Last Updated:
Vijay: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯನ್ನು ಅಮಾನವೀಯ ಮತ್ತು ಕ್ಷಮಿಸಲಾಗದ ಅಪರಾಧ ಎಂದು ಕರೆದಿದ್ದಾರೆ. ಜೊತೆಗೆ ಅಂತಹ ಅಪರಾಧಗಳನ್ನು ಸಮಾಜ ಎಂದಿಗೂ ಸಹಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ತಮಿಳುನಾಡಿನ (Tamil Nadu) ಕೊಯಮತ್ತೂರಿನ (Coimbatore) ಸುಲೂರು ಪ್ರದೇಶದ ಕಣ್ಣಂಪಾಳಯಂ ಸರೋವರದ ಬಳಿ ನಡೆದ 10 ವರ್ಷದ ಬಾಲಕಿ ಕಿಡ್ನಾಪ್ ಹಾಗೂ ಕೊಲೆ ಘಟನೆ ಎಲ್ಲೆಡೆ ಭಾರಿ ಕೋಲಾಹಲ ಸೃಷ್ಟಿಸಿದೆ. ಜೊತೆಗೆ ಈಗಾಗಲೇ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಬಾಲಕಿ ಕಿಡ್ನ್ಯಾಪ್ ಮತ್ತು ಕೊಲೆ ವಿಚಾರವಾಗಿ ಸಿಎಂ ವಿಜಯ್ (CM Vijay) ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಇನ್ನು ಈ ಘಟನೆಯ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯನ್ನು ಅಮಾನವೀಯ ಮತ್ತು ಕ್ಷಮಿಸಲಾಗದ ಅಪರಾಧ ಎಂದು ಕರೆದಿದ್ದಾರೆ. ಜೊತೆಗೆ ಅಂತಹ ಅಪರಾಧಗಳನ್ನು ಸಮಾಜ ಎಂದಿಗೂ ಸಹಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
கோயம்புத்தூரில் நேற்று 10 வயது சிறுமிக்கு நிகழ்ந்த கொடூர சம்பவம் மிகுந்த வேதனையையும், அதிர்ச்சியையும் அளிக்கிறது. இத்தகைய மனிதநேயமற்ற மற்றும் மன்னிக்க முடியாத குற்றச் செயல்கள் நமது சமூகத்தில் ஒருபோதும் ஏற்றுக்கொள்ளப்பட முடியாது.
தங்கள் உயிருக்குயிரான குழந்தையைப் பிரிந்து வாடும்…— CMOTamilNadu (@CMOTamilnadu) May 23, 2026
“ನಿನ್ನೆ ಕೊಯಮತ್ತೂರಿನಲ್ಲಿ 10 ವರ್ಷದ ಬಾಲಕಿ ಮೇಲೆ ಸಂಭವಿಸಿದ ಭಯಾನಕ ಘಟನೆ ತೀವ್ರ ನೋವಿನಿಂದ ಕೂಡಿದೆ ಮತ್ತು ಆಘಾತಕಾರಿಯಾಗಿದೆ. ಇಂತಹ ಅಮಾನವೀಯ ಮತ್ತು ಕ್ಷಮಿಸಲಾಗದ ಅಪರಾಧಗಳನ್ನು ನಮ್ಮ ಸಮಾಜದಲ್ಲಿ ಎಂದಿಗೂ ಒಪ್ಪಿಕೊಳ್ಳಲಾಗುವುದಿಲ್ಲ” ಎಂದು ಪೋಸ್ಟ್ ಮಾಡಿದ್ದಾರೆ.
ಜೊತೆಗೆ ತಮ್ಮ ಅಮೂಲ್ಯ ಮಗುವನ್ನು ಕಳೆದುಕೊಂಡ ದುಃಖದಲ್ಲಿರುವ ಬಾಲಕಿಯ ಕುಟುಂಬದೊಂದಿಗೆ ನಾನು ನನ್ನ ಆಳವಾದ ಸಂತಾಪವನ್ನು ಹಂಚಿಕೊಳ್ಳುತ್ತೇನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯ ಬಗ್ಗೆ ಸಮಗ್ರ ಮತ್ತು ತ್ವರಿತ ತನಿಖೆ ನಡೆಸಿ ತಕ್ಷಣವೇ ಆರೋಪಪಟ್ಟಿ ಸಲ್ಲಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ.
ಕೊಯಮತ್ತೂರು ಜಿಲ್ಲೆಯ ಸುಲೂರಿನಲ್ಲಿ ಐದನೇ ತರಗತಿ ವಿದ್ಯಾರ್ಥಿನಿ ಮೇ 21 ರಂದು ಹತ್ತಿರದ ದಿನಸಿ ಅಂಗಡಿಗೆ ತೆರಳಿದ್ದಳು. ಆದ್ರೆ ಅಂಗಡಿಗೆ ಬಾಲಕಿ ಎಷ್ಟೊತ್ತಾದರೂ ಮನೆಗೆ ಬರಲೇ ಇಲ್ಲ . ಪೋಷಕರ ತೀವ್ರ ಹುಡುಕಾಟದ ನಂತರವೂ ಆಕೆಯ ಸುಳಿವು ಪತ್ತೆಯಾಗಿರಲಿಲ್ಲ. ಪೊಲೀಸರು ವ್ಯಾಪಕ ಶೋಧ ನಡೆಸಿದ ಬಳಿಕ , ಶುಕ್ರವಾರ ಸುಲೂರಿನ ಕಣ್ಣಂಪಾಳಯಂ ಕೆರೆಯ ದಂಡೆಯ ಬಳಿ ಬಾಲಕಿ ಶವ ಪತ್ತೆಯಾಗಿತ್ತು.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ (33) ಮತ್ತು ಮೋಹನ್ ರಾಜ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಜೊತೆಗೆ ಬಾಲಕಿ ಸಾವಿಗೆ ಮುನ್ನ ಲೈಂಗಿಕ ದೌರ್ಜನ್ಯ ನಡೆಸಲಾಗಿದೆಯೇ ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿದಿದೆ.
Bangalore [Bangalore],Bangalore,Karnataka













