Last Updated:
ಕರ್ನಾಟಕದ 10 ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಹೊಸ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಿಗೆ ಪ್ರತಿ ಉದ್ಯೋಗಕ್ಕೆ ತಿಂಗಳಿಗೆ ₹2,500ರಂತೆ ಎರಡು ವರ್ಷಗಳವರೆಗೆ ಪ್ರೋತ್ಸಾಹಧನ ನೀಡುವ ‘ಉದ್ಯೋಗ ನಿಧಿ’ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದು, ಸುಮಾರು 1 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ.
ಬೆಂಗಳೂರು: ಹಿಂದುಳಿದ ಪ್ರದೇಶಗಳಲ್ಲಿ ಕೈಗಾರಿಕೆ ಮತ್ತು ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಹೊಸ ‘ಉದ್ಯೋಗ ನಿಧಿ’ (Udyoga Nidhi) ಯೋಜನೆಯನ್ನು ಘೋಷಿಸಿದೆ. ರಾಜ್ಯದ 10 ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಹೊಸ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಿಗೆ, ಪ್ರತಿ ಹೊಸ ಉದ್ಯೋಗಕ್ಕೆ ತಿಂಗಳಿಗೆ ₹2,500ರಂತೆ ಗರಿಷ್ಠ ಎರಡು ವರ್ಷಗಳ ಕಾಲ ಪ್ರೋತ್ಸಾಹಧನ ನೀಡುವ ಉದ್ದೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ಸುಮಾರು 1 ಲಕ್ಷ ಹೊಸ ಉದ್ಯೋಗ (Jobs) ಸೃಷ್ಟಿಸುವ ಗುರಿ ಹೊಂದಲಾಗಿದೆ.














