Vijay- Sangeetha: ಮೂಕಾಂಬಿಕೆ ದರ್ಶನದ ಬಳಿಕ ಮನಸ್ಸು ಬದಲಿಸಿದ್ರಾ ಸಿಎಂ ವಿಜಯ್‌? ಪತ್ನಿ ಸಂಗೀತಾ ಜೊತೆ ಸಂಧಾನ? | | ACTPnews

ಸಿಎಂ ವಿಜಯ್‌?


Last Updated:

ಜೂನ್ 22 ರಂದು ವಿಜಯ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಮತ್ತಷ್ಟು ಕುತೂಹಲ ಹೆಚ್ಚಾಗಿದೆ. ಈ ವಿಶೇಷ ದಿನದಂದು ದಂಪತಿಗಳು ಒಟ್ಟಾಗಿ ಕಾಣಿಸಿಕೊಳ್ಳಬಹುದು ಅಥವಾ ತಮ್ಮ ಸಂಬಂಧದ ಬಗ್ಗೆ ಮಹತ್ವದ ಘೋಷಣೆ ಮಾಡಬಹುದು ಎಂಬ ಊಹಾಪೋಹಗಳು ಅಭಿಮಾನಿಗಳ ವಲಯದಲ್ಲಿ ಹರಿದಾಡುತ್ತಿವೆ.

ಸಿಎಂ ವಿಜಯ್‌?
ಸಿಎಂ ವಿಜಯ್‌?

ತಮಿಳು ಚಿತ್ರರಂಗದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅತೀ ಹೆಚ್ಚು ಚರ್ಚೆಯಾಗುತ್ತಿರುವ ವಿಷ್ಯಯಗಳಲ್ಲಿ ನಟ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ (Vijay) ಮತ್ತು ಅವರ ಪತ್ನಿ ಸಂಗೀತಾ (Sangeeta) ಅವರ ವೈವಾಹಿಕ ಜೀವನದ ಬೆಳವಣಿಗೆಗಳು ಪ್ರಮುಖವಾಗಿವೆ. 27 ವರ್ಷಗಳ ದಾಂಪತ್ಯ ಜೀವನವನ್ನು ಅಂತ್ಯಗೊಳಿಸಲು ವಿಚ್ಛೇದನ ಅರ್ಜಿ ಸಲ್ಲಿಸಲಾಗಿದೆ ಎಂಬ ವರದಿಗಳು ಹೊರಬಂದ ಬಳಿಕ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿರುವುದಾಗಿ ಹೇಳಲಾಗುತ್ತಿದ್ದು, ದಂಪತಿಗಳ ನಡುವೆ ಮರುಸಂಧಾನದ ಪ್ರಯತ್ನಗಳು ನಡೆಯುತ್ತಿವೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿವೆ.

ವಿಚ್ಛೇದನ ಪ್ರಕರಣಕ್ಕೆ ಹೊಸ ತಿರುವು

ವಿಜಯ್ ಮತ್ತು ಸಂಗೀತಾ ಸ್ವರ್ಣಲಿಂಗಂ ನಡುವಿನ ವಿಚ್ಛೇದನ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ ಎಂದು ಹೇಳಲಾಗ್ತಿದೆ. ಕಳೆದ ಫೆಬ್ರವರಿಯಲ್ಲಿ ಸಂಗೀತಾ ನ್ಯಾಯಾಲಯದ ಮೊರೆ ಹೋಗಿದ್ದು, ತಮ್ಮ ದಾಂಪತ್ಯ ಜೀವನದಲ್ಲಿ ಉಂಟಾದ ಭಿನ್ನಾಭಿಪ್ರಾಯಗಳ ಕುರಿತು ಹಲವು ಆರೋಪಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂಬ ವರದಿಗಳು ಹರಿದಾಡಿದ್ದವು. ಈ ಬೆಳವಣಿಗೆ ತಮಿಳು ಚಿತ್ರರಂಗ ಮಾತ್ರವಲ್ಲದೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಇದೀಗ ವಿಜಯ್ ಅವರ ಕುಟುಂಬ ಸದಸ್ಯರು, ವಿಶೇಷವಾಗಿ ತಾಯಿ ಶೋಭಾ ಚಂದ್ರಶೇಖರ್, ದಂಪತಿಗಳ ನಡುವಿನ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಕುಟುಂಬದ ಹಿರಿಯರು ಮತ್ತು ಆಪ್ತರು ಇಬ್ಬರನ್ನೂ ಮತ್ತೆ ಒಂದಾಗಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ಈ ಬೆಳವಣಿಗೆಯಿಂದಾಗಿ ವಿಚ್ಛೇದನದ ಸಾಧ್ಯತೆ ಕಡಿಮೆಯಾಗಬಹುದು ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿದೆ.

ಇತ್ತೀಚೆಗೆ ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಉಡುಪಿಗೆ ಭೇಟಿ ನೀಡಿದ ವಿಜಯ್, ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದಲ್ಲಿ ಸುಮಾರು ಅರ್ಧ ಗಂಟೆ ಕಾಲ ಕಳೆದ ಅವರು ದೇವಿಗೆ ವಿಶೇಷ ಕಾಣಿಕೆಯನ್ನೂ ಅರ್ಪಿಸಿದರು. ಈ ಭೇಟಿ ನಂತರ ಅವರ ವೈಯಕ್ತಿಕ ಜೀವನದ ಬಗ್ಗೆ ಹೊಸ ಚರ್ಚೆಗಳು ಆರಂಭವಾಗಿವೆ.

ವರದಿಗಳ ಪ್ರಕಾರ, ಲಂಡನ್‌ನಲ್ಲಿ ವಾಸಿಸುತ್ತಿದ್ದ ಸಂಗೀತಾ ಸ್ವರ್ಣಲಿಂಗಂ ತಮ್ಮ ತಾಯಿ ಮತ್ತು ಕುಟುಂಬದ ಹಿರಿಯರ ಸಲಹೆಯ ಮೇರೆಗೆ ಚೆನ್ನೈನಲ್ಲಿರುವ ಕುಟುಂಬ ನಿವಾಸಕ್ಕೆ ಮರಳಿದ್ದಾರೆ ಎನ್ನಲಾಗಿದೆ. ದಂಪತಿಗಳು ಒಂದೇ ಮನೆಯಲ್ಲಿ ಸಮಯ ಕಳೆಯುತ್ತಿದ್ದಾರೆ ಎಂಬ ಮಾಹಿತಿಯೂ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ಸಂಗೀತಾ ಸಲ್ಲಿಸಿದ್ದರೆಂದು ಹೇಳಲಾಗುತ್ತಿರುವ ಅರ್ಜಿಯಲ್ಲಿ, 2021ರಿಂದ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳು ಆರಂಭವಾದವು ಎಂದು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಈ ಬೆಳವಣಿಗೆಗಳು ಕುಟುಂಬದೊಳಗೆ ಅಸಮಾಧಾನಕ್ಕೆ ಕಾರಣವಾಗಿದ್ದು, ಅದರ ಪರಿಣಾಮವಾಗಿ ವಿಚ್ಛೇದನದ ಹಂತಕ್ಕೆ ಪರಿಸ್ಥಿತಿ ತಲುಪಿದೆ ಎಂಬ ಮಾತುಗಳು ಹರಿದಾಡಿದ್ದವು. ಆದರೆ ಈ ಆರೋಪಗಳ ಬಗ್ಗೆ ವಿಜಯ್ ಅವರಿಂದ ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ಹೊರಬಂದಿಲ್ಲ.

ಹಾಗೆಯೇ  ಈ ಎಲ್ಲ ಮಾಹಿತಿಗಳು ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆಗಳ ಆಧಾರದ ಮೇಲೆ ಹರಿದಾಡುತ್ತಿದ್ದು, ದಂಪತಿಗಳಿಂದ ಅಥವಾ ಕುಟುಂಬ ಸದಸ್ಯರಿಂದ ಅಧಿಕೃತ ಘೋಷಣೆ ಹೊರಬಂದಿಲ್ಲ .



Source link

Leave a Reply

Your email address will not be published. Required fields are marked *