ ನಡುವೆ ಫೈಪೋಟಿ

ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳು ಈ ಇಡೀ ಟೂರ್ನಮೆಂಟ್‌ನಲ್ಲಿ ಯಾವುದೇ ಪಂದ್ಯವನ್ನು ಸೋಲದೆ ಅಜೇಯವಾಗಿ ಫೈನಲ್ ತಲುಪಿವೆ. ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದರೆ, ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 40 ರನ್‌ಗಳ ಭರ್ಜರಿ ಗೆಲುವು ದಾಖಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು.

ಮಹಿಳಾ ಟಿ-20 ವಿಶ್ವಕಪ್ ಇತಿಹಾಸದಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಇದು 4ನೇ ಬಾರಿ. ಇದಕ್ಕೂ ಮುನ್ನ 2012, 2014 ಮತ್ತು 2018 ರಲ್ಲಿ ಮುಖಾಮುಖಿಯಾಗಿದ್ದವು. ಕಳೆದ ಮೂರೂ ಬಾರಿಯೂ ಆಸ್ಟ್ರೇಲಿಯಾವೇ ಪ್ರಶಸ್ತಿ ಗೆದ್ದುಕೊಂಡಿದೆ. 2009ರಲ್ಲಿ ಮಾತ್ರ ಇಂಗ್ಲೆಂಡ್ ಗೆಲುವು ಸಾಧಿಸಿತ್ತು.

 7ನೇ ಪ್ರಶಸ್ತಿ ಮೇಲೆ ಕಣ್ಣಿಟ್ಟ ಆಸ್ಟ್ರೇಲಿಯಾ

ಈಗಾಗಲೇ 6 ಬಾರಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ತಂಡವು 7ನೇ ಬಾರಿಗೆ ವಿಶ್ವಕಪ್ ಮುಕುಟ ಧರಿಸಲು ಹೋರಾಡುತ್ತಿದೆ. ಇನ್ನೊಂದೆಡೆ, ಇಂಗ್ಲೆಂಡ್ ತಂಡವು 2009 ರ ನಂತರ ತನ್ನ 2ನೇ ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವ ಕನಸು ಕಾಣುತ್ತಿದೆ. ವಿಶೇಷವೆಂದರೆ 2009 ರಲ್ಲೂ ಇಂಗ್ಲೆಂಡ್ ತಂಡ ಲಾರ್ಡ್ಸ್ ಮೈದಾನದಲ್ಲೇ ಚಾಂಪಿಯನ್ ಆಗಿತ್ತು. ಆಗ ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿ ಚಾಂಪಿಯನ್ ಆಗಿತ್ತು.

ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ವಿರುದ್ಧ 2012, 2014 ಹಾಗೂ 2018ರ ಫೈನಲ್​​ ಪಂದ್ಯಗಳಲ್ಲಿ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿ ಚಾಂಪಿಯನ್ ಆಗಿತ್ತು. ಹಾಗಾಗಿ ಇಂದೂ ಕೂಡ ಆಸ್ಟ್ರೇಲಿಯಾವೇ ಗೆಲ್ಲುವ ನೆಚ್ಚಿನ ತಂಡವಾಗಿದೆ.

ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್

ಇಂಗ್ಲೆಂಡ್ ಮಹಿಳಾ ತಂಡ: ಆಮಿ ಜೋನ್ಸ್ (ವಿಕೆಟ್ ಕೀಪರ್), ಡ್ಯಾನಿ ವ್ಯಾಟ್-ಹಾಡ್ಜ್, ನ್ಯಾಟ್ ಸೀವರ್-ಬ್ರಂಟ್ (ನಾಯಕಿ), ಆಲಿಸ್ ಕ್ಯಾಪ್ಸಿ, ಹೀದರ್ ನೈಟ್, ಫ್ರೇಯಾ ಕೆಂಪ್, ಡೇನಿಯಲ್ ಗಿಬ್ಸನ್, ಚಾರ್ಲೆಟ್ ಡೀನ್, ಲಿನ್ಸೆ ಸ್ಮಿತ್, ಸೋಫಿ ಎಕ್ಲೆಸ್ಟೋನ್, ಲಾರೆನ್ ಬೆಲ್.

ಆಸ್ಟ್ರೇಲಿಯಾ ಮಹಿಳಾ ತಂಡ: ಜಾರ್ಜಿಯಾ ವೋಲ್, ಬೆತ್ ಮೂನಿ (ವಿಕೆಟ್ ಕೀಪರ್), ಫೋಬೆ ಲಿಚ್​​ಫೀಲ್ಡ್, ಎಲಿಸ್ ಪೆರ್ರಿ, ಆಶ್ಲೆ ಗಾರ್ಡ್ನರ್, ಜಾರ್ಜಿಯಾ ವೇರಮ್, ಅನಾಬೆಲ್ ಸದರ್ಲ್ಯಾಂಡ್, ನಿಕೋಲಾ ಕ್ಯಾರಿ, ಕಿಮ್ ಗಾರ್ತ್, ಲೂಸಿ ಹ್ಯಾಮಿಲ್ಟನ್.

ಕನ್ನಡ ಸುದ್ದಿ/ ನ್ಯೂಸ್/ಕ್ರೀಡೆ/

T20 World Cup Final: ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಟಾಸ್​ ಗೆದ್ದ ಆಸ್ಟ್ರೇಲಿಯಾ ತಂಡ ಬೌಲಿಂಗ್ ಆಯ್ಕೆ! ಲಾರ್ಡ್ಸ್​​​ನಲ್ಲಿ ಇತಿಹಾಸ ನಿರ್ಮಿಸುತ್ತಾ ಇಂಗ್ಲೆಂಡ್



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed