Last Updated:
ಟೀಮ್ ಇಂಡಿಯಾ ಜೂನ್ 26 ಮತ್ತು 28 ರಂದು ಡಬ್ಲಿನ್‌ನಲ್ಲಿ ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ, ನಂತರ ಜುಲೈ 1 ರಿಂದ ಜುಲೈ 11 ರವರೆಗೆ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಸ್ಥಾನ ಪಡೆದುಕೊಂಡಿದ್ದಾರೆ.
ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಗಾಗಿ ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಭಾರತ ಟಿ20 ತಂಡವನ್ನು ಘೋಷಣೆ ಮಾಡಿದ್ದು, ಐಪಿಎಲ್ ಸೆನ್ಸೇಷನ್ 15 ವರ್ಷದ ವೈಭವ್ ಸೂರ್ಯವಂಶಿ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಶನಿವಾರ ಬಿಸಿಸಿಐ ಆಯ್ಕೆ ಸಮಿತಿ ಈ ಪ್ರವಾಸಗಳಿಗೆ ಭಾರತ ತಂಡವನ್ನು ಘೋಷಣೆ ಮಾಡಿದ್ದು, ಕೆಲವು ಅಚ್ಚರಿ ಬದಲಾವಣೆಗಳು ಸಂಭವಿಸಿವೆ. ಫೆಬ್ರವರಿಯಲ್ಲಿ ಭಾರತ ತಂಡವನ್ನು ವಿಶ್ವಚಾಂಪಿಯನ್ ಪಟ್ಟಕ್ಕೇರಿಸಿದ್ದ ಸೂರ್ಯಕುಮಾರ್ ಯಾದವ್ ತಂಡದಿಂದಲೇ ಹೊರಬಿದ್ದಿದ್ದಾರೆ. ಮುಂಬೈ ತಂಡದ ಯುವ ಆಟಗಾರ ತಿಲಕ್ ವರ್ಮಾಗೆ ಉಪನಾಯಕತ್ವ ನೀಡಲಾಗಿದೆ. ಶುಭ್ಮನ್ ಗಿಲ್ರನ್ನು ಟಿ20 ತಂಡಕ್ಕೆ ಪರಿಗಣಿಸಲಾಗಿಲ್ಲ.
ಟೀಮ್ ಇಂಡಿಯಾ ಜೂನ್ 26 ಮತ್ತು 28 ರಂದು ಡಬ್ಲಿನ್‌ನಲ್ಲಿ ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ, ನಂತರ ಜುಲೈ 1 ರಿಂದ ಜುಲೈ 11 ರವರೆಗೆ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಸ್ಥಾನ ಪಡೆದುಕೊಂಡಿದ್ದಾರೆ.
ಭಾರತ ತಂಡಕ್ಕೆ ಆಯ್ಕೆಯಾಗುವ ಮೂಲಕ ಬಿಹಾರದ 15 ವರ್ಷದ ಸ್ಫೋಟಕ ಆಟಗಾರ ವೈಭವ್ ಸೂರ್ಯವಂಶಿ 36 ವರ್ಷಗಳ ವಿಶ್ವದಾಖಲೆಯನ್ನು ಬ್ರೇಕ್ ಮಾಡಿದ್ದಾರೆ. ಈ ಮೂಲಕ ಭಾರತ ತಂಡಕ್ಕೆ ಆಯ್ಕೆಯಾದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವದಾಖಲೆ ನಿರ್ಮಿಸಿದ್ದಾರೆ. ವೈಭವ್ ಸೂರ್ಯವಂಶಿ 15 ವರ್ಷ, 70 ದಿನಗಳಿಗೆ ಟೀಮ್ ಇಂಡಿಯಾಗೆ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮೊದಲು ಈ ದಾಖಲೆ ಭಾರತ ತಂಡದ ಲೆಜೆಂಡರಿ ಪ್ಲೇಯರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಇದೀಗ ಆ ದಾಖಲೆ ವೈಭವ್ ಪಾಲಾಗಿದೆ. ಸಚಿನ್ 1989ರಲ್ಲಿ ತಮ್ಮ 16 ವರ್ಷ, 205 ದಿನಗಳಿದ್ದಾಗ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು.
ಬಿಹಾರದ 15 ವರ್ಷದ ವೈಭವ್ ಸೂರ್ಯವಂಶಿ ತಮ್ಮ ಅಸಾಧಾರಣ ಪ್ರದರ್ಶನದಿಂದ ಕ್ರಿಕೆಟ್ ಲೋಕವನ್ನೇ ಮೆಚ್ಚಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ ಅಂಡರ್-19 ವಿಶ್ವಕಪ್‌ನಲ್ಲಿ ಭಾರತದ ಯಶಸ್ಸಿನಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ ಫೈನಲ್ನಲ್ಲಿ 175 ರನ್ಗಳಿಸಿ ‘ಸರಣಿ ಶ್ರೇಷ್ಠ ಆಟಗಾರ’ ಪ್ರಶಸ್ತಿಯನ್ನು ಗೆದ್ದಿದ್ದರು. 2026 ರ ಐಪಿಎಲ್ ಋತುವಿನಲ್ಲಿ ಅವರು ಆ ವೇಗವನ್ನು ಕಾಯ್ದುಕೊಂಡು ಅಬ್ಬರಿಸಿದರು. ರಾಜಸ್ಥಾನ ರಾಯಲ್ಸ್ ಪರ ಆರಂಭಿಕ ಆಟಗಾರನಾಗಿ ಆಡಿದ ಅವರು 16 ಪಂದ್ಯಗಳಲ್ಲಿ 776 ರನ್ ಗಳಿಸಿ ಆರೆಂಜ್ ಕ್ಯಾಪ್ ಪಡೆದರು. 237.30 ರ ಸ್ಟ್ರೈಕ್ ರೇಟ್‌ನೊಂದಿಗೆ, ವೈಭವ್ 72 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಇದು ಒಂದೇ ಟಿ20 ಸರಣಿಯಲ್ಲಿ ಆಟಗಾರನೊಬ್ಬ ಸಿಡಿಸಿದ ಅತ್ಯಧಿಕ ಸಿಕ್ಸರ್‌ಗಳಾಗಿವೆ.
ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತು ಪ್ಯಾಟ್ ಕಮ್ಮಿನ್ಸ್‌ನಂತಹ ಸ್ಟಾರ್ ಆಟಗಾರರು ವೈಭವ್ ಅವರ ಬ್ಯಾಟಿಂಗ್‌ನಿಂದ ಆಕರ್ಷಿತರಾಗಿದ್ದಾರೆ ಮತ್ತು ಅವರನ್ನು ಭಾರತೀಯ ತಂಡದಲ್ಲಿ ಸೇರಿಸಿಕೊಳ್ಳಬೇಕೆಂದು ಸೂಚಿಸಿದ್ದರು. ವೈಭವ್ ಭಾರತಕ್ಕಾಗಿ ಪಾದಾರ್ಪಣೆ ಮಾಡಿದರೆ, ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಆಡಿದ ಅತ್ಯಂತ ಕಿರಿಯ ಆಟಗಾರರಾಗುತ್ತಾರೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಮತ್ತು ಅದೇ ವರ್ಷ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಆಯೋಜಿಸಲಿರುವ ಟಿ 20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಆಯ್ಕೆ ಸಮಿತಿ ತಂಡವನ್ನು ಆಯ್ಕೆ ಮಾಡಿದೆ.
ಭಾರತದ ಟಿ 20 ನಾಯಕ ಸೂರ್ಯಕುಮಾರ್ ಯಾದವ್ ಕಳಪೆ ಫಾರ್ಮ್ ನಿಂದಾಗಿ ತಂಡದಿಂದ ಕೈಬಿಡಲಾಗಿದೆ. ಕಳೆದ 18 ತಿಂಗಳುಗಳಿಂದ ಅವರು ರನ್ ಗಳಿಸಲು ಹೆಣಗಾಡುತ್ತಿದ್ದಾರೆ. ಅವರ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಹೊಸ ಟಿ 20 ನಾಯಕರನ್ನಾಗಿ ನೇಮಿಸಲಾಗಿದೆ. ಸೂರ್ಯ ಮಾರ್ಚ್‌ನಲ್ಲಿ ಭಾರತವನ್ನು ಟಿ20 ವಿಶ್ವಕಪ್ ಗೆಲ್ಲಿಸಿದ್ದ, ಸೂರ್ಯಕುಮಾರ್ ನಾಯಕತ್ವದ ಜೊತೆಗೆ ತಂಡದಿಂದಲೂ ಹೊರಬೀಳಲಿದ್ದಾರೆ ಎಂದು ವರದಿ ತಿಳಿಸಿವೆ. ಸೂರ್ಯಕುಮಾರ್ ವಿಶ್ವಕಪ್‌ನಲ್ಲಿ 9 ಇನ್ನಿಂಗ್ಸ್‌ನಲ್ಲಿ 242 ರನ್ (ಸ್ಟ್ರೈಕ್ ರೇಟ್ 136.72) ಮತ್ತು ಐಪಿಎಲ್ 2026ರಲ್ಲಿ 13 ಇನ್ನಿಂಗ್ಸ್‌ನಲ್ಲಿ ಕೇವಲ 270 ರನ್ (ಸರಾಸರಿ 20.76) ಗಳಿಸಿದ್ದಾರೆ. ಇದೇ ಕಾರಣದಿಂದ 35 ವರ್ಷದ ಸೂರ್ಯಕುಮಾರ್ ಅವರನ್ನು ತಂಡದಿಂದಲೇ ಹೊರಗಿಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೀ), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೀ), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್













