Vijay-Udhayanidhi Stalin: ತ್ರಿಶಾ ಕುರಿತು ವಿವಾದಾತ್ಮಕ ಹೇಳಿಕೆ ಕೇಸ್​​​ನಲ್ಲಿ ಉದಯನಿಧಿಗೆ ಬಿಗ್ ರಿಲೀಫ್​; ಬಂಧನವಾದ ಕೆಲವೇ ಗಂಟೆಗಳಲ್ಲಿ ಮಾಜಿ ಸಿಎಂ ಪುತ್ರ ರಿಲೀಸ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಉದಯನಿಧಿ ಸ್ಟಾಲಿನ್


Last Updated:

ನಟಿ ತ್ರಿಶಾ ಕೃಷ್ಣನ್ (Trisha Krishnan) ಕುರಿತು ಕಾವೇರಿ ನೀರು ಹಂಚಿಕೆ ಪ್ರತಿಭಟನೆಯ ವೇಳೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ ಉದಯನಿಧಿ ಸ್ಟಾಲಿನ್ ಅವರಿಗೆ ಬಂಧನವಾದ ಕೆಲವೇ ಗಂಟೆಗಳಲ್ಲಿ ಜಾಮೀನು ದೊರೆತಿದೆ.

ಉದಯನಿಧಿ ಸ್ಟಾಲಿನ್
ಉದಯನಿಧಿ ಸ್ಟಾಲಿನ್

ತಮಿಳುನಾಡಿನ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಬಂಧನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ನಟಿ ತ್ರಿಶಾ ಕೃಷ್ಣನ್ (Trisha Krishnan) ಕುರಿತು ಕಾವೇರಿ ನೀರು ಹಂಚಿಕೆ ಪ್ರತಿಭಟನೆಯ ವೇಳೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ ಉದಯನಿಧಿ ಸ್ಟಾಲಿನ್ ಅವರಿಗೆ ಬಂಧನವಾದ ಕೆಲವೇ ಗಂಟೆಗಳಲ್ಲಿ ಜಾಮೀನು ದೊರೆತಿದೆ.

ಕಾವೇರಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ತಂಜಾವೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ಉದಯನಿಧಿ ಸ್ಟಾಲಿನ್, ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ವೇಳೆ ಸಭೆಯಲ್ಲಿದ್ದ ಕೆಲವರು ನಟಿ ತ್ರಿಶಾ ಅವರ ಹೆಸರನ್ನು ಕೂಗಿದಾಗ, ಅದಕ್ಕೆ ಪ್ರತಿಕ್ರಿಯೆಯಾಗಿ ಉದಯನಿಧಿ ದ್ವಂದ್ವಾರ್ಥದ ಮಾತುಗಳನ್ನು ಆಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತು. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಯಿತು.

ಈ ಹೇಳಿಕೆಗೆ ಸಂಬಂಧಿಸಿದಂತೆ ಪೊಲೀಸರು ಉದಯನಿಧಿ ವಿರುದ್ಧ ವಿವಿಧ ಗಂಭೀರ ಆರೋಪಗಳಡಿ ಪ್ರಕರಣ ದಾಖಲಿಸಿದರು. ಮಹಿಳೆಯ ಮಾನಹಾನಿಗೆ ಯತ್ನ, ಅಶ್ಲೀಲ ಪದಗಳ ಬಳಕೆ, ಸೇರಿದಂತೆ ಒಟ್ಟು ಒಂಬತ್ತು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನ್ಯಾಯಾಲಯದಲ್ಲಿ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್, ಉದಯನಿಧಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಉದ್ದೇಶ ಪೊಲೀಸರಿಗೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಕೇವಲ ವಿಚಾರಣೆ ನಡೆಸುವುದು ಮಾತ್ರವೇ ಪೊಲೀಸರ ಉದ್ದೇಶವಾಗಿದ್ದು, ವಿಚಾರಣೆ ಪೂರ್ಣಗೊಂಡ ಬಳಿಕ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು.

ಉದಯನಿಧಿ ಸ್ಟಾಲಿನ್ ಬಂಧನದ ಸುದ್ದಿ ಹೊರಬೀಳುತ್ತಿದ್ದಂತೆಯೇ ಡಿಎಂಕೆ ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದರು. ತಮ್ಮ ನಾಯಕರ ಬಂಧನ ರಾಜಕೀಯ ಪ್ರೇರಿತ ಕ್ರಮ ಎಂದು ಆರೋಪಿಸಿದ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಉದಯನಿಧಿ ಸ್ಟಾಲಿನ್ ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರೂ, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆ ಮುಂದುವರಿಯಲಿದೆ. ಈ ಪ್ರಕರಣ ತಮಿಳುನಾಡಿನ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದರ ಮೇಲೆ ರಾಜಕೀಯ ವಲಯದ ಗಮನ ನೆಟ್ಟಿದೆ.

ಕನ್ನಡ ಸುದ್ದಿ/ ನ್ಯೂಸ್/ದೇಶ-ವಿದೇಶ/

Vijay-Udhayanidhi Stalin: ತ್ರಿಶಾ ಕುರಿತು ವಿವಾದಾತ್ಮಕ ಹೇಳಿಕೆ ಕೇಸ್​​​ನಲ್ಲಿ ಉದಯನಿಧಿಗೆ ಬಿಗ್ ರಿಲೀಫ್​; ಬಂಧನವಾದ ಕೆಲವೇ ಗಂಟೆಗಳಲ್ಲಿ ಮಾಜಿ ಸಿಎಂ ಪುತ್ರ ರಿಲೀಸ್



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed