Last Updated:
ಸಾಮಾನ್ಯವಾಗಿ ಸಿನಿಮಾ ಪ್ರಚಾರ ಕಾರ್ಯಕ್ರಮಗಳಿಂದ ದೂರ ಉಳಿಯುವ ನಟಿ ನಯನತಾರಾ (Nayanthara) ಇದೀಗ ತಮ್ಮದೇ ನಿಯಮವನ್ನು ಮುರಿದು ಸುದ್ದಿಯಾಗಿದ್ದಾರೆ.
ಸಾಮಾನ್ಯವಾಗಿ ಸಿನಿಮಾ ಪ್ರಚಾರ ಕಾರ್ಯಕ್ರಮಗಳಿಂದ ದೂರ ಉಳಿಯುವ ನಟಿ ನಯನತಾರಾ (Nayanthara) ಇದೀಗ ತಮ್ಮದೇ ನಿಯಮವನ್ನು ಮುರಿದು ಸುದ್ದಿಯಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟ್ರೇಲರ್ (Toxic Trailer) ಬಿಡುಗಡೆ ಕಾರ್ಯಕ್ರಮದಲ್ಲಿ ನಯನತಾರಾ ಭಾಗವಹಿಸಿದ್ದು, ಎಲ್ಲರ ಗಮನ ಸೆಳೆದಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ವೇದಿಕೆ ಏರಿದ ನಯನತಾರಾ, ಯಶ್ ಅವರನ್ನು ಮುಕ್ತಕಂಠದಿಂದ ಹಾಡಿಹೊಗಳಿದ್ದಾರೆ . ಪ್ರಚಾರ ಕಾರ್ಯಕ್ರಮಗಳಿಗೆ ಸಾಮಾನ್ಯವಾಗಿ ಹಾಜರಾಗದ ನಟಿ, ಯಶ್ ಒಂದೇ ಒಂದು ಕರೆಗಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಹೇಳಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.














