Last Updated:
Modi-Vijay Meet: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ, ಸರ್ಕಾರ ರಚಿಸಿದ ನಂತರ ನಟ ಹಾಗೂ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು, ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನ, ಸತತ 12 ವರ್ಷಗಳ ತರುವಾಯ ಭೇಟಿಯಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ.
ನವದೆಹಲಿ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಭರ್ಜರಿ ಜಯ ದಾಖಲಿಸಿ, ಸರ್ಕಾರ ರಚಿಸಿದ ನಂತರ ನಟ ಹಾಗೂ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (C. Joseph Vijay) ಅವರು, ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನ (Narendra Modi), ಸತತ 12 ವರ್ಷಗಳ ತರುವಾಯ ಭೇಟಿಯಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ.
ಇತ್ತೀಚೆಗಷ್ಟೇ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ನಟ ಹಾಗೂ ರಾಜಕಾರಣಿ ಸಿ. ಜೋಸೆಫ್ ವಿಜಯ್ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ವಿಜಯ್ ಅವರ ಮೊದಲ ದೆಹಲಿ ಪ್ರವಾಸ ಇದಾಗಿದ್ದು, ಪ್ರಧಾನಿ ಮೋದಿಯವರೊಂದಿಗಿನ ಈ ಭೇಟಿಯು ದೇಶದ ರಾಜಕೀಯ ವಲಯದಲ್ಲಿ ಚರ್ಚೆಗಳಿಗೆ ಕಾರಣವಾಗಿದೆ. ಯಾಕಂದ್ರೆ, ಮೋದಿ-ವಿಜಯ್ ಭೇಟಿ ವೇಳೆ ಇಬ್ಬರು ನಾಯಕರು ಸುಮಾರು 25 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಮುಂದುವರೆದು, ತಮಿಳುನಾಡು ಮುಖ್ಯಮಂತ್ರಿಯಾಗಿ ತಮ್ಮ ಮೊದಲ ದೆಹಲಿ ಭೇಟಿಯಲ್ಲಿ ಸಿಎಂ ವಿಜಯ್ ಅವರು ಪ್ರಧಾನಿ ಮೋದಿಯವರಿಗೆ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಮುಖ ಮನವಿ ಪತ್ರವನ್ನು ಸಲ್ಲಿಸಿದರು ಎನ್ನಲಾಗಿದೆ.
ಪ್ರಧಾನಿ ಮೋದಿ ಮತ್ತು ವಿಜಯ್ ಅವರ ನಡುವೆ ಬರೋಬ್ಬರಿ 12 ವರ್ಷಗಳ ನಂತರ ನಡೆಯುತ್ತಿರುವ ಮೊದಲ ಅಧಿಕೃತ ಭೇಟಿ ಇದಾಗಿದೆ. ಈ ಹಿಂದೆ 2014 ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಇವರಿಬ್ಬರು ಭೇಟಿಯಾಗಿದ್ದರು. ಆಗ ನರೇಂದ್ರ ಮೋದಿಯವರು ಪ್ರಧಾನಿ ಅಭ್ಯರ್ಥಿಯಾಗಿದ್ದರು ಮತ್ತು ವಿಜಯ್ ಅವರು ಕೇವಲ ಸಿನಿಮಾ ಸೂಪರ್ಸ್ಟಾರ್ ಆಗಿದ್ದರು. ಆದರೆ, 12 ವರ್ಷಗಳ ನಂತರ ಇಂದು ಇಬ್ಬರೂ ನಾಯಕರು ಭೇಟಿಯಾದಾಗ ಇಬ್ಬರ ಜವಾಬ್ದಾರಿಗಳೂ ಸಂಪೂರ್ಣ ಬದಲಾಗಿವೆ. ಮೋದಿ ಅವರು ದೇಶವನ್ನು ಮುನ್ನಡೆಸುತ್ತಿದ್ದರೆ, ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಪಕ್ಷದ ಮೂಲಕ ತಮಿಳುನಾಡಿನ ಮುಖ್ಯಮಂತ್ರಿಯಾಗಿ ತಮಿಳು ರಾಜ್ಯವನ್ನ ಮುನ್ನಡೆಸುತ್ತಿದ್ದಾರೆ.
2014 ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಇವರಿಬ್ಬರು ಭೇಟಿಯಾಗಿದ್ದ ಮೋದಿ-ವಿಜಯ್
ಏತನ್ಮಧ್ಯೆ, ತಮಿಳುನಾಡಿನಲ್ಲಿ ದ್ರಾವಿಡ ರಾಜಕಾರಣದ ಹಿನ್ನೆಲೆಯಿರುವ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಪರ್ಯಾಯವಾಗಿ ವಿಜಯ್ ಹೊಸ ಶಕ್ತಿಯಾಗಿ ಹೊರಹೊಮ್ಮಿದ್ದಾರೆ. ಪ್ರಧಾನಿ ಮೋದಿಯವರೊಂದಿಗಿನ ಇವರ ಭೇಟಿಯು ಕೇವಲ ಆಡಳಿತಾತ್ಮಕವಾಗಿರದೆ, ಭವಿಷ್ಯದ ರಾಜಕೀಯ ಸಮೀಕರಣಗಳ ದೃಷ್ಟಿಯಿಂದಲೂ ಅತ್ಯಂತ ಮಹತ್ವದ್ದಾಗಿದೆ.
ಮುಂದುವರೆದು, ತಮ್ಮ ದೆಹಲಿ ಪ್ರವಾಸದಲ್ಲಿ ಸಿಎಂ ವಿಜಯ್ ಅವರು ಪ್ರಧಾನಿಯೊಂದಿಗೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
New Delhi,Delhi













