Last Updated:
ಟಾಕ್ಸಿಕ್ ಸಿನಿಮಾದ ಹವಾ ಸಿನಿಮಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ ಎನ್ನುವುದಕ್ಕೆ ಇದೀಗ ಮತ್ತೊಂದು ಉದಾಹರಣೆ ಸಿಕ್ಕಿದೆ. ಐಎಎಸ್ ಕೋಚಿಂಗ್ ಸೆಂಟರ್‌ನಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗಳಿಗೆ ಯಶ್ ಟಾಕ್ಸಿಕ್ ಸಿನಿಮಾವನ್ನೇ ಉದಾಹರಣೆಯಾಗಿ ನೀಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ (Toxic) ಸಿನಿಮಾದ ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಅಭಿಮಾನಿಗಳ ನಿರೀಕ್ಷೆ ಕೂಡ ಗಗನಕ್ಕೇರಿದೆ. ಟಾಕ್ಸಿಕ್ ಚಿತ್ರವನ್ನು ದೊಡ್ಡ ಪರದೆಯಲ್ಲಿ ಕಣ್ತುಂಬಿಕೊಳ್ಳಲು ಯಶ್ ಅಭಿಮಾನಿಗಳು ಮಾತ್ರವಲ್ಲದೆ, ದೇಶಾದ್ಯಂತದ ಸಿನಿರಸಿಕರು ಕಾತರದಿಂದ ಕಾಯುತ್ತಿದ್ದಾರೆ.














