Last Updated:
ಟೀಮ್ ಇಂಡಿಯಾದ ಮುಂಬರುವ ಐರ್ಲೆಂಡ್ ಪ್ರವಾಸ ಕ್ಯಾನ್ಸಲ್ ಆಗುವ ಸಾಧ್ಯತೆಯಿದೆ. 15 ವರ್ಷದ ವೈಭವ್ ಸೂರ್ಯವಂಶಿ ಅವರ ಆ ಒಂದು ಕನಸು ನನಸಾಗಲ್ವಾ? ಎಂಬ ಚರ್ಚೆ ಆಗುತ್ತಿದೆ.
ಈ ತಿಂಗಳ ಕೊನೆಯಲ್ಲಿ ಭಾರತ ತಂಡ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ಸಮಯದಲ್ಲಿ ಉಭಯ ತಂಡಗಳ ನಡುವೆ ಎರಡು ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಇದಕ್ಕಾಗಿ ಬಿಸಿಸಿಐ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಐರ್ಲೆಂಡ್ ಪ್ರವಾಸಕ್ಕಾಗಿ ಭಾರತ ಟಿ20 ತಂಡವು ತನ್ನ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಆದರೆ ಈಗ ಈ ಟಿ20 ಸರಣಿ ನಡೆಯುವ ಬಗ್ಗೆ ಅನುಮಾನಗಳಿವೆ. ಬೆಲ್ಫಾಸ್ಟ್ನಲ್ಲಿ ಭುಗಿಲೆದ್ದ ಹಿಂಸಾಚಾರವು ಭಾರತ-ಐರ್ಲೆಂಡ್ ಟಿ20 ಸರಣಿಯನ್ನು ಅಪಾಯಕ್ಕೆ ಸಿಲುಕಿಸಿದೆ.
ಜೂನ್ 26 ಮತ್ತು 28 ರಂದು ನಡೆಯಲಿರುವ ಟಿ20 ಪಂದ್ಯಗಳಿಗಾಗಿ ಬಿಸಿಸಿಐ ಬೆಲ್ಫಾಸ್ಟ್ನಲ್ಲಿ ಭುಗಿಲೆದ್ದ ಹಿಂಸಾಚಾರದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಐರ್ಲೆಂಡ್ನಲ್ಲಿ ಪರಿಸ್ಥಿತಿ ಸುಧಾರಿಸದಿದ್ದರೆ, ಪಂದ್ಯಗಳ ಸ್ಥಳವನ್ನು ಬದಲಾಯಿಸಬಹುದು ಅಥವಾ ಮುಂದೂಡಬಹುದು.
ಈ ಸರಣಿಯು 15 ವರ್ಷದ ವೈಭವ್ ಸೂರ್ಯವಂಶಿ ಅವರ ಐತಿಹಾಸಿಕ ಚೊಚ್ಚಲ ಪಂದ್ಯವಾಗುವ ನಿರೀಕ್ಷೆಯಿದೆ. ಸೂರ್ಯವಂಶಿ ಅವರು ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿಯುವ ರೆಡಿಯಾಗಿದ್ದಾರೆ. ಆದರೆ, ಇದಕ್ಕೂ ಮುನ್ನ ಇದಕ್ಕೂ ಮುನ್ನ ಐರ್ಲೆಂಡ್ನ ಬೆಲ್ಫಾಸ್ಟ್ನಲ್ಲಿ ಭುಗಿಲೆದ್ದ ಹಿಂಸಾಚಾರವು ವೈಭವ್ ಸೂರ್ಯವಂಶಿ ಪಾದರ್ಪಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ಐರ್ಲೆಂಡ್ ವಿರುದ್ಧದ ಟಿ20 ಸರಣಿಯು ವೈಭವ್ ಸೂರ್ಯವಂಶಿಗೆ ಒಂದು ಮೈಲಿಗಲ್ಲಾಗಬಹುದು. 15 ವರ್ಷದ ಸ್ಪೋಟಕ ಬ್ಯಾಟರ್ ವೈಭವ್ ಸೂರ್ಯವಂಶಿಗೆ ಅವಕಾಶ ಸಿಕ್ಕರೆ, ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದರ್ಪಣೆ ಮಾಡಿದ ಭಾರತದ ಅತ್ಯಂತ ಕಿರಿಯ ಆಟಗಾರನಾಗುತ್ತಾರೆ. ಪ್ರಸ್ತುತ ಸಚಿನ್ ತೆಂಡೂಲ್ಕರ್ ತಮ್ಮ 16ನೇ ವಯಸ್ಸಿನಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಮೂಲಕ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಈಗ, ಈ ದಾಖಲೆಯನ್ನು ಮುರಿಯುವ ನಿರೀಕ್ಷೆಯಲ್ಲಿರುವ ಸೂರ್ಯವಂಶಿಗೆ ಸರಣಿ ನಡೆಯುತ್ತದೆಯೋ ಇಲ್ಲವೋ ಎಂಬ ಎಂಬ ಟೆನ್ಷನ್ ಶುರುವಾಗಿದೆ.













