Last Updated:
ತೃಣಮೂಲ ಕಾಂಗ್ರೆಸ್‌ನಿಂದ ಐದು ಬಾರಿ ಶಾಸಕರಾಗಿದ್ದ ಆಶಿಸ್ ಬ್ಯಾನರ್ಜಿ ಇಂದು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇವರು ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಪಶ್ಚಿಮ ಬಂಗಾಳದ ಮಾಜಿ ಉಪಸಭಾಪತಿ ಮತ್ತು ಹಿರಿಯ ತೃಣಮೂಲ ಕಾಂಗ್ರೆಸ್ (TMC) ನಾಯಕ ನಿಧನರಾಗಿದ್ದಾರೆ. ಟಿಎಂಸಿ ನಾಯಕ ಆಶಿಶ್ ಬ್ಯಾನರ್ಜಿ (Ashis Banerjee) ಇಂದು ಭಾನುವಾರ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅವರ ಮೃತದೇಹ ಬಿರ್ಭುಮ್ ಜಿಲ್ಲೆಯ ರಾಂಪುರ್ಹತ್‌ನ ವಾರ್ಡ್ ಸಂಖ್ಯೆ 5ರ ಹಟತಲ ಪದಾದಲ್ಲಿರುವ ಅವರ ನಿವಾಸ-ಪಕ್ಷದ ಕಚೇರಿಯಲ್ಲಿ ಪತ್ತೆಯಾಗಿದೆ. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.














