Last Updated:
ಟಾಕ್ಸಿಕ್ ಬಿಡುಗಡೆಯಾಗುತ್ತಿರುವ ವಾರವೇ ಭಾರತೀಯ ಚಿತ್ರರಂಗದಲ್ಲಿ ಹಲವು ಘಟಾಟಾನುಘಟಿಗಳ ಸಿನಿಮಾಗಳು ತೆರೆಕಾಣಲಿದೆ.
ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ನಿರೀಕ್ಷೆ ಹುಟ್ಟಿಸಿರುವ ಸಿನಿಮಾಗಳ ಪೈಕಿ ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ‘ಟಾಕ್ಸಿಕ್’ (Toxic) ಸಿನಿಮಾ ಪ್ರಮುಖ ಸ್ಥಾನದಲ್ಲಿದೆ. ಹಲವು ಬಾರಿ ಬಿಡುಗಡೆ ದಿನಾಂಕ ಬದಲಾಗಿದ್ದರಿಂದ ಅಭಿಮಾನಿಗಳಲ್ಲಿ ಕೊಂಚ ನಿರಾಸೆ ಮೂಡಿಸಿದ್ದರೂ , ಇದೀಗ ಚಿತ್ರತಂಡ ಅಧಿಕೃತವಾಗಿ ಹೊಸ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ.
ಬಹುಕಾಲದಿಂದ ಟಾಕ್ಸಿಕ್ ಸಿನಿಮಾ ಯಾವಾಗ ಬಿಡುಗಡೆಯಾಗಲಿದೆ ಎಂಬ ಪ್ರಶ್ನೆ ಸಿನಿಪ್ರಿಯರಲ್ಲಿ ಕೇಳಿಬರುತ್ತಿತ್ತು. ಚಿತ್ರದ ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಹಾಗೂ ಇತರ ಕಾರಣಗಳಿಂದ ಬಿಡುಗಡೆ ದಿನಾಂಕ ಎರಡು ಬಾರಿ ಮುಂದೂಡಿಕೆಯಾಗಿತ್ತು. ಇದೀಗ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಚಿತ್ರತಂಡ, ಟಾಕ್ಸಿಕ್ ಚಿತ್ರವನ್ನು ಆಗಸ್ಟ್ 26, 2026ರಂದು ವಿಶ್ವದಾದ್ಯಂತ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
ಟಾಕ್ಸಿಕ್ ಚಿತ್ರವನ್ನು ಖ್ಯಾತ ನಿರ್ದೇಶಕಿ ಗೀತು ಮೋಹನ್ದಾಸ್ (Geetu Mohandas) ನಿರ್ದೇಶಿಸುತ್ತಿದ್ದಾರೆ. ಜೊತೆಗೆ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ವಿವಾನ್: ದಿ ಫೋರ್ಸ್ ಆಫ್ ಫಾರೆಸ್ಟ್ ಚಿತ್ರದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ನಾಯಕನಾಗಿ ನಟಿಸುತ್ತಿದ್ದಾರೆ. ವಿಶೇಷವೆಂದರೆ ಸಿದ್ಧಾರ್ಥ್ ಮಲ್ಹೋತ್ರಾ ಅವರ ಪತ್ನಿ ಕಿಯಾರಾ ಅಡ್ವಾಣಿ ಟಾಕ್ಸಿಕ್ ಚಿತ್ರದ ನಾಯಕಿಯಾಗಿದ್ದಾರೆ.
ಇದರಿಂದ ಬಾಕ್ಸ್ ಆಫೀಸ್ನಲ್ಲಿ ಗಂಡ, ಹೆಂಡತಿಯ ಸಿನಿಮಾಗಳ ನಡುವೆ ಕುತೂಹಲಕಾರಿ ಪೈಪೋಟಿ ನಡೆಯುವ ಸಾಧ್ಯತೆ ಇದೆ.
ಬಾಲಿವುಡ್ ಮಾತ್ರವಲ್ಲದೆ ದಕ್ಷಿಣ ಭಾರತದ ಚಿತ್ರರಂಗದಿಂದಲೂ ಟಾಕ್ಸಿಕ್ಗೆ ತೀವ್ರ ಪೈಪೋಟಿ ಎದುರಾಗಲಿದೆ. ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಪ್ಯಾರಡೈಸ್ ಸಿನಿಮಾ ಆಗಸ್ಟ್ 21ರಂದು ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಟೀಸರ್ ಮತ್ತು ಪೋಸ್ಟರ್ಗಳು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇದೆ.
ಪ್ರಸ್ತುತ ಹಲವು ದೊಡ್ಡ ಸಿನಿಮಾಗಳು ಒಂದೇ ಸಮಯದಲ್ಲಿ ಬಿಡುಗಡೆಯಾಗುತ್ತಿರುವುದರಿಂದ ಬಾಕ್ಸ್ ಆಫೀಸ್ ಲೆಕ್ಕಾಚಾರಗಳು ಕುತೂಹಲ ಕೆರಳಿಸಿವೆ. ಟಾಕ್ಸಿಕ್ ತನ್ನ ನಿಗದಿತ ದಿನಾಂಕದಲ್ಲೇ ಬಿಡುಗಡೆಯಾಗುತ್ತದೆಯೇ ಅಥವಾ ಮುಂದಿನ ದಿನಗಳಲ್ಲಿ ಯಾವುದೇ ಬದಲಾವಣೆಗಳು ಆಗುತ್ತವೆಯೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.
Bangalore [Bangalore],Bangalore,Karnataka













