Last Updated:
ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಸಿನಿಮಾ ಭರ್ಜರಿ ಓಪನಿಂಗ್ ಪಡೆದುಕೊಂಡ ಬೆನ್ನಲ್ಲೇ ಇದೀಗ ಪೈರಸಿ ಕಾಟ ಎದುರಾಗಿದೆ.
ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ (Toxic: A Fairy Tale for Grown-Ups) ಸಿನಿಮಾ ಭರ್ಜರಿ ಓಪನಿಂಗ್ ಪಡೆದುಕೊಂಡ ಬೆನ್ನಲ್ಲೇ ಇದೀಗ ಪೈರಸಿ ಕಾಟ ಎದುರಾಗಿದೆ. ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾದ ಸಿನಿಮಾ ಮೊದಲ ದಿನವೇ ₹150 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗಿದ್ದು, ಯಶ್ ಅಭಿಮಾನಿಗಳು ಸಂಭ್ರಮದಲ್ಲಿದ್ದರು. ಆದರೆ ಸಿನಿಮಾ ಬಿಡುಗಡೆಯಾದ ಎರಡನೇ ದಿನವೇ ಚಿತ್ರದ ಕೆಲವು ದೃಶ್ಯಗಳು ಮತ್ತು ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆರೋಪ ಕೇಳಿಬಂದಿದೆ. ಕೆಲ ಫೇಸ್ಬುಕ್ ಪುಟಗಳಲ್ಲಿ ಟಾಕ್ಸಿಕ್ ಚಿತ್ರದ ಅನಧಿಕೃತ ಕಂಟೆಂಟ್ ಹಂಚಿಕೊಳ್ಳಲಾಗಿದೆ ಎನ್ನಲಾಗುತ್ತಿದ್ದು, ಇದು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.














