Last Updated:
ಟಾಕ್ಸಿಕ್ ಸಿನಿಮಾದ ಒಟಿಟಿ ಬಿಡುಗಡೆ ಕುರಿತು ಹೊಸದೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.
ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಟಾಕ್ಸಿಕ್ (Toxic) ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಸದ್ಯ ಪ್ರದರ್ಶನ ಕಾಣುತ್ತಿದೆ. ಕೆಜಿಎಫ್: ಚಾಪ್ಟರ್ 2 (KGF: Chapter 2) ಬಳಿಕ ಯಶ್ (Yash) ಮುಂದಿನ ಸಿನಿಮಾ ಯಾವಾಗ ಬರುತ್ತದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹಲವು ವರ್ಷಗಳಿಂದ ಇತ್ತು. ಸುದೀರ್ಘ ಕಾಯುವಿಕೆಯ ಬಳಿಕ ಟಾಕ್ಸಿಕ್ ತೆರೆಗೆ ಬಂದಿದ್ದರೂ, ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ಸಿನಿಮಾದ ಒಟಿಟಿ ಬಿಡುಗಡೆ ಕುರಿತು ಹೊಸದೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.














