Karnataka
oi-Gururaj S

ಬೆಂಗಳೂರು, ಜೂನ್ 27: ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕ ಸಂಪರ್ಕಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗೆ ಚಾಲನೆ ಸಿಕ್ಕಿದೆ. ಕರ್ನಾಟಕದ 2ನೇ ವಂದೇ ಭಾರತ್ ರೈಲು ಇದಾಗಿದ್ದು, ಬೆಂಗಳೂರು-ಧಾರವಾಡ ನಡುವೆ ಮಂಗಳವಾರ ಹೊರತುಪಡಿಸಿ ವಾರದ ಉಳಿದ ಎಲ್ಲಾ ದಿನ ಸಂಚಾರ ನಡೆಸುತ್ತದೆ.
ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ರೈಲು ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಹೊರಡಲಿದೆ. ಸದ್ಯ ಈ ರೈಲಿಗೆ ಯಶವಂತಪುರ, ದಾವಣಗೆರೆ ಮತ್ತು ಎಸ್ಎಸ್ಆರ್ ಹುಬ್ಬಳ್ಳಿ ಮೂರು ನಿಲುಗಡೆ ಇದೆ. ರೈಲು ಪ್ರಯಾಣಿಕರು ಈ ರೈಲಿಗೆ ಹೆಚ್ಚಿನ ನಿಲುಗಡೆ ಬೇಕು ಎಂದು ಮನವಿ ಮಾಡಿದ್ದಾರೆ.

ಈಗಾಗಲೇ ಚಿತ್ರದುರ್ಗದ ಸಂಸದ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣ ಸ್ವಾಮಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರಿನಲ್ಲಿ ನಿಲುಗಡೆ ಕೋರಿ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಸಕಾರಾತ್ಮವಾದ ಸ್ಟಂದನೆಯೂ ಸಿಕ್ಕಿದೆ. ಆದರೆ ಅಧಿಕೃತ ಆದೇಶ ಇನ್ನೂ ಆಗಬೇಕಿದೆ.
6 ನಿಲುಗಡೆಗೆ ಕೋರಿಕೆ; ಬೆಂಗಳೂರು-ಧಾರವಾಡ ನಡುವಿನ ರೈಲು ಯಶವಂತಪುರ, ದಾವಣಗೆರೆಯಲ್ಲಿ 2 ನಿಮಿಷ ಮತ್ತು ಹುಬ್ಬಳ್ಳಿಯಲ್ಲಿ 5 ನಿಮಿಷ ನಿಲುಗಡೆ ಹೊಂದಿದೆ. ಮೂರು ನಿಲುಗಡೆ ಮಾತ್ರ ಇರುವುದರಿಂದ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಲಿದೆ ಎಂದು ರೈಲು ಪ್ರಯಾಣಿಕರು ಹೇಳಿದ್ದಾರೆ.
ತುಮಕೂರು, ಬೀರೂರು ಮತ್ತು ಹಾವೇರಿಯಲ್ಲಿ ತಲಾ 2 ನಿಮಿಷ ರೈಲು ನಿಲುಗಡೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ. ಬೆಂಗಳೂರು೦-ತುಮಕೂರು ನಡುವಿನ ಹೆಚ್ಚಿನ ಪ್ರಯಾಣಿಕರು ವಂದೇ ಭಾರತ್ ದರ ಹೆಚ್ಚಾದ ಕಾರಣ ಪ್ರಯಾಣಿಸುವುದಿಲ್ಲ. ಆದರೆ ತುಮಕೂರಿನಿಂದ ಹುಬ್ಬಳ್ಳಿ-ಧಾರವಾಡಕ್ಕೆ ಹೋಗುವ ಜನರಿಗೆ ಅನುಕೂಲವಾಗಲಿದೆ ಎಂದು ಪ್ರಯಾಣಿಕರು ಇಲಾಖೆ ಗಮನ ಸೆಳೆದಿದ್ದಾರೆ.
ಹಾವೇರಿ ಕಡೆಯಿಂದ ಬೆಂಗಳೂರು, ತುಮಕೂರ ಕಡೆ ಹೆಚ್ಚು ಪ್ರಯಾಣಿಕರು ಸಂಚಾರ ನಡೆಸುತ್ತಾರೆ. ಹಾವೇರಿಯಲ್ಲಿ ನಿಲುಗಡೆ ನೀಡಿದರೆ ಅವರಿಗೆ ಅನುಕೂಲವಾಗಲಿದೆ. ಬೀರೂರು ಸಹ ಮಲೆನಾಡು ಸಂಪರ್ಕಿಸುವ ಪ್ರಮುಖ ಜಂಕ್ಷನ್ ಆಗಿದೆ. ವಂದೇ ಭಾರತ್ ರೈಲು ಅಲ್ಲಿ ನಿಲುಗಡೆಗೊಂಡರೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜನರಿಗೆ ಸಹಾಯಕವಾಗಲಿದೆ ಎಂದು ಅಂದಾಜಿಸಲಾಗಿದೆ.
English summary
Railway passengers demand for the 6 stop for the Bengaluru Dharwad via Hubballi Vande Bharat express train. Now train has stop at Yeshwanthpur, Davanagere and Hubballi.
Story first published: Tuesday, June 27, 2023, 10:55 [IST]