Vijay: ನೂತನ ಸಿಎಂ ಡಿ.ಕೆ. ಶಿವಕುಮಾರ್‌ ಗೆ ಅಭಿನಂದನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್! | | ACTPnews

ವಿಜಯ್, DK


Last Updated:

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯ್, DK
ವಿಜಯ್, DK

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ವಿಜಯ್ (Joseph Vijay) , ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಕೆ. ಶಿವಕುಮಾರ್ ಅವರಿಗೆ ನನ್ನ ಹೃತ್ತೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಕಾರ್ಯಕ್ರಮ ಈಗಾಗಲೇ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದು, ವಿವಿಧ ರಾಜ್ಯಗಳ ರಾಜಕೀಯ ನಾಯಕರು, ಗಣ್ಯರು ಹಾಗೂ ಪ್ರಮುಖ ವ್ಯಕ್ತಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಈ ನಡುವೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಅವರ ಅಭಿನಂದನೆ ವಿಶೇಷವಾಗಿ ಎಲ್ಲರ ಗಮನ ಸೆಳೆದಿದೆ.

ಜೋಸೆಫ್ ವಿಜಯ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೂ ಆಹ್ವಾನ ಕಳುಹಿಸಲಾಗಿತ್ತು ಎನ್ನಲಾಗಿದೆ. ವಿಜಯ್ ಅವರ ರಾಜಕೀಯ ಪಯಣ ದೇಶದಾದ್ಯಂತ ಗಮನ ಸೆಳೆದಿರುವುದರಿಂದ, ಅವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆಯೇ ಎಂಬ ಕುತೂಹಲ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಹೀಗಾಗಿ, ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ವಿಜಯ್ ಭಾಗವಹಿಸುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಹಲವರಲ್ಲಿತ್ತು.ಆದರೆ ನಿರೀಕ್ಷೆಗಳ ನಡುವೆಯೇ ಜೋಸೆಫ್ ವಿಜಯ್ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ. ಆದರೂ ನಂತರ ಸಾಮಾಜಿಕ ಜಾಲತಾಣದ ಮೂಲಕ ಅವರು ಶುಭಾಶಯ ಕೋರಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports